AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ ಬಸ್ ಪಲ್ಟಿ

ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿಗಳಿದ್ದ ಬಸ್ ಪಲ್ಟಿ
ಬಸ್​ ಪಲ್ಟಿ
ವಿವೇಕ ಬಿರಾದಾರ
|

Updated on:May 02, 2023 | 9:32 AM

Share

ವಿಜಯಪುರ: ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ ಸಿಬ್ಬಂದಿ ಸರ್ಕಾರಿ ಬಸ್ (Government Bus) ಪಲ್ಟಿಯಾಗಿರುವ ಘಟನೆ ಮುದ್ದೇಬಿಹಾಳ (Muddebihal) ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಜನ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 50 ಜನ ಚುನಾವಣಾ ಅಧಿಕಾರಿಗಳಿದ್ದ, ಕೆಎಸ್​ಆರ್​ಟಿಸಿ ಬಸ್ ಸಿಂದಗಿ ಪಟ್ಟಣದತ್ತ ತೆರಳುತ್ತಿತ್ತು. ಈ ವೇಳೆ ಆಕ್ಸೆಲ್ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ವೇಯಲ್ಲಿ ಸರಣಿ ಅಪಘಾತ; ಮೂವರು ಸ್ಪಾಟ್ ಡೆತ್

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್​​​ಪ್ರೆಸ್​ವೇಯಲ್ಲಿ (Bengaluru-Mysuru Expressway) ಅಪಘಾತಗಳಿಗೆ ಬ್ರೇಕ್ ಬೀಳುತ್ತಿಲ್ಲ. ಅಲ್ಲೊಂದು ಇಲ್ಲೊಂದು ದರ್ಘಟನೆಗಳು ಸಂಭವಿಸುತ್ತಲೇ ಇವೆ. ಇದೀಗ ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ನಡೆದ ದುರಂತದಲ್ಲಿ ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದರು. ಬೆಂಗಳೂರಿನಿಂದ ಮೈಸೂರಿಗೆ ಮೂವರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದರು. ಈ ವೇಳೆ ಮತ್ತೊಂದು ಕಾರು ಬಂದು ಅವರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿತ್ತು.

ಒಂದೇ ಬೈಕ್​ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೂವರು ಮುಂಭಾಗದಲ್ಲಿ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್​ನಲ್ಲಿದ್ದ ಮೂವರು ಹೆದ್ದಾರಿಗೆ ಬಿದ್ದಿದ್ದರು. ಇದೇ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಗೆ ಬಿದ್ದ ಮೂವರು ಅಲ್ಲೇ ಕೊನೆಯುಸಿರೆಳೆದಿದ್ದರು. ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಅಪಘಾತಗಳಲ್ಲಿ ಉಂಟಾಗುವ ಅಧಿಕ ರಕ್ತಸ್ರಾವ ನಿಲ್ಲಿಸಲು 2 ಘಟಕಗಳನ್ನು ಅಭಿವೃದ್ಧಿಪಡಿಸಿದ MIT ಸಂಶೋಧಕರು

ಇತ್ತೀಚೆಗಷ್ಟೇ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದರು. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಟೈರ್​ ಸ್ಫೋಟಗೊಂಡು ನಿಯಂತ್ರಣತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿತ್ತು.

ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ಬೆಂಗಳೂರಿನ ಕೆಂಗೇರಿಯಲ್ಲಿ ನೆಲೆಸಿದ್ದ ರವಿ ಪೂಜಾರ್​ ಕುಟುಂಬಸ್ಥರು ಬೆಂಗಳೂರಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಕೆಎಸ್‌ಆರ್‌ಟಿಸಿ ಬಸ್ ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಬೈಕ್​ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಳೆದ ತಿಂಗಳು ಸಂಭವಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 am, Tue, 2 May 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ