AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ; ಓರ್ವ ಮಹಿಳೆ ಸ್ಥಳದಲ್ಲೇ ಸಾವು

ಸಂಚಾರಿ ಪೊಲೀಸರು ಅಪಘಾತ ನಿಯಂತ್ರಣಕ್ಕೆ ಎಷ್ಟೇ ಕ್ರಮಕೈಗೊಂಡರು ಚಾಲಕನ ಅಜಾಗರೂಕತೆಯಿಂದ ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ. ಅದರಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ (Babaleshwar) ತಾಲೂಕಿನ ಮಧಬಾವಿ ಕ್ರಾಸ್​​ ಬಳಿ ಇಂದು ಗೂಡ್ಸ್​​ ವಾಹನ ಮತ್ತು ಕ್ರೂಸರ್​​ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ವಿಜಯಪುರ: ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ; ಓರ್ವ ಮಹಿಳೆ ಸ್ಥಳದಲ್ಲೇ ಸಾವು
ಬಬಲೇಶ್ವರ ಗೂಡ್ಸ್​​ ವಾಹನ, ಕ್ರೂಸರ್​​ ಮಧ್ಯೆ ಡಿಕ್ಕಿ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 08, 2024 | 7:09 PM

Share

ವಿಜಯಪುರ, ಫೆ.08: ಗೂಡ್ಸ್​​ ವಾಹನ ಮತ್ತು ಕ್ರೂಸರ್​​ ಮಧ್ಯೆ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ (Babaleshwar) ತಾಲೂಕಿನ ಮಧಬಾವಿ ಕ್ರಾಸ್​​ ಬಳಿ ನಡೆದಿದೆ. ಮಂಗಳೂರು ಗ್ರಾಮದ ಸುನಂದಾ ಹಾದಿಮನಿ (40) ಮೃತ ರ್ದುದೈವಿ. ಇನ್ನುಳಿದಂತೆ ಇತರರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ವಿಜಯಪುರ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರು ಡ್ರೈವಿಂಗ್ ಕಲಿಸಲು ಹೋಗಿ ಅಪಘಾತ; ಅದೃಷ್ಟವಶಾತ್ ಬಚಾವ್​​

ಬೆಂಗಳೂರು: ಕಾರು ಡ್ರೈವಿಂಗ್ ಕಲಿಸಲು ಹೋಗಿ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್​ಗಳಿಗೆ ಗುದ್ದಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಲ್​ಇ ಕಾನೂನು ಕಾಲೇಜು ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ವೇಳೆ ಬೇಕರಿ ಬಳಿ ನಿಂತಿದ್ದ 8 ಬೈಕ್​ಗಳು ಜಖಂ ಆಗಿವೆ. ಈ ಕುರಿತು ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ರೈಲು ಅಪಘಾತದಲ್ಲಿ ತಾಯಿ ಜೊತೆಗೆ ಕಾಲು ಕಳ್ಕೊಂಡ ಕರುವಿಗೆ ಕೃತಕ ಕಾಲು ಜೋಡಣೆ

ರೈತನ ಬೆಳೆಗೆ ಕಿಡಿಗೇಡಿಗಳಿಂದ ಬೆಂಕಿ

ಧಾರವಾಡ: ನಗರದ ಚರಂತಿಮಠ ಗಾರ್ಡನ್​​​ ಹತ್ತಿರದ ರೈತನ ಸೊಯಾಬಿನ್​​ ಬಣವೆಗೆ ಕಿಡಿಗೇಡಿಗಳು ಬೆಂಕಿ ಇಟ್ಟಿದ್ದಾರೆ. ಗಂಗನಗೌಡ ಪಾಟೀಲ್​​ ಎಂಬುವರಿಗೆ ಸೇರಿದ ಬಣವೆ ಇದಾಗಿದ್ದು, ಕಿಡಿಗೇಡಿಗಳ ಕೃತ್ಯದಿಂದ 2 ಲಕ್ಷಕ್ಕೂ ಅಧಿಕ ಹಣ ನಷ್ಟವಾಗಿದೆ. ಮೊದಲೇ ಬರಗಾಲದಿಂದ ಬೇಸತ್ತಿದ್ದ ರೈತ, ಇದೀಗ ಕಿಡಿಗೇಡಿಗಳು ಮಾಡಿದ ತಪ್ಪಿನಿಂದ ಕಂಗಾಲಾಗಿದ್ದಾನೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಘಟನೆ ಶಹರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Thu, 8 February 24

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ