ಬ್ಲ್ಯಾಕ್ ಮೇಲ್ ಮಾಡಿ ಯತ್ನಾಳ್ ಟಿಕೆಟ್ ಪಡೆದಿದ್ದಾರೆ: ಬಿಜೆಪಿ ನಾಯಕ ಗಂಭೀರ ಆರೋಪ
ವಿಜಯಪುರ ನಗರ ಕ್ಷೇತ್ರದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಟಿಕೆಟ್ ನೀಡಿದ ಹಿನ್ನೆಲೆ ಜಿಲ್ಲಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಯತ್ನಾಳ್ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಿಡಿಕಾರಿದ್ದಾರೆ.
ವಿಜಯಪುರ: ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿ ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ. ಆದ್ರೆ ಬಿಜೆಪಿ ಟಿಕೆಟ್ ಸಿಗುತ್ತೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದ ಹಲವರಿಗೆ ನಿರಾಸೆಯಾಗಿದೆ. ಹೀಗಾಗಿ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿ ವಲಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ವಿಜಯಪುರ ನಗರ ಕ್ಷೇತ್ರದಲ್ಲಿ ಬಂಡಾಯದ ಬಿಸಿ ತಟ್ಟಿದೆ.
ವಿಜಯಪುರ ನಗರ ಕ್ಷೇತ್ರದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಟಿಕೆಟ್ ನೀಡಿದ ಹಿನ್ನೆಲೆ ಜಿಲ್ಲಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಯತ್ನಾಳ್ ವಿರುದ್ಧ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಕಿಡಿಕಾರಿದ್ದಾರೆ. ಬಸನಗೌಡ ಯತ್ನಾಳ್ ರಾಜ್ಯ & ಹೈಕಮಾಂಡ್ ನಾಯಕರಿಗೆ ಬ್ಲ್ಯಾಕ್ಮೇಲ್ ಮಾಡಿ ಟಿಕೆಟ್ ಪಡೆದಿದ್ದಾರೆ ಎಂದು ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿ ಹಾಕೋದಾದರೆ ಬಬಲೇಶ್ವರದಲ್ಲಿ ಎಂಬಿ ಪಾಟೀಲ್ ವಿರುದ್ಧ ಯಾಕೆ ಪ್ರಬಲ ಅಭ್ಯರ್ಥಿ ಹಾಕಿಲ್ಲ. ಎಂ.ಬಿ.ಪಾಟೀಲ್ ‘ಕೈ’ ನಾಯಕ ಅಲ್ವಾ? ಯಾಕೆ ಕಟ್ಟಿಹಾಕಲಿಲ್ಲ. ಒಳ ಒಪ್ಪಂದ ಮಾಡಿಕೊಂಡಿದ್ದಾರೆಂದು ಪಟ್ಟಣಶೆಟ್ಟಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Karnataka Assembly Elections 2023: ವಿಧಾನ ಪರಿಷತ್ನಲ್ಲಿ ಬಿಜೆಪಿಗೆ ಹೊಡೆತ ಕೊಟ್ಟ ವಿಧಾನಸಭೆ ಚುನಾವಣೆ
ಮುಂದಿನ 2 ದಿನಗಳಲ್ಲಿ ಬಣಜಿಗ ಸಮಾಜದ ಮುಖಂಡರ ಸಭೆ ನಡೆಯಲಿದೆ. ಸಭೆಯಲ್ಲಿ ಸಮಾಜದ ಮುಖಂಡರು, ಬೆಂಬಲಿಗರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದರು. ಹಾಗೂ ಇದೇ ವೇಳೆ ಪಕ್ಷೇತರ ಅಥವಾ ಬೇರೆ ಪಕ್ಷದಿಂದ ಶಾಸಕ ಯತ್ನಾಳ್ ವಿರುದ್ಧ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:07 pm, Wed, 12 April 23