AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಜೀವಂತವಾಗಿದ್ದೇವೆ’ ಎಂದವರಿಗೆ ಶಾಕ್: ಯತ್ನಾಳ್ ತೋರಿಸಿದ ಡೆತ್ ಸರ್ಟಿಫಿಕೇಟ್ ಅಸಲಿ ಎಂದ ಅಧಿಕಾರಿಗಳು!

ವಿಜಯಪುರ ಮತದಾರರ ಪಟ್ಟಿ ಪರಿಷ್ಕರಣೆ ವಿವಾದ ಹೊಸ ತಿರುವು ಪಡೆದಿದೆ. ಶಾಸಕ ಯತ್ನಾಳ್ ಮೃತಪಟ್ಟವರ ಹೆಸರು ಪಟ್ಟಿಯಲ್ಲಿದೆ ಎಂದು ಆರೋಪಿಸಿ 8 ಮರಣ ಪ್ರಮಾಣಪತ್ರ ಪ್ರದರ್ಶಿಸಿದ್ದರು. ಸತ್ಯಾಸತ್ಯತೆ ಪರಿಶೀಲಿಸುವಂತೆ ದೂರು ಬೆನ್ನಲ್ಲೇ ಇ-ಜನ್ಮ ತಂತ್ರಾಂಶದಲ್ಲಿ ಮರಣ ಪ್ರಮಾಣಪತ್ರಗಳ ಪರಿಶೀಲನೆ ಮಾಡಲಾಗಿದ್ದು, ಅವುಗಳು ಅಸಲು ಎಂಬುವುದು ದೃಢಪಟ್ಟಿದೆ.

'ನಾವು ಜೀವಂತವಾಗಿದ್ದೇವೆ' ಎಂದವರಿಗೆ ಶಾಕ್: ಯತ್ನಾಳ್ ತೋರಿಸಿದ ಡೆತ್ ಸರ್ಟಿಫಿಕೇಟ್ ಅಸಲಿ ಎಂದ ಅಧಿಕಾರಿಗಳು!
ಶಾಸಕ್ ಯತ್ನಾಳ್​ Image Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 08, 2026 | 10:01 PM

Share

ಮುಖ್ಯಾಂಶಗಳು

  • ವಿಜಯಪುರದಲ್ಲಿ ಮತ ಪಟ್ಟಿ ಪರಿಷ್ಕರಣೆ ವಿವಾದಕ್ಕೆ ಹೊಸ ತಿರುವು
  • ಯತ್ನಾಳ್ ಪ್ರದರ್ಶಿಸಿದ್ದ 8 ಮರಣ ಪ್ರಮಾಣಪತ್ರ ಅಸಲಿ
  • ವಿಜಯಪುರದ ಮತದಾರರ ನೋಂದಣಾಧಿಕಾರಿಯಿಂದ ಮಾಹಿತಿ

ವಿಜಯಪುರ, ಅಕ್ಟೋಬರ್​​ 08: ಮರಣ ಹೊಂದಿದವರ ಹೆಸರು ಮತದಾರರ ಪಟ್ಟಿ ಪರಿಷ್ಕರಣೆ ಕರಡು ಪಟ್ಟಿಯಲ್ಲಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಇತ್ತೀಚೆಗೆ ಆರೋಪ ಮಾಡಿದ್ದರು. ಪ್ರತಿಯಾಗಿ ನಾವು ಜೀವಂತವಾಗಿದ್ದೇವೆ ಎಂದು ಕೆಲ ಮತದಾರರು ಡಿಸಿ ಕಚೇರಿಗೆ ತೆರಳಿ ಪ್ರತಿಭಟನೆ ಕೂಡ ಮಾಡಿದ್ದರು. ಸದ್ಯ ವಿವಾದಕ್ಕೆ ಹೊಸ ತಿರುವು ಪಡೆದುಕೊಂಡಿದೆ. ಶಾಸಕ ಯತ್ನಾಳ್​ ಬಹಿರಂಗ ಪಡಿಸಿದ್ದ ಮರಣ ಪ್ರಮಾಣ ಪತ್ರಗಳು ಅಸಲಿ ಎಂದು ಮತದಾರರ ನೋಂದಣಾಧಿಕಾರಿಗಳೇ ದಾಖಲೆ ನೀಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ವಿಜಯಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗೆಳು, ಆರೋಪ-ಪ್ರತ್ಯಾರೋಪಗಳು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಕಳೆದ ಸೆಪ್ಟೆಂಬರ್ 30ರಂದು ಶಾಸಕ ಯತ್ನಾಳ್​, ‘8 ಜನ ಮತದಾರರ ಮರಣ ಪ್ರಮಾಣ ಪತ್ರ ಪ್ರದರ್ಶನ ಮಾಡಿ, ಮೃತಪಟ್ಟವರ ಹೆಸರು ಕರಡು ಪಟ್ಟಿಯಲ್ಲಿದೆ. ಜನ್ನತ್​ನಲ್ಲಿದ್ದವರ ಹೆಸರು ಹೇಗೆ ಮತದಾರರ ಕರಡು ಪಟ್ಟಿಯಲ್ಲಿ ಬಂದಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ಮಾಡಬೇಕು’ ಎಂದು ಹೇಳಿದ್ದರು.

ಇದನ್ನೂ ಓದಿ: ನಾವು ಮೃತಪಟ್ಟಿಲ್ಲ, ಜೀವಂತವಾಗಿದ್ದೇವೆ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ್ದ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹ

ಇನ್ನು ಶಾಸಕ ಯತ್ನಾಳ್​ ಆರೋಪಕ್ಕೆ ಮರಣ ಪ್ರಮಾಣ ಪತ್ರದಲ್ಲಿರುವ 8 ಜನರು, ‘ನಾವು ಮೃತಪಟ್ಟಿಲ್ಲ ಜೀವಂತ ಇದ್ದೇವೆ’ ಎಂದು ಅಕ್ಟೋಬರ್ 3ರಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಪ್ರತಿಭಟಿಸಿದ್ದರು. ‘ನಾವು ಮೃತಪಟ್ಟಿಲ್ಲ, ನಮ್ಮ ಪ್ರಮಾಣ ಪತ್ರವನ್ನು ಶಾಸಕರು ಹೇಗೆ ಪ್ರದರ್ಶನ ಮಾಡಿದರು’ ಎಂದು ಪ್ರಶ್ನೆ ಮಾಡಿದ್ದರು.

ಮೃತಪಟ್ಟವರೇ ಬೇರೆ; ನಾವು ಜೀವಂತವಾಗಿದ್ದೇವೆಂದು ಬಂದವರೇ ಬೇರೆ

ಇದಕ್ಕೆ ಕಾಂಗ್ರೆಸ್ ಮುಖಂಡರು ಕೂಡ ಸಾಥ್ ನೀಡಿದ್ದರು. ಇದೇ ವಿಚಾರ ಪ್ರಶ್ನಿಸಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಮಹಾನಗರ ಪಾಲಿಕೆ ಆಯುಕ್ತರಿಗೆ ಸತ್ಯಾಸತ್ಯಗೆ ಕಂಡು ಹಿಡಿಯಬೇಕೆಂದು ದೂರು ನೀಡಿದ್ದರು. ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಯತ್ನಾಳ್​ ಪ್ರದರ್ಶಿಸಿದ್ದ 8 ಜನರ ಮರಣ ಪ್ರಮಾಣ ಪತ್ರಗಳನ್ನು ಇ ಜನ್ಮ ತಂತ್ರಾಂಶದಲ್ಲಿ ಪರಿಶೀಲನೆ ಮಾಡಿದ್ದು, ಡೆತ್ ಸರ್ಟಿಫಿಕೇಟ್ಗಳು ಅಸಲಿ ಎಂದು ವರದಿ ಬಂದಿದೆ. ಜೊತೆಗೆ ಯತ್ನಾಳ್​ ಪ್ರದರ್ಶನ ಮಾಡಿರುವ 8 ಜನರ ಮರಣ ಪ್ರಮಾಣ ಪತ್ರಗಳು ನೈಜವಾಗಿವೆ. ಮೃತಪಟ್ಟವರೇ ಬೇರೆ, ನಾವು ಜೀವಂತವಾಗಿದ್ದೇವೆ ಎಂದು ಬಂದವರೇ ಬೇರೆ. ಜೀವಂತವಾಗಿದ್ದೇವೆ ಎಂಬುವವರ ಹೆಸರು ಮತದಾರರ ಪಟ್ಟಿಯಲ್ಲಿರುತ್ತವೆ ಎಂದು ಮತದಾರರ ನೋಂದನಾಧಿಕಾರಿಗಳು ವರದಿ ನೀಡಿದ್ದಾರೆ.

ಕಾಂಗ್ರೆಸ್​ ವಿರುದ್ಧ ಯತ್ನಾಳ್​ ಬೆಂಬಲಿಗರು ಆಕ್ರೋಶ

ವಿಜಯಪುರ ನಗರ ಮತಕ್ಷೇತ್ರದ 8 ಜನರ ಮರಣೋತ್ತರ ಪ್ರಮಾಣ ಪತ್ರ ಪ್ರದರ್ಶನ ಮಾಡಿದ್ದ ಯತ್ನಾಳ್​ ಮೇಲೆ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಗಂಭೀರ ಆರೋಪ ಮಾಡಿದ್ದರು. ಇದೀಗ ಮತದಾರರ ನೋಂದಣಾಧಿಕಾರಿಗಳು ನೀಡಿದ ವರದಿಯಿಂದ ಯತ್ನಾಳ್​ ಪ್ರದರ್ಶನ ಮಾಡಿದ್ದ 8 ಜನರ ಡೆತ್ ಸರ್ಟಿಫಿಕೇಟ್​​ಗಳು ನಿಜವೆಂಬುವುದು ಸಾಬೀತಾಗಿದೆ. ಸುಖಾಸುಮ್ಮನೆ ಆರೋಪ ಮಾಡಿದ್ದಾರೆಂದು ಯತ್ನಾಳ್​ ಬೆಂಬಲಿಗರು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯ ಮೃತ ತಂದೆ ಹೆಸರು ಎಸ್​ಐಆರ್ ಪಟ್ಟಿಯಲ್ಲಿ ಪತ್ತೆ 

ಅಸಲಿಗೆ ಕಾಂಗ್ರೆಸ್ ಪದಾಧಿಕಾರಿಗಳೇ ಮೃತಪಟ್ಟಿರುವ ತಮ್ಮ ತಂದೆಯ ಹೆಸರನ್ನು ಕರಡು ಪಟ್ಟಿಯಲ್ಲಿರಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಶೇಖಟ್ ಅವರ ತಂದೆ ಮುನೀರ್ ಅಹ್ಮದ್ ಶೇಖ್ 2025ರಲ್ಲಿ ಮೃತಪಟ್ಟಿದ್ದಾರೆ. ಮುನೀರ್ ಅಹ್ಮದ್ ಶೇಖ್ ಮರಣ ಹೊಂದಿರುವುದನ್ನು ಇರ್ಫಾನ್ ಶೇಖ್ ಸ್ವತಃ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಮೇತ ಹಾಕಿಕೊಂಡಿದ್ದರು. ಆದರೆ ಎಸ್​ಐಆರ್ ಪಟ್ಟಿಯಲ್ಲಿ ಅವರ ತಂದೆಯ ಹೆಸರು ಹೇಗೆ ಬಂತು ಎಂದು ಮರು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವೇ ಎಸ್​ಐಆರ್​ ಅಕ್ರಮದಲ್ಲಿ ಭಾಗವಹಿಸಿದೆ. ಈ ನಿಟ್ಟಿನಲ್ಲಿ ಚುನಾವಣಾಧಿಕಾರಿಗಳು ತನಿಖೆ ನಡೆಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಫಾರ್ಮ್-7 ದುರ್ಬಳಕೆ ಆರೋಪ: ಬಿಜೆಪಿ ಶಾಸಕನ ಹೆಸರು ಉಲ್ಲೇಖಿಸಿ ಸೌಮ್ಯಾ ರೆಡ್ಡಿ ದೂರು

ಸದ್ಯ ವಿಜಯಪುರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ವಾದ, ವಿವಾದದ ಕೇಂದ್ರವಾಗಿದೆ. ಮುಂದಿನ ದಿನಗಳಲ್ಲಿ ಈ ಆರೋಪ, ಪ್ರತ್ಯಾರೋಪ ಮತ್ತೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾಯ್ದು ನೀಡಬೇಕಿದೆ. ರಾಜಕೀಯ ಪಕ್ಷಗಳ ಜಟಾಪಟ್ಟ ಮಧ್ಯೆ ಸಾಮಾನ್ಯ ಮತದಾರರು ಗೊಂದಕ್ಕೀಡಾಗುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Thu, 8 October 26

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್