ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡಬೇಕು: ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ

ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಉತ್ತಮವಾದ ಕೆಲಸ ಮಾಡಿದ್ದರು. ಜನ ಸಂಪರ್ಕದ ಕೊರತೆಯಿಂದ ಹಾನಗಲ್‌ನಲ್ಲಿ ಸೋಲಾಗಿದೆ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

ತಳವಾರ ಸಮುದಾಯಕ್ಕೆ ಎಸ್​ಟಿ ಪ್ರಮಾಣಪತ್ರ ನೀಡಬೇಕು: ಬಸನಗೌಡ ಪಾಟೀಲ ಯತ್ನಾಳ್ ಆಗ್ರಹ
ಬಸನಗೌಡ ಪಾಟೀಲ್ ಯತ್ನಾಳ್ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on: Nov 06, 2021 | 3:37 PM

ವಿಜಯಪುರ: ಇಲ್ಲಿನ ಸಿಂದಗಿ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಐತಿಹಾಸಿಕ ತೀರ್ಪು ನೀಡಿದ್ದಾರೆ. ಇದಕ್ಕೆ ಸಾಮೂಹಿಕ ನಾಯಕತ್ವ, ಕಾರ್ಯಕರ್ತರು ಕಾರಣ. ಇದರಲ್ಲಿ ಯಾವ ಪಂಚ ಪಾಂಡವರು, ಸಪ್ತ ಋಷಿಗಳು ಇಲ್ಲ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇಂದು (ನವೆಂಬರ್ 6) ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹೇಳಿದಂತೆ ಅಬಕಾರಿ ಸುಂಕ ಇಳಿಕೆ ಮಾಡಿದ್ದಾರೆ. ಇನ್ನು ಜಿಲ್ಲೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನುದಾನ ನೀಡಬೇಕು ಎಂದು ಸಿಎಂಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯ ಮಾಡಿದ್ದಾರೆ.

2023 ರಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎದುರಿಸಲಿದ್ದೇವೆ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಸಿ.ಎಂ. ಉದಾಸಿ ಅನಾರೋಗ್ಯ ಹಿನ್ನೆಲೆ ಜನರ ಸಂಪರ್ಕ ಇರಲಿಲ್ಲ. ಕೊರೊನಾ ಕಾಲದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಉತ್ತಮವಾದ ಕೆಲಸ ಮಾಡಿದ್ದರು. ಜನ ಸಂಪರ್ಕದ ಕೊರತೆಯಿಂದ ಹಾನಗಲ್‌ನಲ್ಲಿ ಸೋಲಾಗಿದೆ ಎಂದು ವಿಜಯಪುರ ನಗರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

ಉಪಚುನಾವಣೆಗಳಲ್ಲಿ ಬಿಜೆಪಿ ಚಿಂತಾಜನಕವಾಗಿ ಸೋತಿಲ್ಲ. ತೈಲ ಬೆಲೆ ಇಳಿಕೆಗೂ ಬೈಎಲೆಕ್ಷನ್ ರಿಸಲ್ಟ್‌ಗೂ ಸಂಬಂಧವಿಲ್ಲ. ಪೆಟ್ರೋಲ್ ಬೆಲೆ 100 ರೂ. ಆಗಿದ್ದು ದೊಡ್ಡ ವಿಚಾರವಲ್ಲ. ಇನ್ನೊಂದು ವರ್ಷದಲ್ಲಿ ದೇಶದಲ್ಲಿ ಬ್ಯಾಟರಿ ಚಾಲಿತ ವಾಹನ, ಸೋಲಾರ್ ವಾಹನಗಳು ರಸ್ತೆಗೆ ಇಳಿಯಲಿವೆ. ದೇಶಕ್ಕಾಗಿ ನಾವೂ ತ್ಯಾಗ ಮಾಡಬೇಕು ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ.

ತಳವಾರ, ಪರಿವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣ ಪತ್ರ ನೀಡಬೇಕೆಂದು ಯತ್ನಾಳ್ ಆಗ್ರಹ ವ್ಯಕ್ತಪಡಿಸಿದ್ದಾರೆ. ಎಸ್​ಟಿ ಪ್ರಮಾಣಪತ್ರ ನೀಡದಿದ್ರೆ ವಿಧಾನಸಭೆಯಲ್ಲೇ ಪ್ರತಿಭಟನೆ ನಡೆಸುವುದಾಗಿ ವಿಜಯಪುರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ತಿಳಿಸಿದ್ದಾರೆ. ಎಸ್‌ಟಿ ಸಮುದಾಯಕ್ಕೆ ಶೇಕಡಾ 7.5 ರಷ್ಟು ಮೀಸಲಾತಿ ನೀಡಲಿ. ಮರಾಠಾ, ಪಂಚಮಸಾಲಿ, ಆದಿಬಣಜಿಗ, ಕೂಡುಒಕ್ಕಲಿಗ ಇತರೆ ಸಮುದಾಯಗಳಿಗೆ 2A ಮೀಸಲಾತಿ ನೀಡಬೇಕು. ವಿಧಾನಸಭೆಯಲ್ಲಿ ಈ ಬಗ್ಗೆ ನಾನು ಪ್ರಸ್ತಾಪ ಮಾಡುತ್ತೇನೆ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಸ್, ಅಡುಗೆ ಎಣ್ಣೆ ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲೂ ಬಿಜೆಪಿಗೆ ಸೋಲಾಗಲಿದೆ: ಡಿಕೆ ಶಿವಕುಮಾರ್

ಇದನ್ನೂ ಓದಿ: ಉಪಚುನಾವಣೆಯಲ್ಲಿನ ಸೋಲಿನಿಂದಾಗಿಯೇ ಇಂಧನ ಬೆಲೆ ಕಡಿಮೆ ಮಾಡಿದ್ದು: ಕಾಂಗ್ರೆಸ್ ನಾಯಕ ಪಿ ಚಿದಂಬರಂ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್