ವೈಟ್ ಟಾಪಿಂಗ್ ಕಾಮಗಾರಿ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ 2 ತಿಂಗಳು ಬಂದ್
ಬೆಂಗಳೂರಿನ ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್‌ಮೆಂಟ್‌ನಿಂದ ಬೆಳ್ಳಂದೂರು ಕೋಡಿವರೆಗೆ) 60 ದಿನಗಳ ಕಾಲ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿದೆ. ಈ ಅವಧಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳನ್ನು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು, ನವೆಂಬರ್ 14: ಬೃಹತ್ ಬೆಂಗಳೂರು ಮಹಾನಗರ ಪಾಲೀಕೆ (BBMP) ವತಿಯಿಂದ ನಗರ ಹಲವು ರಸ್ತೆಗಳಿಗೆ ವೈಟ್ ಟಾಪಿಂಗ್ (White Topping) ಹಾಕಲಾಗುತ್ತಿದೆ. ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿನ (Bengaluru) ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆಯಲ್ಲಿ (ಮಿಂತ್ರಾ ಅಪಾರ್ಟ್ ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ 60 ದಿನಗಳ ಕಾಲ ನಿರ್ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸ್ ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ಮಾಹಿತಿ ನೀಡಿದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:
ದೇವರಬೀಸನಹಳ್ಳಿ ಸಕ್ತಾ ಆಸ್ಪತ್ರೆ ಮುಖ್ಯರಸ್ತೆ (ಮಿಂತ್ರಾ ಅಪಾರ್ಟ್‌ಮೆಂಟ್ ಮುಂಭಾಗದ ರಸ್ತೆಯಿಂದ ಬೆಳ್ಳಂದೂರು ಕೋಡಿವರೆಗೆ) ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಪರ್ಯಾಯ ಮಾರ್ಗ:
ಯಮಲೂರು ಕಡೆಯಿಂದ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಮಾರತ್ತಹಳ್ಳಿ ಬ್ರಿಡ್ಜ್ – ಕಾಡುಬೀಸನಹಳ್ಳಿ ಬ್ರಿಡ್ಜ್ – ಹೊರವರ್ತುಲ ರಸ್ತೆ ಮಾರ್ಗವಾಗಿ ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಗೆ ಸಂಚರಿಸಬಹುದಾಗಿದೆ.
ಯಮಲೂರು ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಕೋಡಿಯಲ್ಲಿ ಎಡ ತಿರುವು ಪಡೆದು ಕರಿಯಮ್ಮನ ಅಗ್ರಹಾರ ಮೂಲಕ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸಬಹುದಾಗಿದೆ.
ಇದನ್ನೂ ಓದಿ: ಪ್ರಯಾಣಿಕರಿಗೆ ಸಿಹಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ
ಯಮಲೂರು ಕಡೆಯಿಂದ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸುವವರು ಹಳೆ ವಿಮಾನ ನಿಲ್ದಾಣ ರಸ್ತೆ – ಯಮಲೂರು ಜಂಕ್ಷನ್ – ಯಮಲೂರು ವಿಲೇಜ್ ಮೂಲಕ ಯಮಲೂರು ಕೋಡಿ – ಬೆಳ್ಳಂದೂರು ಕೋಡಿ ಬಲ ತಿರುವು ಪಡೆದು ಬೆಳ್ಳಂದೂರು ವಿಲೇಜ್ ಮಾರ್ಗವಾಗಿ ಹೊರವರ್ತುಲ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
ಟ್ವಿಟರ್ ಪೋಸ್ಟ್
Traffic advisory ; bellandur lake road closed for white topping work by bbmp authorities , requesting commuters to avoid yamalur towards bellandur lake road to avoid congestion at bellandur lake road.@0RRCA @DCPSouthTrBCP @blrcitytraffic @blrcitytraffic @acphsrtrps @CPBlr pic.twitter.com/8XINMhzxmd
— BELLANDURU TRAFFIC BTP (@bellandurutrfps) November 14, 2024
ದೇವರಬೀಸನಹಳ್ಳಿ ಮತ್ತು ಬೆಳ್ಳಂದೂರು ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಹೊರವರ್ತುಲ ರಸ್ತೆ ಕಾಡುಬೀಸನಹಳ್ಳಿ ಬ್ರಿಡ್ಜ್ ಮಾರತ್ತಹಳ್ಳಿ ಬ್ರಿಡ್ಜ್ ಮೇಲೆ ಎಡ ತಿರುವು ಪಡೆದು ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮೂಲಕ ನಗರದ ಕಡೆಗೆ ಸಂಚರಿಸಬಹುದಾಗಿದೆ.
ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಯಿಂದ ನಗರದ ಕಡೆಗೆ ಸಂಚರಿಸುವವರು ಕರಿಯಮ್ಮನ ಅಗ್ರಹಾರ – ಯಮಲೂರು ಕೋಡಿಯಲ್ಲಿ ಬಲ ತಿರುವು ಪಡೆದು ಯಮಲೂರು ವಿಲೇಜ್ ಮಾರ್ಗವಾಗಿ ಯಮಲೂರು ಜಂಕ್ಷನ್ ಹಳೆ ವಿಮಾನ ನಿಲ್ದಾಣ ರಸ್ತೆ ಮಾರ್ಗವಾಗಿ ನಗರದ ಕಡೆಗೆ ಸಂಚರಿಸಬಹುದಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:57 am, Thu, 14 November 24