ವಿಜಯಪುರ: ಭಾರತದ ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ಧುರೀಣ ಎಲ್ ಕೆ ಅಡ್ವಾಣಿ (LK Advani) ಅವರಿಗೆ ಭಾರತ ರತ್ನ (Bharat Ratna) ಘೋಷಿಸಿರುವ ವಿಚಾರವಾಗಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪ್ರತಿಕ್ರಿಯೆ ನೀಡಿದ್ದಾರೆ. ಅಡ್ವಾಣಿಯವರು ದೇಶದ ಹಿರಿಯ ರಾಜಕಾರಣಿ. ಅವರಿಗೆ ಭಾರತ ರತ್ನ ನೀಡಿದ್ದಕ್ಕೆ ನಮ್ಮ ತಕರಾರೇನೂ ಇಲ್ಲ.
ಕೇಂದ್ರ ಸರ್ಕಾರದ ತೀರ್ಮಾನಕ್ಕೆ ನಮ್ಮದೇನು ತಕರಾರು ಇಲ್ಲ. ಆದರೆ ನಡೆದಾಡುವ ದೇವರೆಂದೇ ಖ್ಯಾತರಾದ ತ್ರಿವಿಧ ದಾಸೋಹಿ, ಶತಾಯುಷಿ, ಸಿದ್ಧಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ (Dr Shri Shivakumar Swami, Tumkur Siddaganga Mutt ) ಮರಣೋತ್ತರವಾಗಿ ಭಾರತ ರತ್ನ (posthumously Bharat Ratna) ಕೊಡಿ ಎಂದು ಡಿಕೆಶಿ ಆಗ್ರಹಿಸಿದರು. ಈ ಹಿಂದೆಯೇ ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲು ನಮ್ಮ ಸರ್ಕಾರ ಮನವಿ ಮಾಡಿತ್ತು. ಅದು ಅವರಿಗೆ ಬಿಟ್ಟ ವಿಚಾರ. ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಶ್ರೀಗಳು ಹೆಸರಾಗಿದ್ದವರು. ಅವರಿಗೆ ಗೌರವ ಸಲ್ಲಿಸಬೇಕು ಅನ್ನೋದು ನಮ್ಮ ಒತ್ತಾಸೆ ಎಂದು ಶಿವಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:56 pm, Sat, 3 February 24