ವಿಜಯಪುರ, ಡಿ.16: ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ವಿಚಾರವಾಗಿ ಮೈಸೂರಿನ ವಿಮಾನ ನಿಲ್ದಾಣಕ್ಕೆ (Mysuru Airport) ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಹೆಸರಿಡಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಒತ್ತಾಯಿಸಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಬಸನಗೌಡ ಪಾಟೀಲ್ ಯತ್ನಾಳ್ ಅವರು ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.
ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು.
ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು.
— Basanagouda R Patil (Yatnal) (@BasanagoudaBJP) December 15, 2023
ಇದನ್ನೂ ಓದಿ: ಬೆಳಗಾವಿ, ಶಿವಮೊಗ್ಗ ಸೇರಿದಂತೆ ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ನಿರ್ಣಯ ಅಂಗೀಕಾರ
ಇತ್ತೀಚೆಗೆ ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಮಾಡಲಾಗಿತ್ತು. ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂಬಿ ಪಾಟೀಲ್ ಅವರು ಮಂಡಿಸಿದರು. ಈ ನಿರ್ಣಯವು ಅಂಗೀಕಾರ ಪಡೆಯಿತು.
ಅಲ್ಲದೆ, ಸದನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದ್ದರು. ಇದೇ ವೇಳೆ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಅವರು ಒತ್ತಾಯಿಸಿದಾಗ ವಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್(ಟ್ವಿಟರ್)ನಲ್ಲಿ ಟ್ವೀಟ್ ಮಾಡುವ ಮೂಲಕ ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಇಡುವಂತೆ ಒತ್ತಾಯಿಸಿದ್ದಾರೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:38 am, Sat, 16 December 23