ವಿಜಯಪುರ: ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಪಾರ ಪ್ರಮಾಣದ ಬೆಳೆ ಹಾನಿ

ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಬರೊಬ್ಬರಿ 200 ಎಕರೆಗೂ ಹೆಚ್ಚು ಜಮೀನಿಗೆ ಕಾಲುವೆಯ ನೀರು ನುಗ್ಗಿದೆ. ಈ ಹಿನ್ನಲೆ ಅಪಾರ ಪ್ರಮಾಣದ ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿಗೊಳಗಾಗಿದ್ದು, ಕಳಪೆ ಕಾಮಗಾರಿಯೇ ಕಾಲುವೆ ಒಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.

ವಿಜಯಪುರ: ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು; ಅಪಾರ ಪ್ರಮಾಣದ ಬೆಳೆ ಹಾನಿ
ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 09, 2023 | 1:09 PM

ವಿಜಯಪುರ, ಆ.9: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹರಿಂದ್ರಾಳ ಗ್ರಾಮದ ಬಳಿ ಆಲಮಟ್ಟಿ(Almatti) ಎಡದಂಡೆ ಮುಖ್ಯ ಕಾಲುವೆ ಒಡೆದು ಬರೊಬ್ಬರಿ 200 ಎಕರೆಗೂ ಹೆಚ್ಚು ಜಮೀನಿಗೆ ಕಾಲುವೆಯ ನೀರು ನುಗ್ಗಿದೆ. ಈ ಹಿನ್ನಲೆ ಅಪಾರ ಪ್ರಮಾಣದ ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ಹಾನಿಗೊಳಗಾಗಿದ್ದು, ಸ್ಥಳಕ್ಕೆ ಕೆಬಿಜೆಎನ್ಎಲ್(Krishna Bhagya Jala Nigam Ltd) ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಕಾಲುವೆ ಒಡೆದ ಸ್ಥಳದಲ್ಲಿ, ಕೂಡಲೇ ಜೆಸಿಬಿ ಮೂಲಕ ಮಣ್ಣು ಹಾಕಿ ಮುಚ್ಚಲು ವಿಫಲ ಯತ್ನ ನಡೆಸಿದ್ದಾರೆ. ಇನ್ನು ಕಳಪೆ ಕಾಮಗಾರಿಯೇ ಕಾಲುವೆ ಒಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದು, ಕೂಡಲೇ ಕಾಲುವೆ ದುರಸ್ಥಿ ಮಾಡಿ, ಜಮೀನಿಗೆ ನೀರು ನುಗ್ಗಿ ಹಾಳಾದ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.

2018 ರಲ್ಲೂ ಕಾಲುವೆ ಒಡೆದು 300 ಎಕರೆ ಜಮೀನಿಗೆ ನುಗ್ಗಿದ್ದ ನೀರು

ಹೌದು, ಇಂತಹ ಘಟನೆ ಇದೇ ಮೊದಲಲ್ಲ. ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಲೂಟಗೇರಿ ಗ್ರಾಮದ ಬಳಿ 2018 ರ ಜುಲೈ 24 ರಂದು ಕಾಲುವೆ ಒಡೆದು 300 ಎಕರೆ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಗಳಿಗೆ ಹಾನಿಯಾಗಿತ್ತು. ಅಂದು ಆಲಮಟ್ಟಿ ಎಡದಂಡೆಯ ಮುಖ್ಯ ಕಾಲುವೆಗೆ ನೀರು ಬಿಡಲಾಗಿತ್ತು. ನೀರಿನ ಹರಿವು ಹೆಚ್ಚಾಗಿದ್ದರಿಂದ ಒಂದು ಬದಿಯ ದಂಡೆ ಒಡೆದು, ರೈತರ ಜಮೀನುಗಳಿಗೆ ನೀರು ನುಗ್ಗಿತ್ತು.

ಇದನ್ನೂ ಓದಿ:Uttara Kannada: ಕದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ಕಾಳಿ ನದಿಗೆ ನೀರು ಬಿಡುಗಡೆ, ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದ ಇಂದಿನ ‌ನೀರಿನ‌ ಮಟ್ಟ

ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ‌ ಬಳಿ ಕೃಷ್ಣಾ ನದಿಗೆ ನಿರ್ಮಾಣ ಮಾಡಿರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದ ಇಂದಿನ ‌ನೀರಿನ‌ ಮಟ್ಟ 519.55 ಮೀಟರ್ ಇದ್ದು, ಗರಿಷ್ಟ ಮಟ್ಟ :519.60 ಮೀಟರ್ ಇದೆ. ಇನ್ನು ಒಳಹರಿವು : 48,121 ಕ್ಯೂಸೆಕ್ ಹಾಗೂ ಹೊರ ಹರಿವು : 34,231 ಕ್ಯೂಸೆಕ್ ಇದೆ. 123 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂನಲ್ಲಿ ಇದೀಗ 122.132 ಟಿಎಂಸಿ ನೀರು ಸಂಗ್ರಹವಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us