AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡ್ವಾಣಿಗೆ ಕೊಟ್ಟಿದ್ದಕ್ಕೆ ತಕರಾರಿಲ್ಲ; ನಮ್ಮ ಸಿದ್ಧಗಂಗಾ ಶ್ರೀಗಳಿಗೂ ಭಾರತ ರತ್ನ ಕೊಡಿ – ಡಿಕೆ ಶಿವಕುಮಾರ್ ಆಗ್ರಹ

Dr Shri Shivakumar Swami, Tumkur Siddaganga Mutt: ಅಡ್ವಾಣಿ ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ಭಾರತ ರತ್ನ ಕೊಡಿ ಎಂದು ಡಿಕೆಶಿ ಆಗ್ರಹಿಸಿದರು.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Feb 03, 2024 | 4:54 PM

Share

ವಿಜಯಪುರ: ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್​​ ಕೆ ಅಡ್ವಾಣಿ (LK Advani) ಅವರಿಗೆ ಭಾರತ ರತ್ನ (Bharat Ratna) ಘೋಷಿಸಿರುವ ವಿಚಾರವಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಪ್ರತಿಕ್ರಿಯೆ ನೀಡಿದ್ದಾರೆ. ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ.

ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ (Dr Shri Shivakumar Swami, Tumkur Siddaganga Mutt ) ಮರಣೋತ್ತರವಾಗಿ ಭಾರತ ರತ್ನ (posthumously Bharat Ratna) ಕೊಡಿ ಎಂದು ಡಿಕೆಶಿ ಆಗ್ರಹಿಸಿದರು. ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಒತ್ತಾಸೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Sat, 3 February 24

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?