AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಯತ್ನಾಳ್ ಒತ್ತಾಯ

ಇತ್ತೀಚೆಗೆ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ಆಗ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಈಗ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡುವಂತೆ ಯತ್ನಾಳ್ ಒತ್ತಾಯಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ಯತ್ನಾಳ್ ಒತ್ತಾಯ
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on:Dec 16, 2023 | 10:47 AM

Share

ವಿಜಯಪುರ, ಡಿ.16: ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ವಿಚಾರವಾಗಿ ಮೈಸೂರಿನ ವಿಮಾನ ನಿಲ್ದಾಣಕ್ಕೆ (Mysuru Airport) ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎಕ್ಸ್​(ಟ್ವಿಟರ್​)ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಳಗಾವಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ನಿರ್ಣಯ ಅಂಗೀಕಾರ

ಇತ್ತೀಚೆಗೆ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂಬಿ ಪಾಟೀಲ್ ಅವರು ಮಂಡಿಸಿದರು. ಈ ನಿರ್ಣಯವು ಅಂಗೀಕಾರ ಪಡೆಯಿತು.

ಅಲ್ಲದೆ, ಸದನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದ್ದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದಾಗ ವಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್​(ಟ್ವಿಟರ್​)ನಲ್ಲಿ ಟ್ವೀಟ್ ಮಾಡುವ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 am, Sat, 16 December 23

Follow Us
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ