AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳೆದುಹೋಗಿದ್ದ 1.07 ಕೋಟಿ ರೂ. ಮೌಲ್ಯದ 537 ಮೊಬೈಲ್‌ಗಳು ಪತ್ತೆ; ವಾರಸುದಾರರಿಗೆ ಮರಳಿಸಿ ಖಾಕಿ

ವಿಜಯಪುರ ಪೊಲೀಸರು CEIR ಪೋರ್ಟಲ್ ಬಳಸಿ 537 ಕಳೆದುಹೋದ ಮೊಬೈಲ್‌ಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ. ₹1.07 ಕೋಟಿ ಮೌಲ್ಯದ ಈ ಫೋನ್‌ಗಳನ್ನು ಮಾಲೀಕರಿಗೆ ಹಸ್ತಾಂತರಿಸಲಾಗಿದೆ. ಮೊಬೈಲ್ ಕಳೆದುಕೊಂಡರೆ CEIR ಪೋರ್ಟಲ್‌ನಲ್ಲಿ ದೂರು ದಾಖಲಿಸುವಂತೆ ಎಸ್‌ಪಿ ಲಕ್ಷ್ಮಣ ನಿಂಬರಗಿ ಸಲಹೆ ನೀಡಿದ್ದಾರೆ. ಈ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕಳೆದುಹೋಗಿದ್ದ 1.07 ಕೋಟಿ ರೂ. ಮೌಲ್ಯದ 537 ಮೊಬೈಲ್‌ಗಳು ಪತ್ತೆ; ವಾರಸುದಾರರಿಗೆ ಮರಳಿಸಿ ಖಾಕಿ
Bijapur Police Recover 537 (1)
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 27, 2026 | 3:02 PM

Share

ವಿಜಯಪುರ,ಅ,27: ಜಿಲ್ಲೆಯಲ್ಲಿ ಮೊಬೈಲ್ ಕಳೆದುಕೊಂಡು ಆತಂಕದಲ್ಲಿದ್ದ ಸಾರ್ವಜನಿಕರಿಗೆ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಜಿಲ್ಲೆಯಾದ್ಯಂತ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಹಾಗೂ ಕಳ್ಳತನವಾಗಿದ್ದ ಬರೋಬ್ಬರಿ 537 ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇಂದ್ರ ಸರ್ಕಾರದ ತಂತ್ರಜ್ಞಾನ ಆಧಾರಿತ ಸಿಇಐಆರ್​​​ (Central Equipment Identity Register) ಪೋರ್ಟಲ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಪತ್ತೆ ಹಚ್ಚಲಾದ ಈ ಮೊಬೈಲ್‌ಗಳನ್ನು ಅವುಗಳ ನೈಜ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಒಟ್ಟು 1.07 ಕೋಟಿ ರೂಪಾಯಿ ಮೌಲ್ಯದ ಫೋನ್‌ಗಳು ವಶ

ಜಿಲ್ಲೆಯ ಎಲ್ಲಾ 28 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋದ ಮೊಬೈಲ್‌ಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಕಳೆದ ಮೂರು ತಿಂಗಳ ಅವಧಿಯಲ್ಲಿ ಸತತ ಪ್ರಯತ್ನ ನಡೆಸಿ 537 ಮೊಬೈಲ್‌ಗಳನ್ನು ಹುಡುಕಲಾಗಿದೆ. ಪತ್ತೆಯಾದ ಒಟ್ಟು 537 ಮೊಬೈಲ್‌ಗಳ ಅಂದಾಜು ಮೌಲ್ಯ ಬರೋಬ್ಬರಿ 1 ಕೋಟಿ 7 ಲಕ್ಷದ 40 ಸಾವಿರ ರೂಪಾಯಿ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕನ್ನಡ ಶಾಲೆಗಳ ಉಳಿವಿಗೆ ವಿಶೇಷ ಅಭಿಯಾನ: ಶಾಲೆಗಳನ್ನು ಉಳಿಸಲು ಹೊರಟ ಉನೈಸ್ ಪೆರಾಜೆ ಪಡೆ!

CEIR ಪೋರ್ಟಲ್ ಬಳಕೆ ಹೇಗೆ? – ಎಸ್ಪಿ ಲಕ್ಷ್ಮಣ ನಿಂಬರಗಿ ಸಲಹೆ:

ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ ಲಕ್ಷ್ಮಣ ನಿಂಬರಗಿ, “ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಅತ್ಯಗತ್ಯ. ಮೊಬೈಲ್ ಕಳೆದುಹೋದ ತಕ್ಷಣ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮೊಬೈಲ್‌ನ IMEI ಸಂಖ್ಯೆಯನ್ನು ಆಧರಿಸಿ ಕೇಂದ್ರ ಸರ್ಕಾರದ ಸಿಇಐಆರ್​​ ಪೋರ್ಟಲ್ ಮೂಲಕ ಪತ್ತೆ ಹಚ್ಚಬಹುದು. ಫೋನ್ ಕಳೆದುಹೋದ ತಕ್ಷಣ ಸಮೀಪದ ಠಾಣೆಯಲ್ಲಿ ದೂರು ದಾಖಲಿಸಿ, CEIR ಪೋರ್ಟಲ್‌ನಲ್ಲಿ ಬ್ಲಾಕ್ ಮಾಡಲು ಮನವಿ ಸಲ್ಲಿಸಿ” ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಕಳೆದುಹೋದ ಮೊಬೈಲ್ ಮತ್ತೆ ಸಿಗುವುದಿಲ್ಲ ಎಂದೇ ಭಾವಿಸಿದ್ದ ಸಾರ್ವಜನಿಕರು, ಪೊಲೀಸರ ಕಾರ್ಯಕ್ಷಮತೆಗೆ ಮನಸಾರೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ನಮ್ಮ ಸಾವಿರಾರು ರೂಪಾಯಿ ಮೌಲ್ಯದ ಫೋನ್ ಹಾಗೂ ಅದರಲ್ಲಿದ್ದ ಪ್ರಮುಖ ವೈಯಕ್ತಿಕ ಮಾಹಿತಿ ಮತ್ತೆ ನಮಗೆ ಸಿಕ್ಕಿರುವುದು ಅತ್ಯಂತ ಸಂತಸ ತಂದಿದೆ” ಎಂದು ಮೊಬೈಲ್ ಮರಳಿ ಪಡೆದ ಮುರ್ತುಬಾ ಖಿಲಾರಿ ಹಾಗೂ ಮಂಜುನಾಥ್ ಎಂಬುವವರು ಖಾಕಿ ಪಡೆಯ ಕಾರ್ಯವನ್ನು ಶ್ಲಾಘಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More