Sindagi By Election: ಮತಗಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಆಕ್ಷೇಪ!

ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದರು. ಚುನಾವಣಾಧಿಕಾರಿಗಳು ಮತಚೀಟಿಗಳನ್ನು ಸದ್ಯ ವಶಕ್ಕೆ ಪಡೆದಿದ್ದಾರೆ.

Sindagi By Election: ಮತಗಟ್ಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಬಿಜೆಪಿ ಆಕ್ಷೇಪ!
ಕಾಂಗ್ರೆಸ್ ಪಕ್ಷದ ಗುರುತು ಹಾಕಿ ಮತಚೀಟಿ ಹಂಚುತ್ತಿರುವ ಆರೋಪ ಕೇಳಿಬಂದಿದೆ
Follow us
TV9 Web
| Updated By: sandhya thejappa

Updated on:Oct 30, 2021 | 11:21 AM

ವಿಜಯಪುರ: ಇಂದು (ಅ.30) ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಸಂಜೆ ಏಳು ಗಂಟೆವರೆಗೆ ಮತದಾನ ನಡೆಯಲಿದೆ. ಒಟ್ಟು 2,34,584 ಜನರು ಮತದಾನ ಮಾಡಲಿದ್ದಾರೆ. ಆದರೆ ಸಿಂದಗಿ ಕ್ಷೇತ್ರದ ಬೋರಗಿ ಗ್ರಾಮದಲ್ಲಿ ಕಾಂಗ್ರೆಸ್ ವಿರುದ್ಧ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ ಭಾವಚಿತ್ರ ಹಾಗೂ ಕಾಂಗ್ರೆಸ್ ಪಕ್ಷದ ಗುರುತು ಹಾಕಿ ಮತ ಚೀಟಿ ಹಂಚುತ್ತಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ಚುನಾವಣಾಧಿಕಾರಿಗಳ ಗಮನಕ್ಕೆ ತಂದಿದ್ದರು. ಚುನಾವಣಾಧಿಕಾರಿಗಳು ಮತ ಚೀಟಿಗಳನ್ನು ಸದ್ಯ ವಶಕ್ಕೆ ಪಡೆದಿದ್ದಾರೆ.

ಸಿಂದಗಿಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಬೆಳಿಗ್ಗೆ 9 ಗಂಟೆವರೆಗೆ ಶೇ. 9.48 ರಷ್ಟು ಮತದಾನ ಮಾಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾನಗಲ್​ನಲ್ಲಿ ಬಿರುಸಿನಿಂದ ಮತದಾನ ಸಾಗುತ್ತಿದೆ. 9 ಗಂಟೆವರೆಗೆ ಶೇಕಡಾ 10.1ರಷ್ಟು ಮತದಾನ ನಡೆದಿದೆ. ಹುರುಪಿನಿಂದ ಮತಗಟ್ಟೆಗೆ ತೆರಳಿ ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ.

ವಿಡಿಯೋ ವೈರಲ್ ಮತ ಚಲಾಯಿಸಿದ ವಿಡಿಯೋವನ್ನು ಮತದಾರರು ವೈರಲ್ ಮಾಡುತ್ತಿದ್ದಾರೆ. ಗೌಪ್ಯವಾಗಿ ಇರಬೇಕಾದ ಮತದಾನವನ್ನು ವಿಡಿಯೋ ಮಾಡಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಪರ ಮತ ಚಲಾವಣೆ ಮಾಡಿ, ಅದನ್ನು ವಿಡಿಯೋ ಮಾಡಿ ಮತದಾರರು ಹರಿಬಿಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಪರ ಮತ ಚಲಾವಣೆ ಮಾಡಿದ ವಿಡಿಯೋವನ್ನೂ ವೈರಲ್ ಮಾಡುತ್ತಿದ್ದಾರೆ. ಚುನಾವಣಾ ಆಯೋಗದ ನಿಯಮವನ್ನು ಪಾಲನೆ ಮಾಡದೆ ಮತದಾರರು ವಿಡಿಯೋ ವೈರಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ

ಮಮತಾ ಬ್ಯಾನರ್ಜಿ ಬೆನ್ನಲ್ಲೇ ಗೋವಾಕ್ಕೆ ತೆರಳಿದ ರಾಹುಲ್ ಗಾಂಧಿ; ಇಂದು ಮೀನುಗಾರರೊಂದಿಗೆ ಮಾತುಕತೆ

Hangal, Sindgi Bypoll Voting: ಇಂದು ಹಾನಗಲ್, ಸಿಂದಗಿ ಉಪಚುನಾವಣೆಗೆ ಮತದಾನ

Published On - 11:08 am, Sat, 30 October 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?