ವಿಜಯಪುರ ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು

|

Updated on: Apr 18, 2023 | 11:51 AM

ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.

ವಿಜಯಪುರ ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣು
ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ
Follow us on

ವಿಜಯಪುರ: ನಗರದ ಟೂರಿಸ್ಟ್ ಲಾಡ್ಜ್​ನಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾದ ಘಟನೆ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಇಂಚಗೇರಿ ನಿವಾಸಿ ನಾಗಪ್ಪ ಹಂಚಿನಾಳ (40) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಬಹುದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನಂತೆ. ಸ್ಥಳಕ್ಕೆ ಗಾಂಧಿಚೌಕ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಕಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

ಬಾವಿಯಲ್ಲಿ ಈಜಲು ಹೋಗಿ ಯುವಕ ಸಾವು

ವಿಜಯಪುರ: ಜಿಲ್ಲೆ ಕೊಲ್ಹಾರ ಪಟ್ಟಣದ ಮಸೂತಿ ಗ್ರಾಮದಲ್ಲಿ ಈಜಲು ಹೋಗಿದ್ದ ರವಿ ಛಲವಾದಿ (18) ಎಂಬಾತ ಈಜಲು ಬಾರದೇ ಸಾವನ್ನಪ್ಪಿದ ಘಟನೆ ನಡೆದಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿ ಯುವಕನ ಮೃತದೇಹವನ್ನ ಹೊರಕ್ಕೆ ತೆಗೆದಿದ್ದಾರೆ. ಕೂಡಗಿ ಎನ್‌ಟಿಪಿಸಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆ

ಬೆಂಗಳೂರು: ವಸಂತನಗರ ಸಮೀಪದಲ್ಲಿ ಸಂಪೂರ್ಣ ಸುಟ್ಟು  ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಎರಡು ಅಥವಾ ಮೂರು ದಿನದ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಕುಮಾರಸ್ವಾಮಿ ಲೇಔಟ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಕೊಲೆ ಮಾಡಿ ಶವಕ್ಕೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.
ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಪಾರ್ಟ್​ಮೆಂಟ್​ನಿಂದ ಜಿಗಿದು ಸೋನು ಪೂಜಾರಿ ಆತ್ಮಹತ್ಯೆ

ಬೆಂಗಳೂರು: ಅಪಾರ್ಟ್​​ಮೆಂಟ್​ನಿಂದ ಜಿಗಿದು ಸೋನು ಪೂಜಾರಿ ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸೋನು ಪತಿ ನಿರಂಜನ್, ಕೆಲಸದ ನಿಮಿತ್ತ ಮುಂಬೈಗೆ ಹೋಗಿದ್ದರು. ಈ ವೇಳೆ ಮನೆಯಲ್ಲಿ ಒಂಟಿಯಾಗಿಯೇ ಇದ್ದ ಸೋನು ಪೂಜಾರಿ ಮುಂಜಾನೆ 8 ಗಂಟೆಗೆ ಅಪಾರ್ಟ್​ಮೆಂಟ್​ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:49 am, Tue, 18 April 23