ವಿಜಯಪುರ: ಗೋಳಗುಮ್ಮಟ ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ
ವಿಜಯಪುರ ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಜಯಪುರ: ನಗರದ ವಿಶ್ವವಿಖ್ಯಾತ ಗೋಳಗುಮ್ಮಟದ (Gol Gumbaz) ಒಳಗಿನ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ. ಗೋಳಗುಮ್ಮಟದ 7ನೇ ಮಹಡಿಯ ಪಿಸುಗುಡೋ ಗ್ಯಾಲರಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂದಾಜು 23 ವರ್ಷದ ಅಪರಿಚಿತ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಮೃತ ಯುವತಿಯ ಹೆಸರು ವಿಳಾಸ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಅಪರಿಚಿತ ಯುವತಿಯ ಶವವನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾರವಾರ: ಮೂರು ತಿಂಗಳ ಹಸುಗೂಸನ್ನು ಬಿಟ್ಟು ಹೋದ ಕಟುಕ ಪೋಷಕರು
ಉತ್ತರ ಕನ್ನಡ: ಬಾಲಕರ ಬಾಲಮಂದಿರ ಆವರಣದಲ್ಲಿ ಮೂರು ತಿಂಗಳ ಹಸುಗೂಸನ್ನು ಕಟುಕ ಪೋಷಕರು ಬಿಟ್ಟು ಹೋಗಿರುವ ಘಟನೆ ಶಿರಸಿಯಲ್ಲಿ ನಡೆದಿದೆ. ನಿನ್ನೆ (ಡಿ.20) ರಾತ್ರಿ ಬಾಲಮಂದಿರ ಆವರಣದಲ್ಲಿ ಪತ್ತೆಯಾಗಿದೆ.
ರಾತ್ರಿ ಮಗು ಅಳುವ ಧ್ವನಿ ಕೇಳಿದ ಬಾಲಮಂದಿರದ ಮೇಲ್ವಿಚಾರಕರು ಪರಿಶೀಲಿಸಿದಾಗ ಪತ್ತೆಯಾಗಿದೆ. ಬಾಲಮಂದಿರದ ಹೊರಗೆ ಸುರಕ್ಷಿತವಾದ ರೀತಿಯಲ್ಲಿ ಮಗುವನ್ನು ಇಡಲಾಗಿತ್ತು. ಬಾಲಮಂದಿರದ ಮೇಲ್ವಿಚಾರಕರು ತಕ್ಷಣ ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮಕ್ಕಳ ಸುರಕ್ಷಾ ಸಮಿತಿ ಅಧ್ಯಕ್ಷೆ ಅನಿತಾ ಪರ್ವತೇಕರ್ ಮತ್ತು ಸದಸ್ಯೆ ಅಂಜನಾ ಭಟ್, ಪೋಲೀಸ್ ಇಲಾಖೆಗೆ ಮಾಹಿತಿ ನೀಡಿ ಅವರ ಸಮಕ್ಷಮದಲ್ಲಿ ಬಾಲಮಂದಿರದೊಳಗೆ ಅಧಿಕಾರಿಗಳು ಕರೆದೊಯ್ದಿದ್ದಾರೆ. ಬಳಿಕ ಮಗುವಿಗೆ ಹಾಲು ಕುಡಿಸಿ, ಆರೋಗ್ಯ ತಪಾಸಣೆಗೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ