ಪಂಚಮಸಾಲಿ ಹೋರಾಟ: ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್ ಕೊಟ್ಟ ಬಿಜೆಪಿ ಹೈಕಮಾಂಡ್

ಮಕರ ಸಂಕ್ರಾಂತಿಯಂದೇ ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕರೆ ಮಾಡಿ ಸಿಹಿ ಸುದ್ದಿ ಕೊಟ್ಟಿದೆ. ಹೈಕಮಾಂಡ್ ಜೊತೆಗಿನ ಮಾತುಕತೆಯನ್ನು ಯತ್ನಾಳ್ ಮಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಪಂಚಮಸಾಲಿ ಹೋರಾಟ: ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್ ಕೊಟ್ಟ ಬಿಜೆಪಿ ಹೈಕಮಾಂಡ್
ಬಸನಗೌಡ ಪಾಟೀಲ್ ಯತ್ನಾಳ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 15, 2023 | 3:56 PM

ವಿಜಯಪುರ: ಒಂದೆಡೆ 2ಎ ಮೀಸಲಾತಿಗೆ ಪಂಚಮಸಾಲಿ ಹೋರಾಟದ (panchamasali reservation Protest) ಕಿಚ್ಚು ಜೋರಾಗುತ್ತಿದ್ದರೆ, ಮತ್ತೊಂದೆಡೆ ಇದೇ ವಿಚಾರಕ್ಕೆ ಸಂಬಂಧ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹಾಗೂ ಸಚಿವ ಮುರುಗೇಶ್ ನಿರಾಣಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಇದರ ಮಧ್ಯೆ ಬಿಜೆಪಿ ಹೈಕಮಾಂಡ್​, ಯತ್ನಾಳ್​ಗೆ ಕರೆ ಮಾಡಿ ಗುಡ್​ನ್ಯೂಸ್​ ಕೊಟ್ಟಿದೆ. ಈ ಬಗ್ಗೆ  ಸ್ವತಃ ಯತ್ನಾಳ್ ಅವರೇ ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Jaya Mruthyunjaya Swami: ಪಂಚಮಸಾಲಿ ಸಮುದಾಯದ ಹೋರಾಟ ಶಿಗ್ಗಾಂವಿ ಸಿಎಂ ಮನೆಯಿಂದ ಬೆಂಗಳೂರಿಗೆ ಶಿಫ್ಟ್,

ಹೈಕಮಾಂಡ್​ ಕರೆ ಮಾಡಿರುವುದರ ಬಗ್ಗೆ ವಿಜಯಪುರದಲ್ಲಿಂದು(ಜ.15) ಮಾಧ್ಯಮಗಳೊಂದಿಗೆ ಹಂಚಿಕೊಂಡ ಯತ್ನಾಳ್, ಮೀಸಲಾತಿ ವಿಚಾರವಾಗಿ ಸಭೆ ನಡೆಸುವುದಾಗಿ ವರಿಷ್ಠರು ಹೇಳಿದ್ದಾರೆ. ನಮ್ಮ ಪಕ್ಷದ ವರಿಷ್ಠರು ಬೆಳಗ್ಗೆ ಕರೆ ಮಾಡಿ ಸಭೆ ಬಗ್ಗೆ ಹೇಳಿದ್ದಾರೆ. ಮಕರ ಸಂಕ್ರಮಣದ ಉತ್ತರಾಯಣದ ಶುಭ ಪ್ರಸಂಗದಲ್ಲಿ ನಿಲುವು ತೆಗೆದುಕೊಂಡಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆಯ ಪ್ರತಿಫಲ. ಆದಷ್ಟು ಬೇಗ ಶ್ರೀಗಳ ನೇತೃತ್ವದ ಕೇಂದ್ರ ನಾಯಕರ ಭೇಟಿಯಾಗುತ್ತೇವೆ. ಶೀಘ್ರವೇ ಕೇಂದ್ರ ಸರ್ಕಾರ ಒಳ್ಳೆಯ ಸುದ್ದಿ ಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಕ್ರಮಣ ಹಬ್ಬದ ಸಂಭ್ರಮ ಇದೆ. ಇಂದು ಒಳ್ಳೆಯ ಸುದ್ದಿಗಳನ್ನು ಮಾತನಾಡೋ ಸಂಕ್ರಮಣ. ಬಹಳ ಸಂತೋಷವಾಗಿದೆ. ನಮ್ಮ ಪಕ್ಷದ ಹೈಕಮಾಂಡ್ ಬೆಳಿಗ್ಗೆ ಕರೆ ಮಾಡಿ ಮೀಸಲಾತಿ ವಿಚಾರದಲ್ಲಿ ಸಭೆ ಕರೆಯೋದಾಗಿ ಹೇಳಿದ್ದಾರೆ. ನಿಮ್ಮ ಬೇಡಿಕೆ ಈಡೇರಿಸಲು ಹೈಕಮಾಂಡ್ ಅಸ್ತು ಎಂದಿದೆ ಎಂದು ಹೇಳಿದರು.

ಚಿಲ್ಲರೇ ವ್ಯಕ್ತಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದು ಎಂದು ಹೇಳಿದ್ದಾರೆ. ಹಾಗಾಗಿ ಚಿಲ್ಲರೆ ವ್ಯಕ್ತಿಗಳು, ಸಂಸ್ಕಾರ ಇಲ್ಲದ ವ್ಯಕ್ತಿಗಳ ಬಗ್ಗೆ ಇಂದು ಮಾತಾಡಲ್ಲ. ಪಕ್ಷದ ನಾಯಕರು ಎಲ್ಲವನ್ನೂ ಗಮನಿಸಿ ಹೇಳಿದ್ದಾರೆ. ​ಹಬ್ಬವಿರುವ ಕಾರಣ ಒಳ್ಳೆಯದ್ದನ್ನು ಮಾತನಾಡೋಣ ಎಂದರು.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ