AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ

ಸಿದ್ದರಾಮಯ್ಯನವರಿಗೆ ಅಧಿಕಾರ ಕಳೆದುಕೊಳ್ಳುವ ಭಯ ಶುರುವಾಗಿದೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದರೆ ನರೇಂದ್ರ ಮೋದಿಯವರ ಮನೆಗೆ ಹೋಗುತ್ತೇವೆಂದು ರೋಣ ಶಾಸಕ ಹೇಳುತ್ತಾನೆ. ಆ ಪುಣ್ಯಾತ್ಮನಿಗೇ ನಡೆಯಲು ಆಗುವುದಿಲ್ಲ, ಇನ್ನು ಮೋದಿಯವರ ಮನೆಗೆ ಹೋಗುವುದು ಅಸಾಧ್ಯ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಿಜಯಪುರದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.

ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು ಎಂದರೆ ಪಾಕಿಸ್ತಾನ, ಬಾಂಗ್ಲಾಕ್ಕೆ ಹೋಗಲಿ; ಬಸನಗೌಡ ಯತ್ನಾಳ್ ವಾಗ್ದಾಳಿ
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Sep 13, 2024 | 10:16 PM

Share

ವಿಜಯಪುರ: ಕೆಲವು ಸಮುದಾಯದವರಿಗೆ ಗಣಪತಿ ಹಬ್ಬದ ಸಂಭ್ರಮಾಚರಣೆ ಸಹಿಸಲು ಆಗುವುದಿಲ್ಲ. ಅಂಥವರು ಗಾಂಧಿ- ನೆಹರೂ ಸೇರಿ ಮಾಡಿರುವ ಪಾಕಿಸ್ತಾನಕ್ಕೆ ಹೋಗಬಹುದು. ಮೋದಿ, ಯೋಗಿ ಇರೋವರೆಗೂ ನೀವು ಇಲ್ಲಿ ಬಾಲ ಬಿಚ್ಚಲು ಸಾಧ್ಯವಿಲ್ಲ. ಹಿಂದೂ ಧರ್ಮ ಸನಾತನ ಧರ್ಮವಾಗಿದ್ದು, ಅದು ದೇವರಿಂದ ಉದಯವಾದ ಧರ್ಮ. ದೇಶದಲ್ಲಿ ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಹಿಂದೂಗಳ ಮೇಲೆ ದಬ್ಬಾಳಿಕೆ ನಡೆಯುತ್ತಿವೆ. ದೇಶದಲ್ಲಿ ಹಿಂದೂಗಳು ಹೇಳಿದಂತೆ ದೇಶ ನಡೆಯಬೇಕು. ಮುಸ್ಲಿಮರ ಮಸೀದಿ ಮುಂದೆ ಡ್ಯಾನ್ಸ್ ಮಾಡಬಾರದು, ಹಾಡು ಹಾಡಬಾರದು ಅಂದರೆ ಅವರಿಗಾಗಿ ಪ್ರತ್ಯೇಕವಾಗಿ ಪಾಕಿಸ್ತಾನ, ಬಾಂಗ್ಲಾದೇಶ ಇವೆ. ಅಲ್ಲಿಗೆ ಹೋಗಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಜಯಪುರ ನಗರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ವಿವೇಕಾನಂದ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಬಸನಗೌಡ ಯತ್ನಾಳ್, ಕಾಂಗ್ರೆಸ್​ನವರ ಕಾರಣದಿಂದ ಬಾಂಗ್ಲಾ ದೇಶದಂತೆ ಇಲ್ಲಿಯೂ ದಂಗೆ ಆಗುತ್ತದೆ. ಪಶ್ವಿಮ‌ ಬಂಗಾಳದಲ್ಲಿ ದೆವ್ವವೊಂದು ಅಧಿಕಾರದಲ್ಲಿದೆ ಎಂದು ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಮುಸ್ಲಿಂ‌ ಜಾತಿಯಲ್ಲಾದರೂ ಹುಟ್ಟಬೇಕಿತ್ತು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆಗಿ‌ ಕೊಲೆಯಾದರೂ ಮಹಿಳೆಯಾಗಿರೋ ಆ ಮುಖ್ಯಮಂತ್ರಿ ಮರುಕ ವ್ಯಕ್ಯಪಡಿಸಲಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಮಂಡ್ಯ ಗಲಭೆ: ನಾಗಮಂಗಲಕ್ಕೆ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ಸಿಎಂ ಸ್ಥಾನದಿಂದ ಸಿದ್ದರಾಮಯ್ಯನವರನ್ನು ಇಳಿಸಿದರೆ ಪ್ರಧಾನಿ ನರೇಂದ್ರ ಮೋದಿಯವರ ಮನೆಗೆ ಹೋಗುತ್ತೇವೆ ಎಂದು ರೋಣ ಶಾಸಕ ಹೇಳುತ್ತಾರೆ. ಈ ಕಾಂಗ್ರೆಸ್​ನವರಿಗೆ ಮೋದಿ ಮನೆಗೆ ಹೋಗಲು ಅಸಾಧ್ಯ. ಅವರ ಸುತ್ತ ಸೈನ್ಯ ಇದೆ, ಪೊಲೀಸ್ ಇಲಾಖೆಯಿದೆ. ಭಾರತದಲ್ಲಿ ಜೀವಂತ ಹಿಂದೂಗಳಿದ್ದಾರೆ. ಪ್ರಧಾನಿ ಮೋದಿ ಮನೆಗೆ ನುಗ್ಗಿದರೆ ಕಾಂಗ್ರೆಸ್‌ನವರು ಯಾರೂ ಉಳಿಯಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ.

ಮೀಸಲಾತಿಯನ್ನೇ ತೆಗೆದು ಹಾಕುತ್ತೇನೆ ಎಂದು ರಾಹುಲ್ ಗಾಂಧಿ ಹೇಳುತ್ತಾನೆ. ಈ ಬಗ್ಗೆ ದಲಿತರು ಚಿಂತಿಸಬೇಕು. ಇಷ್ಟು ದಿನ ಬಿಜೆಪಿ ಮೇಲೆ ಆರೋಪ ಹೊರಿಸುತ್ತಿದ್ದರು. ಬಿಜೆಪಿ ಬಂದರೆ ಮೀಸಲಾತಿ ತೆಗೆದು ಹಾಕುತ್ತಾರೆ, ದಲಿತರ ಹಕ್ಕು ಕಸಿದುಕೊಳ್ಳುತ್ತಾರೆ, ಸಂವಿಧಾನ ಬದಲಾವಣೆ ಆಗುತ್ತದೆ ಎಂದು ಹೇಳುತ್ತಿದ್ದರು. ಆದರೆ, ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 10 ವರ್ಷ ಆಯ್ತು. ಈ ಮೊದಲು ಅಟಲ್ ಬಿಹಾರಿ ವಾಜಪೇಯಿಯವರು ಕೂಡ ಪ್ರಧಾನಿಯಾಗಿದ್ದರು. ನಾವೇನಾದರೂ ಸಂವಿಧಾನವನ್ನು ಮುಟ್ಟಿದ್ದೇವಾ? ನಾವು ಸಂವಿಧಾನವನ್ನು ‌ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ನನ್ನ ಸಾಮರ್ಥ್ಯದ ಬಗ್ಗೆ ರಾಜ್ಯದ ಜನರಿಗೆ ಗೊತ್ತಿದೆ; ಕುಮಾರಸ್ವಾಮಿಗೆ ಗೃಹ ಸಚಿವ ಪರಮೇಶ್ವರ್ ತಿರುಗೇಟು

ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಯತ್ನಾಳ್, ನಮ್ಮ ಜನರು ಇನ್ನೂ ಜಾಗೃತರಾಗಿಲ್ಲ. ಹಿಂದೂಗಳು ಬುದ್ಧಿ ಕಲಿಯುತ್ತಿಲ್ಲ. ಇದು ಬಹಳ ಗಂಭೀರವಾದ ವಿಚಾರ ಎಂದು ವಿಜಯಪುರ ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Fri, 13 September 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More