AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ: ಸಿಎಂ ಭರವಸೆ ಒಪ್ಪಿದ ಬಸವ ಜಯಮೃತ್ಯುಂಜಯಶ್ರೀ

ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯಾದ ಮೂರು ತಿಂಗಳ ಒಳಗೆ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು ಎಂದು ಸ್ವಾಮೀಜಿ ಹೇಳಿದರು.

ಪಂಚಮಸಾಲಿ ಮೀಸಲಾತಿ: ಸಿಎಂ ಭರವಸೆ ಒಪ್ಪಿದ ಬಸವ ಜಯಮೃತ್ಯುಂಜಯಶ್ರೀ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
TV9 Web
| Edited By: |

Updated on: Dec 06, 2021 | 5:41 PM

Share

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ರಾಜ್ಯದಲ್ಲಿ ನಡೆಸಲು ಉದ್ದೇಶಿಸಿದ್ದ ಸತ್ಯಾಗ್ರಹವನ್ನು ಕೈಬಿಡಲಾಗಿದೆ. ಅದರ ಬದಲಿಗೆ ಗ್ರಾಮ ಪಂಚಾಯಿತಿ ಮಟ್ಟದಿಂದ ಹೋರಾಟ ಸಂಘಟಿಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಕಲ್ಪಿಸಲು ಅಕ್ಟೋಬರ್ 1ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದು ನಿಜ. ಅಂದೇ ಮುಖ್ಯಮಂತ್ರಿ ಬೊಮ್ಮಾಯಿ ನಮ್ಮನ್ನು ಕರೆದು ಮಾತಾಡಿದ್ದರು ಎಂದು ಹೇಳಿದರು. ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯಾದ ಮೂರು ತಿಂಗಳ ಒಳಗೆ ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಸತ್ಯಾಗ್ರಹ ಮಾಡಬೇಡಿ, ಹೋರಾಟ ಮಾಡಿ ಎಂದು ಹೇಳಿದ್ದರು. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಿಂದ ನಮ್ಮ ಹೋರಾಟ ನಡೆಯುತ್ತಿದೆ ಎಂದು ತಿಳಿಸಿದರು.

ಪಂಚಮಸಾಲಿ ಸಮುದಾಯಕ್ಕೆ ಸಾಧ್ಯವಾದಷ್ಟೂ ಬೇಗ ಮೀಸಲಾತಿ ಘೋಷಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ. ಮುಂದಿನ ದಿನಗಳಲ್ಲಿ ಸಮಾಜದ ಕಾರ್ಯಕಾರಿಣಿ ಸಭೆ ನಡೆಸಲಾಗುತ್ತದೆ. ವಿಜಯಪುರ, ಬೆಳಗಾವಿ ಅಥವಾ ಬಾಗಲಕೋಟೆಯಲ್ಲಿ ಸಭೆ ನಡೆಸಲಾಗುವುದು ಎಂದು ವಿಜಯಪುರದಲ್ಲಿ ಬಸವ ಜಯಮೃತ್ಯುಂಜಯ ಶ್ರೀ ಹೇಳಿದರು.

ಮೀಸಲಾತಿಗೆ ವಿರೋಧ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆ ಬಗ್ಗೆ ಈಚೆಗೆ ನಡೆದ ಅತಿ ಹಿಂದುಳಿದ ವರ್ಗಗಳಿಗೆ ಸೇರಿದ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ವಿರೋಧ ಕೇಳಿಬಂದಿದೆ. ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಇಂದು (ಅಕ್ಟೋಬರ್ 26) ನಡೆದ ಸಭೆಯಲ್ಲಿ ವಿರೋಧ ಅಭಿಪ್ರಾಯ ಕೇಳಿಬಂದಿದೆ. ಙರಿಷತ್​ನ ಮಾಜಿ ಸದಸ್ಯ ಎಂ.ಸಿ. ವೇಣುಗೋಪಾಲ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ದ್ವಾರಕನಾಥ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿ ಆಗಿದ್ದರು. ಈ ಸಭೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರಕ್ಕೆ ವಿರೋಧ ವ್ಯಕ್ತವಾಗಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ನೀಡದಂತೆ ಆಗ್ರಹ ಕೇಳಿಬಂದಿದೆ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿ ರಚನೆ ಅವೈಜ್ಞಾನಿಕ ಎಂಬ ನಿಲುವನ್ನು ಸಭೆ ವ್ಯಕ್ತಪಡಿಸಿದೆ. ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಒಳಪಡಿಸುವುದನ್ನು ವಿರೋಧಿಸಲು ತೀರ್ಮಾನ ಮಾಡಲಾಗಿದೆ.

ಇದನ್ನೂ ಓದಿ: ಪಂಚಮಸಾಲಿ 3ನೇ ಪೀಠ ರಚನೆಗಾಗಿ ಜಮಖಂಡಿಯಲ್ಲಿ ಟ್ರಸ್ಟ್​ ನೋಂದಣಿ ಇದನ್ನೂ ಓದಿ: ಹಾಸನದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಧಿಕ್ಕಾರ; ಸಭೆ ಮೊಟಕುಗೊಳಿಸಿ ತೆರಳಿದ ಸ್ವಾಮೀಜಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?