AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಈ ಕುರಿತು ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಪ್ರತಿಕ್ರಿಯೆ ನೀಡಿದ್ದು, ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕೊನೆ ಕ್ಷಣದಲ್ಲಿ ಟಿಕೆಟ್​ ಬದಲಾವಣೆ ಆದರೂ ಆಶ್ಚರ್ಯವಿಲ್ಲ ಎಂದು ಬಾಂಬ್​​ ಸಿಡಿಸಿದ್ದಾರೆ.

ಬಾಗಲಕೋಟೆ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಯತ್ನಾಳ್: ದಾವಣಗೆರೆ ಬಿಜೆಪಿ ಅಭ್ಯರ್ಥಿ ಬಗ್ಗೆ ಹೊಸ ಬಾಂಬ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್Image Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Mar 19, 2026 | 7:40 PM

Share

ವಿಜಯಪುರ, ಮಾರ್ಚ್​​ 19: ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಈಗಾಗಲೇ ಮುಹೂರ್ತ ಫಿಕ್ಸ್ ಆಗಿದೆ. ಎರಡು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಘೋಷಣೆ ಮಾಡಲಾಗಿದೆ. ಬಾಗಕೋಟೆಗೆ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆಗೆ ಶ್ರೀನಿವಾಸ ಹೆಸರು ಫೈನಲ್ ಆಗಿದೆ. ಈ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (basanagouda patil yatnal)​​ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠಗೆ ನಾನು ಬೆಂಬಲ ನೀಡುತ್ತೇನೆ ಎಂದಿದ್ದಾರೆ. ಜೊತೆಗೆ ದಾವಣಗೆರೆಯಲ್ಲಿ ಕೊನೆಕ್ಷಣದಲ್ಲಿ ಏನಾದರೂ ಆಗಬಹುದು, ಶಾಮನೂರು ಕುಟುಂಬಕ್ಕೆ ‌ಬಿಜೆಪಿ ಟಿಕೆಟ್ ಕೊಟ್ಟರು ಅಚ್ಚರಿಯಿಲ್ಲ ಎಂದು ಹೊಸ ಬಾಂಬ್​​ ಸಿಡಿಸಿದ್ದಾರೆ.

ವೀರಣ್ಣ ಚರಂತಿಮಠಗೆ ಬೆಂಬಲಿಸುವೆ ಎಂದ ಯತ್ನಾಳ್

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚರಂತಿಮಠಗೆ ಬೆಂಬಲಿಸುವೆ. ಚರಂತಿಮಠ ಹಾಗೂ ನಮ್ಮದು ಹಳೆಯ ಸಂಬಂಧ. ನನ್ನ ಕಷ್ಟ ಕಾಲದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಈ ಹಿಂದೆ ಬಿಜೆಪಿ ಟಿಕೆಟ್ ಕೊಡಿಸಿದ್ದೇ ನಾನು. ಆಗ ವೀರಣ್ಣ ಚರಂತಿಮಠಗೆ ಟಿಕೆಟ್ ಕೊಡುವ ಮನಸ್ಸು ಯಡಿಯೂರಪ್ಪಗೆ ಇರಲಿಲ್ಲ. ಅನಂತಕುಮಾರ ನಾನು ಹಾಗೂ ಇತರರು ಸೇರಿ ಚರಂತಿಮಠ ಅವರಿಗೆ ಟಿಕೆಟ್ ಕೊಡಿಸಿದ್ದೇವು. ಆಗ ಜಗದೀಶ್ ಶೆಟ್ಟರ್ ಎಲೆಕ್ಷನ್ ಕಮೀಟಿ ಚೇರ್ಮನ್ ಆಗಿದ್ದರು. ಶೆಟ್ಟರ್ ಜೊತೆಗೆ ಜಗಳ ಮಾಡಿ ಚರಂತಿಮಠಗೆ ಟಿಕೆಟ್ ಕೊಡಿಸಿದ್ದೇವೆ ಎಂದಿದ್ದಾರೆ.

ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಯತ್ನಾಳ್​ ವಾಗ್ದಾಳಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಯಡಿಯೂರಪ್ಪ ವಾಗ್ದಾಳಿ ಮಾಡಿದ ಯತ್ನಾಳ್​​, ಬಿಜೆಪಿ ಮಹಾನ್ ನಾಯಕರು ಎಲ್ಲೆಲ್ಲಿ ಹೊಂದಾಣಿಕೆ ಇದೆ ಎಂದು ನೋಡಬೇಕು. ಅಪ್ಪ-ಮಕ್ಕಳು ಯಾರನ್ನು ಕೊಲ್ಲಬೇಕೆಂದುಕೊಳ್ಳುತ್ತಾರೋ ನೋಡಬೇಕು. ಅವರದ್ದು ಶಾಮನೂರು ಜೊತೆ ಹೊಂದಾಣಿಕೆಯಿದೆ, ಹಾಗಾಗಿ ಬಿಜೆಪಿ ಪರ ಕೆಲಸ ಮಾಡುತ್ತಾರೋ ಇಲ್ಲವೋ ಗೊತ್ತಿಲ್ಲ. ಇನ್ನು ಶಾಮನೂರು ಕುಟುಂಬಕ್ಕೆ ಕಾಂಗ್ರೆಸ್ ಟಿಕೆಟ್ ಸಿಗುತ್ತೋ ಇಲ್ವೋ ಅದೂ ಸಹ ಗೊತ್ತಿಲ್ಲ. ಶಾಮನೂರು, ಯಡಿಯೂರಪ್ಪ ಕುಟುಂಬಗಳು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಒಂದು ವೇಳೆ ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಮುಸ್ಲಿಂಮರಿಗೆ ಕೊಟ್ಟರೆ, ಶಾಮನೂರು ಮಲ್ಲಿಕಾರ್ಜುನ ಮಗನಿಗೆ ಬಿಜೆಪಿ ಟಿಕೆಟ್ ಕೊಟ್ಟರೂ ಆಶ್ಚರ್ಯವಿಲ್ಲ. ನೂರಕ್ಕೆ ನೂರರಷ್ಟು ಮಾಹಿತಿ ನನಗಿದೆ ಎಂದು ಯತ್ನಾಳ್​ ಬಾಂಬ್ ಸಿಡಿಸಿದ್ದಾರೆ.

ಸೋಶಿಯಲ್ ಮೀಡಿಯಾ ಪೋಸ್ಟ್​​ಗೆ 50 ಲಕ್ಷ ರೂ ಖರ್ಚು

ಯತ್ನಾಳ್​ ಬಿಜೆಪಿಗೆ ಏಕೆ ಬೇಕೆಂದು ಕೆಲವರು ಪೋಸ್ಟ್ ಮಾಡುತ್ತಾರೆ. ಇದೆಲ್ಲಾ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಕಲಿ ಫೇಸ್ ಬುಕ್ ಮೂಲಕ ಮಾಡಿಸುತ್ತಾನೆ. ಬಿ.ಎಲ್ ಸಂತೋಷ್​, ಪ್ರಲ್ಹಾದ್​ ಜೋಶಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಹಾಕಿಸುತ್ತಾನೆ. ಇದಕ್ಕಾಗಿ ಪ್ರತಿ ತಿಂಗಳು 50 ಲಕ್ಷ ರೂ ಖರ್ಚು ಮಾಡುತ್ತಾನೆಂದು ವಾಗ್ದಾಳಿ ಮಾಡಿದರು. ತಾಯಿಗೆ ದ್ರೋಹ ಬಗೆಯಲ್ಲಾ ಎಂದು ನಿಮ್ಮಪ್ಪ ಭಾಷಣ ಮಾಡುತ್ತಿದ್ದ. ಅದನ್ನೇ ನೋಡಿ ಕನ್ನಡಿ ಮುಂದೆ ನಿಂತು ಭಾಷಣ ಕಲಿತಿದ್ದೀಯಾ, ನಿನಗೆ ಹಣ ತಿನ್ನೋದು ಮಾತ್ರ ಗೊತ್ತಿದೆ ಎಂದು ವಿಜಯೇಂದ್ರ ವಿರುದ್ದ ಕಿಡಿಕಾರಿದರು. ಈಗ ಉಪ ಚುನಾವಣೆಯಲ್ಲಿ ನೀನು ಬಾಗಲಕೋಟೆ, ದಾವಣಗೆರಯಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಇಲ್ಲವಾದರೆ ಶಾಮನೂರು ಜೊತೆ ಹೋಗಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಉಪಚುನಾವಣೆ ಪ್ರಚಾರಕ್ಕೆ ಉಚ್ಛಾಟಿತ ಶಾಸಕ? ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯ ಸ್ಫೋಟಕ ಹೇಳಿಕೆ

ಕುಮಾರಸ್ವಾಮಿಯನ್ನು ಸೋಲಿಸಲು ಪ್ರಯತ್ನ ಮಾಡಿದರು, ಸೋಮಣ್ಣರನ್ನು ಸೋಲಿಸಲು ಪ್ರಯತ್ನ ಮಾಡಿದ್ದರು. ಕೊಪ್ಪಳದಲ್ಲಿ ಡೀಲಿಂಗ್, ಶಿಖಾರಿಪುರದಲ್ಲಿ ಡೀಲಿಂಗ್, ಕಲಬುರಗಿಯಲ್ಲೂ ಸೋಲಲು ಹೊಂದಾಣಿಕೆ ಮಾಡಿಕೊಂಡರು. ರಾಯಚೂರು, ಬಳ್ಳಾರಿ, ಕೊಪ್ಫಳದಲ್ಲೂ ಹೊಂದಾಣಿಕೆ ಮಾಡಿದರು. ಇದೆಲ್ಲಾ ಮುಂದೆ ನಡೆಯಲ್ಲ. ಯಡಿಯೂರಪ್ಪ ಇದ್ದರೆ ಲಿಂಗಾಯತ ಇರುತ್ತಾರೆ, ಇಲ್ಲದಿದ್ದರೆ ಇಡಿ ಕರ್ನಾಟಕ ಬಿಜೆಪಿ ಮುಳುಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿಗಳು ಹೇಳುವುದನ್ನು ನಂಬಿ ಪಿಎಂ ಮೋದಿ, ಅಮೀತ್ ಶಾ, ಬಿಜೆಪಿ ಹೈಕಮಾಂಡ್ ಕಣ್ಣು ಮುಚ್ಚಬಾರದು ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:32 pm, Thu, 19 March 26

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಉತ್ತರಾಖಂಡದಲ್ಲಿ ಹಳಿ ತಪ್ಪಿದ ಉಜ್ಜಯಿನಿ ಎಕ್ಸ್​​ಪ್ರೆಸ್ ರೈಲು
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ ದೇಗುಲ
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು