ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ.

ಸಂಪೂರ್ಣ ಭರ್ತಿಯಾದ ಆಲಮಟ್ಟಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ
Follow us
TV9 Web
| Updated By: preethi shettigar

Updated on:Aug 21, 2021 | 12:31 PM

ವಿಜಯಪುರ: ಸಂಪೂರ್ಣ ಭರ್ತಿಯಾದ ಆಲಮಟ್ಟಿಯ ಲಾಲ್  ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಗಂಗಾಪೂಜೆ ನೆರವೇರಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿಯ ಡ್ಯಾಂಗೆ ಸಿಎಂ ಪೂಜೆ ಸಲ್ಲಿಸಿದ್ದು, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಮುರುಗೇಶ‌ ನಿರಾಣಿ, ಉಮೇಶ ಕತ್ತಿ, ಗೋವಿಂದ ಕಾರಜೋಳ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ. ಎಸ್. ಪಾಟೀಲ್ ನಡಹಳ್ಳಿ ಸೇರಿದಂತೆ ಇತರೆ ಜನಪ್ರತಿನಿಧಿಗಳು  ಸಾಥ್ ನೀಡಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿಗೆ ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಹೆಲಿಕಾಪ್ಟರ್ ಮೂಲಕ ಇಂದು ಆಗಮಿಸಿದ್ದಾರೆ. ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ‌ ಆಗಮಿಸಿದ್ದು, ಆಲಮಟ್ಟಿ ಬಳಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರದ ಆವರಣದಲ್ಲಿನ ಹೆಲಿಪ್ಯಾಡ್​ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಲುಪಿದ್ದಾರೆ. ಸಿಎಂಗೆ ಪೊಲೀಸ್ ಪಡೆ ಗೌರವ ವಂದನೆ ನೀಡಿದ್ದಾರೆ.

ಗಂಗಾ ಪೂಜೆ ಬಳಿಕ ಜನಪ್ರನಿಧಿಗಳ ಭೇಟಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ ನೀಡಿ ವೀಕ್ಷಿಸಲಿದ್ದು, ಸೂಕ್ತ ಪರಿಹಾರ ಘೋಷಣೆ ಮಾಡುವ ನಿರೀಕ್ಷೆ ಇದೆ.

ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಬಂದೋ ಬಸ್ತ್ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ ಭರ್ತಿಯಾದ ಹಿನ್ನಲೆ ಗಂಗಾಪೂಜೆ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಬಾಗೀನ ಅರ್ಪಿಸಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಬಂದೋ ಬಸ್ತ್ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಡ್ಯಾಂಗೆ ಪ್ರವೇಶ ನೀಡಲಾಗಿದೆ. ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಉತ್ತರ ವಲಯ ಐಜಿಪಿ ಎನ್. ಸತೀಶಕುಮಾರ, ವಿಜಯಪುರ ಎಸ್​ಪಿ ಆನಂದಕುಮಾರ, ಬಾಗಲಕೋಟ ಎಸ್​ಪಿ ಲೊಕೇಶ ಜಗಲಾಸರ್, ವಿಜಯಪುರ ಎಎಸ್​ಪಿ ರಾಮ್ ಅರಸಿದ್ದಿ, 5 ಡಿಎಸ್​ಪಿ, 12 ಇನ್ಸಪೆಕ್ಟರ್,30 ಪಿಎಸ್ಐ, 250 ಇತರೆ ಸಿಬ್ಬಂದಿ, ಐಆರ್​ಬಿ 4 ತುಕಡಿ, ಡಿಎಆರ್ 5 ತುಕಡಿ, ಕೆಎಸ್ಆರ್​ಪಿ 4 ಅವರನ್ನು ನೇಮಿಸಲಾಗಿದೆ. ವಿಜಯಪುರ ಡಿಸಿಪಿ ಸುನೀಲಕುಮಾರ ಹಾಗೂ ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಎಸ್​ವೈ ತಂದೆಯಂತೆ, ಬಸವರಾಜ ಬೊಮ್ಮಾಯಿ ಸಹೋದರನ ರೀತಿ, ಸಂಘಟನೆ ತಾಯಿ ಇದ್ದಂತೆ: ಎಂಪಿ ರೇಣುಕಾಚಾರ್ಯ

CM Basavaraj Bommai: ಸಿಎಂ ಬಸವರಾಜ ಬೊಮ್ಮಾಯಿ ಭೇಟಿಗೆ ಬರುವ ಸಾರ್ವಜನಿಕರಿಗೆ ಮೊಬೈಲ್ ನಿಷೇಧ

Published On - 11:59 am, Sat, 21 August 21

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ