ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟವನ್ನು ಭಜರಂಗದಳದ ಮೇಲೆ ಹಾಕುವವರಿದ್ದರು ಅಯೋಗ್ಯ ನನ್ಮಕ್ಕಳು: ಯತ್ನಾಳ್
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ರಾಜ್ಯ ಪ್ರಯೋಗ ಶಾಲೆಯಾಗಿದೆ. ಜನನಿಬಿಡ ಮಾರುಕಟ್ಟೆ, ಚಿತ್ರಮಂದಿರಗಳಲ್ಲಿ ಆಗಿದ್ದರೆ ಅನಾಹುತವಾಗುತ್ತಿತ್ತು. ಇವೆಲ್ಲ ನಿಭಾಯಿಸಲು ಆಗದಿದ್ದರೆ ಮನೆಗೆ ಹೋಗಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು.
ವಿಜಯಪುರ, ಮಾರ್ಚ್ 02: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ (Bengaluru Rameshwaram Cafe Bomb Blast) ಪ್ರಕರಣವನ್ನು ಭಜರಂಗದಳದ (Bajarangadal) ಮೇಲೆ ಹಾಕುವವರಿದ್ದರು ಅಯೋಗ್ಯ ನನ್ಮಕ್ಕಳು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಪರೋಕ್ಷವಾಗಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಜಯಪುರ ನಗರದ ರಾಣಿ ಬಗೀಚ್ ಪ್ರದೇಶಗಳಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉದ್ದೇಶ ಪೂರ್ವಕವಾಗಿ ಸ್ಫೋಟ ಮಾಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಆಗಿದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲೂ ಕಾಂಗ್ರೆಸ್ನವರು ಹೀಗೆ ಹೇಳಿದ್ದರು. ಸಿಎಂ ಸಿದ್ದರಾಮಯ್ಯ ಅವರಿಗೆ ಇವೆಲ್ಲ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.
ಭಯೋತ್ಪಾದನಾ ಕೃತ್ಯಗಳಿಗೆ ಕರ್ನಾಟಕ ಸಂರಕ್ಷಿತ ತಾಣವಾದಂತಾಗಿದೆ. ರಾಜ್ಯ ಪ್ರಯೋಗ ಶಾಲೆಯಾಗಿದೆ. ಜನನಿಬಿಡ ಮಾರುಕಟ್ಟೆ, ಚಿತ್ರಮಂದಿರಗಳಲ್ಲಿ ಆಗಿದ್ದರೆ ಅನಾಹುತವಾಗುತ್ತಿತ್ತು. ಇವೆಲ್ಲ ನಿಭಾಯಿಸಲು ಆಗದಿದ್ದರೆ ಮನೆಗೆ ಹೋಗಿ. ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ದಿನವೇ ಬ್ಲಾಸ್ಟ್ ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಮಾಡಿದ್ದಾರೆ. ಅಯೋಧ್ಯಾ ರಾಮ ಮಂದಿರ ನಿರ್ಮಾಣ ಸಹಿಸಲಾಗದೆ ಬ್ಲಾಸ್ಟ್ ಮಾಡಿದ್ದಾರೆ. ಇವರೆಲ್ಲ ನಾಶವಾಗುವ ಕಾಲ ಬಂದಿದೆ ಎಂದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರವಾಗಿ ಮಾತನಾಡಿದ ಅವರು, ಎಫ್ಎಸ್ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಸಾಬೀತಾಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು ನಿಜ. ಇದನ್ನು ಎಫ್ಎಸ್ಎಲ್ ಪರೀಕ್ಷೆಗೆ ಒಳಪಡಿಸುವುದು ಬೇಡ, ಪರೀಕ್ಷೆ ಅನವಶ್ಯಕ ಎಂದಿದ್ದೆ. ಆದರೂ ಕೂಡ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಜಿ. ಪರಮೇಶ್ವರ ಸಮರ್ಥನೆ ಮಾಡಿಕೊಂಡು, ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ಗೂ, ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಾಮ್ಯತೆ: ಸಿಎಂ, ಡಿಕೆಶಿ ಭಿನ್ನ ಹೇಳಿಕೆ
ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿಚಾರದಲ್ಲಿ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಇಂಥಹ ಘಟನೆಗಳು ರಾಜ್ಯದಲ್ಲಿ ಭಯೋತ್ಪಾದನೆಗೆ ಇಂಬು ಕೊಡುತ್ತಿವೆ ಎಂದು ಆಕ್ರೋಶ ವ್ಯಕ್ರಪಡಿಸಿದರು.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವೆ ಅಧಿಕಾರಕ್ಕೆ ಬರುತ್ತೇವೆ. ಸಮಾನ ನಾಗರಿಕ ಕಾಯ್ದೆ ಜಾರಿ ಮಾಡುತ್ತೇವೆ. ಒಂದು ಕುಟುಂಬಕ್ಕೆ ಎರಡೇ ಮಕ್ಕಳು ಅಂತ ಕಾನೂನು ಜಾರಿ ಮಾಡುತ್ತೇವೆ. ಯಾರಿಗೆ ಪಾಕಿಸ್ತಾನದ ಮೇಲೆ ಪ್ರೀತಿ ಇದೆ ಅವರು ಪಾಕಿಸ್ತಾನಕ್ಕೆ ಹೋಗಲಿ. ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವವರು ಅಲ್ಲಿ ಹೋಗಿ. ಮಾಯನ್ಮಾರ್ನಲ್ಲಿ ರೋಹಿಂಗ್ಯಾಗಳನ್ನು ಹೊಡೆದು ಹೊರ ಹಾಕಿದಂತೆ ಇಲ್ಲಿಯೂ ದೇಶ ದ್ರೋಹಿಗಳಿಗೆ ಹೊಡೆದು ಹೊರ ಹಾಕಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ