AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!

ವಿಜಯಪುರದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬ್ಲಾಕ್‌ಮೇಲ್ ವಿವಾದದಲ್ಲಿ ಸಿಲುಕಿದ್ದಾರೆ. ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಸ್ವಾಮೀಜಿ ಮೇಲೆ ಹಲ್ಲೆ ನಡೆಸಿ, ಹಣಕ್ಕಾಗಿ ಬೆದರಿಕೆ ಹಾಕಲಾಗಿದೆ ಎಂದು ಶಿಷ್ಯರೊಬ್ಬರು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ರಾಜಕೀಯ ಕೈವಾಡವಿದೆ ಎಂದು ಆರೋಪಿಸಲಾಗಿದ್ದು, 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಯತ್ನ ನಡೆದಿದೆ ಎಂದು ಹೇಳಲಾಗಿದೆ. ಮಹಿಳೆಯೊಬ್ಬರು ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನೂ ಮಾಡಿದ್ದಾರೆ.

ಸ್ವಾಮೀಜಿಯನ್ನು ಹನಿಟ್ರಾಪ್ ಮಾಡಲು ನಡೆದಿತ್ತಾ ಸಂಚು?: ಇದರ ಹಿಂದೆ ಶಾಸಕ ಕಾಶಪ್ಪನವರ್ ಕೈವಾಡ ಇದ್ಯಾ? ದೂರಿನಲ್ಲಿ ಬಿಚ್ಚಿಟ್ಟ ಸತ್ಯ!
ಸಾಂದರ್ಭಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 07, 2026 | 9:05 PM

Share

ವಿಜಯಪುರ, ಏ. 07: ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ಸುತ್ತ ಈಗ ವಿವಾದವೊಂದು ಸುತ್ತಿಕೊಂಡಿದೆ. ಸ್ವಾಮೀಜಿಗಳ ಮೇಲೆ ಹಲ್ಲೆ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಎಂದು ಅವರ ಶಿಷ್ಯ ಸಂತೋಷ ಮಂಜಣ್ಣಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದೂರಿನ ಪ್ರಕಾರ, ಕಳೆದ ಫೆಬ್ರವರಿ 11 ರಂದು ವಿಜಯಪುರ ತಾಲೂಕಿನ ಕಗ್ಗೋಡ ಬಳಿ ಸ್ವಾಮೀಜಿಗಳು ಕಾರಿನಲ್ಲಿ ತೆರಳುತ್ತಿದ್ದಾಗ ತ್ರಿವೇಣಿ ಎಂಬ ಮಹಿಳೆ ಮತ್ತು ಇತರರು ಕಾರು ತಡೆದು ಹಲ್ಲೆ ನಡೆಸಿದ್ದರು ಎನ್ನಲಾಗಿದೆ. ಆಗ ಭಕ್ತರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದರು. ಆದರೆ, ಈ ಘಟನೆಯ ನಂತರ ಮಹಿಳೆಯು ಸಾಮಾಜಿಕ ಜಾಲತಾಣಗಳಲ್ಲಿ ಸ್ವಾಮೀಜಿಗಳ ವಿರುದ್ಧ ಅಪಪ್ರಚಾರ ಆರಂಭಿಸಿ, ರಾಜಕುಮಾರ್ ಎಂಬುವವರ ಮೂಲಕ 3 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಟಿವಿ9 ಜೊತೆಗೆ ಮಾತನಾಡಿರುವ ಸಂತೋಷ ಮಂಜಣ್ಣಿ, ಈ ಇಡೀ ಪ್ರಕರಣದ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡವಿದೆ ಎಂದು ಗಂಭೀರವಾಗಿ ಹೇಳಿದ್ದಾರೆ. “ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ಸ್ವಾಮೀಜಿಗಳಿಂದ ಎಲ್ಲ ಕೆಲಸ ಮಾಡಿಸಿಕೊಂಡು ಈಗ ಪೀಠದಿಂದ ಉಚ್ಛಾಟನೆ ಮಾಡಲು ಸಂಚು ರೂಪಿಸುತ್ತಿದ್ದಾರೆ. ಇದು 2ಎ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಹುನ್ನಾರ” ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಸವಜಯಮೃತ್ಯುಂಜಯ ವಿರುದ್ಧ ಮಹಿಳೆ ಲೈಂಗಿಕ ದೌರ್ಜುನ್ಯ ಆರೋಪ:ಸ್ಫೋಟಕ ವಿಚಾರ ಬಿಚ್ಚಿಟ್ಟ ಕೈ ಶಾಸಕ

ಇದೇ ವೇಳೆ, ಮಹಿಳೆಯು ಸ್ವಾಮೀಜಿಗಳ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂತೋಷ, “ಇಷ್ಟು ದಿನ ಸುಮ್ಮನಿದ್ದ ಮಹಿಳೆ, ಸ್ವಾಮೀಜಿಗಳು ದೂರು ನೀಡಿದ ಬಳಿಕವಷ್ಟೇ ಯಾಕೆ ದೂರು ನೀಡಿದ್ದಾರೆ? ಇದು ಕೇವಲ ಹಣಕ್ಕಾಗಿ ಮಾಡುತ್ತಿರುವ ಬೆದರಿಕೆ” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More