AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ

ಸ್ಮಶಾನದಲ್ಲಿ ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ‌ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.

ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ: ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ
ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ವಿಶಿಷ್ಟ ಆಚರಣೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 10, 2022 | 10:11 AM

Share

ವಿಜಯಪುರ: ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ (rain) ಯಾಗುತ್ತಿದ್ದು, ಜನ ಜೀವನ ಅಸ್ಥವ್ಯಸ್ತವಾಗಿದೆ. ಜೊತೆಗೆ ಹಲವೆಡೆ ರೆಡ್​, ಯೊಲ್ಲೋ, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಆದರೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಒಂದು ಹನಿ ಮಳೆ ಕೂಡ ಆಗಿಲ್ಲ. ಮಳೆಯಿಲ್ಲದೆ ಜನರು ಕಂಗಾಲಾಗಿದ್ದು, ವಿಶಿಷ್ಟ ಆಚರಣೆ ಮೂಲಕ ದೇವರ ಮೊರೆ ಹೋಗುತ್ತಿದ್ದಾರೆ. ಸದ್ಯ ಮಳೆಗಾಗಿ ವಿಜಯಪುರ ‌ಜಿಲ್ಲೆಯಲ್ಲಿ ಜನರು ವಿಶಿಷ್ಟ ಆಚರಣೆಯೊಂದು ಮಾಡುತ್ತಿದ್ದು, ಈ‌ ಬಗ್ಗೆ ಕೇಳಿದರೆ ಆಶ್ಚರ್ಯವಾಗೋದು‌ ಗ್ಯಾರಂಟಿ. ಸ್ಮಶಾನದಲ್ಲಿ ಹೂತಿದ್ದ ಶವ ಮೇಲೆ ನೀರು ಹಾಕಿ‌ ಮಳೆಗಾಗಿ ಪ್ರಾರ್ಥನೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವರಹಿಪ್ಪರಗಿ ‌ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ. ಕಳೆದ ಶುಕ್ರವಾರ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ಮಶಾನದಲ್ಲಿ ‌ಶವ ಹೂತಿರೋ ಸ್ಥಳದಲ್ಲಿ ಎರಡು‌ ಅಡಿ ಮಣ್ಣು ತೆಗೆದು ಗ್ರಾಮಸ್ಥರು ನೀರು ಹಾಕಿದರು.

ಇದನ್ನೂ ಓದಿ; Karnataka Rains Live Updates: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ: ರಾಜ್ಯಕ್ಕೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು

ಟ್ಯಾಂಕರ್ ಮೂಲಕ ಶವದ ಮೇಲೆ ಜನರು ನೀರು ಹಾಕಿದ್ದು, ಕೆಲ ಶವಗಳು ಬಾಯಿ ಬಿಟ್ಟಿರುತ್ತವೆ. ಅಂಥ‌ ಶವಗಳ ಬಾಯಿಗೆ ‌ನೀರು ಹಾಕೋ ಪದ್ದತಿ ಇದಾಗಿದೆ. ಎಲ್ಲೆಲ್ಲಿ ‌ಶವ ಬಾಯಿ ಬಿಟ್ಟಿವೆ ಎಂದು‌ ವ್ಯಕ್ತಿ ಹೇಳಿದ್ದು, ಕೆಲ ಶವಗಳ ಹೂತಿರೋ ಸ್ಥಳದಲ್ಲಿ ಎರಡು ಅಡಿ ಅಗೆದು  ಸ್ಥಳಿಯರು ನೀರು ಹಾಕಿದರು. ಆಧುನಿಕ‌ ಕಾಲದಲ್ಲೂ ಇಂಥ ಆಚರಣೆಗಳನ್ನು ಜನರು ನಂಬುತ್ತಿದ್ದಾರೆ. ಕಾಕತಾಳಿಯವೆಂಬಂತೆ ಶವದ ಬಾಯಿಗೆ ನೀರು ಹಾಕಿದ ಬಳಿಕ ಜಿಟಿಜಿಟಿ‌ ಮಳೆ ಆರಂಭವಾಯಿತು.

ಇದನ್ನೂ ಓದಿ: Karnataka Rain: ಇಂದಿನಿಂದ ಎರಡು ದಿನ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ರೆಡ್ ಅಲರ್ಟ್ ಘೋಷಣೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ:

ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಭಾರೀ ಮಳೆ ಯಾಗುವ ಮುನ್ಸೂಚನೆ ಇದ್ದು, ಕರಾವಳಿ ಭಾಗಗಳಲ್ಲಿ ಅತ್ಯಂತ ಭಾರೀ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ ಉತ್ತರ ಒಳಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಕಲಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳಭಾಗದಲ್ಲೂ ಅತಿಹೆಚ್ಚು ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಹಾಸನ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!