AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ

ಉತ್ತರಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರೋ ಮಹಾಕುಂಭ ಮೇಳಕ್ಕೆ ತೆರೆ ಬೀಳುತ್ತಿದೆ. 45 ಕೋಟಿ ಜನರು ಪುಣ್ಯ ಸ್ನಾನ ಮಾಡಿದರು ಎನ್ನಲಾಗುತ್ತಿದೆ. ಇನ್ನು ಪ್ರಯಾಗ್ ರಾಜ್ ಗೆ ಹೋಗುವಾಗ ಅನೇಕ ತೊಂದರೆಗಳು ಟ್ರಾಫಿಕ್ ಜಾಮ್ ಸಮಸ್ಯೆ ಅಪಘಾತವಾಗಿ ಅನೇಕರ ಸಾವು ನೋವು ಘಟನೆಗಳು ನಡೆದಿವೆ. ಇಷ್ಟರ ಮದ್ಯೆ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭ ಮೇಳ 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವನನ್ನು ವಾಪಸ್ ಮನೆಗೆ ಕರೆ ತರುವುದಕ್ಕೆ ಕಾರಣವಾಗಿದೆ.

24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ
ರಮೇಶ ಚೌಧರಿ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 25, 2025 | 11:17 PM

Share

ವಿಜಯಪುರ, (ಫೆಬ್ರವರಿ 25): ಕಳೆದ 24 ವರ್ಷಗಳಿಂದ ಮನೆ ಬಿಟ್ಟು ಹೋಗಿದ್ದವ ಮತ್ತೆ ವಾಪಸ್​ ಮನೆ ಸೇರಿದ್ದಾನೆ. ಇದಕ್ಕೆ ಕಾರಣ ಮಹಾ ಕುಂಭಮೇಳ. ಹೌದು..ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದು, ಇದೀಗ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಾದಲ್ಲಿ ಪತ್ತೆಯಾಗಿದ್ದಾರೆ. 24 ವರ್ಷಗಳಿಂದ ನಾಪತ್ತೆಯಾಗಿದ್ದ ರಮೇಶ ಚೌಧರಿ ಕುಂಭಮೇಳಕ್ಕೆ ತೆರಳಿದ್ದವರಿಗೆ ಕಾಶಿಯಲ್ಲಿ ಸಿಕ್ಕಿದ್ದಾರೆ. ಇನ್ನು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು 24 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಮೇಶ ಚೌಧರಿ ಬಳೂತಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ರಮೇಶ ಚೌಧರಿ ಕಳೆದ 2001 ರಲ್ಲಿ ಮನೆಯಿಂದ ನಾಪತ್ತೆಯಾಗಿದ್ದ. ಆತನ ಗುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಇನ್ನು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರೋ ಕುಂಭ ಮೇಳಕ್ಕೆ ಕೊಲ್ಹಾರ ತಾಲೂಕಿನ ಬಳೂತಿ ಗ್ರಾಮದ ಮಲ್ಲನಗೌಡ ಪಾಟೀಲ ಹಾಗೂ ಇತರರು ತೆರಳಿದ್ದರು. ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ಥಾನ ಮಾಡಿದ ರಮೇಶ ಹಾಗೂ ತಂಡ ಕಾಶಿಗೆ ತೆರಳಿತ್ತು. ಕಾಶಿಯಲ್ಲಿ ಮಲ್ಲನಗೌಡ ಕಣ್ಣಿಗೆ ರಮೇಶ ಸನ್ಯಾಸಿಯ ಬಟ್ಟೆಯಲ್ಲಿ ಕಂಡಿದ್ದಾರೆ. ರಮೇಶನನ್ನು ಕಂಡ ಮಲ್ಲನಗೌಡ ಈತ ನಮ್ಮೂರಿನವ ಎಂದು ನೋಡಿ ಮಾತನಾಡಿಸಿದ್ದಾರೆ. ಆಗ ಆತ ಬಳೂತಿ ಗ್ರಾಮದ ರಮೇಶ ಚೌಧರಿ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: 7 ವರ್ಷಗಳ ಹಿಂದೆ ನಾಪತ್ತೆಯಾಗಿ ಮಹಾರಾಷ್ಟ್ರದ ರಾಯಗಢದಲ್ಲಿದ್ದ ಬಾದಾಮಿ ಮಹಿಳೆ ಸಿನಿಮೀಯ ರೀತಿಯಲ್ಲಿ ವಾಪಸ್

ಕನ್ನಡದಲ್ಲಿ ರಮೇಶನನ್ನು ಮಾತನಾಡಿಸಿ ವಿಚಾರಿಸಿದ್ದಾರೆ. ರಮೇಶ ತನ್ನೆಲ್ಲಾ ಮಾಹಿತಿ ನೀಡಿದ್ದಾರೆ. ಮನೆ ಬಿಟ್ಟು ಊರೂರು ಅಲೆಯುತ್ತಾ ಬಿಹಾರದ ಪಾಟ್ನಾಕ್ಕೆ ಹೋಗಿ ಅಲ್ಲಿ ಡಾಂಬರೀಕರಣ ಕೆಲಸ ಮಾಡುತ್ತಾ ಕಾಲ ಕಳೆದೆ. ಊರು ನೆನಪು ಆಗುತ್ತಿತ್ತು. ಊರಿಗೆ ಹೋಗಬೇಕೆಂದು ಒಂದೆರಡು ಬಾರಿ ಪ್ರಯತ್ನ ಮಾಡಿ ಬಿಟ್ಟೆ. ನನಗೆ ನನ್ನದೆಯಾದ ಒತ್ತಡವಿತ್ತು ಎಂದೆಲ್ಲಾ ಹೇಳಿದ್ಧಾನೆ. ತನ್ನ ಪೂರ್ವಾಪರ, ತಂದೆ, ತಾಯಿ ಹಾಗೂ ಕುಟುಂಬಸ್ಥರ ಹೆಸರುಗಳನ್ನು ಕೂಡ ಹೇಳಿದ್ದಾನೆ.

ಆಗ ಮಲ್ಲನಗೌಡ ಬಳೂತಿಯಲ್ಲಿರೋ ರಮೇಶನ ಸಂಬಂಧಿಕರಿಗೆ ವಿಡಿಯೋ ಕಾಲ ಮಾಡಿ ರಮೇಶ ಸಿಕ್ಕಿದ್ದರ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ ಕಾಶಿಯಿಂದಲೇ ಕಟುಂಬಸ್ಥರೊಂದಿಗೆ ಮಾತನಾಡಿದ್ದಾನೆ. ನಂತರ ಮಲ್ಲನಗೌಡ ಅವರು ರಮೇಶನನ್ನು ತಮ್ಮ ವಾಹನದಲ್ಲಿ ವಾಪಸ್ ಬಳೂತಿ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾರೆ. ಸುಮಾರು 24 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ರಮೇಶ ಚೌಧರಿ ಬಳೂತಿ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಆತನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಆತನನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?