AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಡಿ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಗಲಾಟೆ; ಮಚ್ಚು, ಕೊಡಲಿಯಿಂದ ವ್ಯಕ್ತಿ ಮೇಲೆ ಹಲ್ಲೆ

ಮನೆಯ ಬಳಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಗಲಾಟೆಯಾಗಿದ್ದು, ಮಚ್ಚು ಹಾಗೂ ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಕಿರಣ ಗಜಕೊಶ ಹಲ್ಲೆಗೊಳಗಾದ ವ್ಯಕ್ತಿ.

ಗಾಡಿ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಗಲಾಟೆ; ಮಚ್ಚು, ಕೊಡಲಿಯಿಂದ ವ್ಯಕ್ತಿ ಮೇಲೆ ಹಲ್ಲೆ
ಪಾರ್ಕಿಂಗ್​ ಗಲಾಟೆ
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 1:57 PM

Share

ವಿಜಯಪುರ: ಮನೆಯ ಬಳಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಗಲಾಟೆಯಾಗಿದ್ದು, ಮಚ್ಚು ಹಾಗೂ ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಹೌದು ಮನೆಯ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಜಗಳವಾಗಿ ಕಿರಣ ಗಜಕೊಶ ಎಂಬ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಜಯಪುರ(Vijayapur)ನಗರದ ಟಕ್ಕೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಕಿರಣ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಸಯ್ಯ ಹಿರೇಮಠ, ಗೌರಮ್ಮ ಹಿರೇಮಠ, ಸಿದ್ದರಾಮಯ್ಯ ಹಿರೇಮಠ ಅವರಿಂದ ಮಚ್ಚು ಹಾಗೂ ಕೊಡಲಿಯಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಜೊತೆಗೆ ಹಲ್ಲೆ ಮಾಡಿರುವ ದೃಷ್ಯ ಸಿಸಿ ಕೆಮೆರಾದಲ್ಲಿ ಸೆರೆಯಾಗಿದ್ದು, ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಾಣೆಯಾಗಿದ್ದ ಮಹಿಳೆಯ ಕಾಲು, ಬೆನ್ಬು ಮೂಳೆ ಪತ್ತೆ

ಕೊಡಗು: ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಮೇ 17 ರ ರಾತ್ರಿ ಕಾಣೆಯಾಗಿದ್ದ ಮಹಿಳೆಯ ಕಾಲು, ಬೆನ್ನು, ಮೂಳೆ ಪತ್ತೆಯಾಗಿದ್ದು, ವನ್ಯಪ್ರಾಣಿ ಕೊಂದು ಭಕ್ಷಿಸಿರುವ ಶಂಕೆ ವ್ಯಕ್ತವಾಗಿದೆ. ಚೋಂದು (25) ಮೃತ ರ್ದುದೈವಿ. ಪರಿಶಿಷ್ಟ ಜನಾಂಗದ ಪಣಿಎರವರ ಚೋಂದು ಅವರ ಮನೆಯ ಸಮೀಪದ ಕಾಫಿ ತೋಟದಲ್ಲಿ ಕಾಲು ಬೆನ್ನು ಮೂಳೆ ಪತ್ತೆಯಾಗಿದೆ. ಮಹಿಳೆಯ ಕಾಲಿನಲ್ಲಿ ಪ್ರಾಣಿಯ ಕೂದಲು ಸಿಕ್ಕಿದೆ. ಇನ್ನು ಪ್ರಾಣಿಯ ಕೂದಲು ವಿಧಿವಿಜ್ಞಾನ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಶ್ರೀಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು; ಮುಗಿಲು ಮುಟ್ಟಿದ್ದ ಪೋಷಕರ ಆಕ್ರಂದನ

ಮೈಸೂರು: ಕಾವೇರಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತಲಕಾಡಿನ ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ. ಜಿಲ್ಲೆಯ ಟಿ. ನರಸೀಪುರ ತಾಲೂಕಿನ ತಲಕಾಡಿಗೆ ಈಜಲು ತೆರಳಿದ್ದ ಲೋಹಿತ್(15), ಯತೀಶ್(13) ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡರ ಪುತ್ರರು, ಸ್ನೇಹಿತರ ಜೊತೆ ಬೆಂಗಳೂರಿನಿಂದ ತಲಕಾಡಿಗೆ ಆಗಮಿಸಿದ್ದ ಬಾಲಕರು, ಈಜಲು ನದಿಗೆ ಇಳಿದಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ದುರಂತ ಅಂತ್ಯ ಕಂಡಿದ್ದಾರೆ. ಇನ್ನು ಅಲ್ಲೇ ಇದ್ದ ಅಂಬಿಗರಿಂದ 6 ಬಾಲಕರ ರಕ್ಷಣೆ ಮಾಡಲಾಗಿದೆ. ಮಕ್ಕಳ ಮೃತದೇಹ ಕಂಡು ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಈ ಕುರಿತು ತಲಕಾಡು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ