ವಿಜಯಪುರದಲ್ಲೊಂದು ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಸ್ವಿಫ್ಟ್ ಡಿಸೈರ್ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿವೇಗದಿಂದ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರನ್ನು ಉತ್ನಾಳ ಮತ್ತು ಜುಮನಾಳ ಗ್ರಾಮಗಳ ನಿವಾಸಿಗಳೆಂದು ಗುರುತಿಸಲಾಗಿದೆ.

ವಿಜಯಪುರ, ಮಾರ್ಚ್ 17: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ಘಟನೆ ವಿಜಯಪುರ (Vijayapura) ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ದುರ್ಘಟನೆ ನಡೆದಿದೆ. ಉತ್ನಾಳದ ಬೀರಪ್ಪ ಗೋಡೆಕರ್(30), ಹಣಮಂತ ಕಡ್ಲಿಮಟ್ಟಿ(25) ಮತ್ತು ಜುಮನಾಳ ಗ್ರಾಮದ ಯಮನಪ್ಪ ನಾಟೀಕಾರ್(19) ಮೃತರು. ಕಾರು ಚಾಲಕನ ಅತಿವೇಗದಿಂದ ಅಪಘಾತ ಸಂಭವಿಸಿರುವ ಮಾಹಿತಿ ಇದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ಸ್ವಿಫ್ಟ್ ಡಿಸೈರ್ ಕಾರು KA 28, Z 0379 ಕಾರು ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಸದ್ಯ ಶವಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಶಿಫ್ಟ್ ಮಾಡಲಾಗಿದೆ. ಉಮೇಶ್ ಭಜಂತ್ರಿ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು: ನಾಲ್ವರು ಪ್ರಾಣಾಪಾಯದಿಂದ ಪಾರು
ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕಲ್ಲಾಪು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಮಂಗಳೂರಿನಿಂದ ತಲಪಾಡಿ ಕಡೆ ಕಾರು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಕಾರಿನಲ್ಲಿ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪಾಗಲ್ ಪ್ರೇಮಿ ಕಾಟ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು
ಪಾಗಲ್ ಪ್ರೇಮಿ ಕಾಟ ತಾಳಲಾರದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ 16 ವರ್ಷದ ಬಾಲಕಿ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿಯ ಘಟಪ್ರಭಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಗಲ್ ಪ್ರೇಮಿ ಸಿದ್ದಲಿಂಗ ಪೂಜಾರಿ(21) ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಸ್ನೇಹಿತರಿಂದಲೇ ಗೆಳೆಯನ ಬರ್ಬರ ಹತ್ಯೆ: ತಲೆ ಮೇಲೆ ಕಲ್ಲೆತ್ತಿ ಹಾಕುವ ಭಯಾನಕ ದೃಶ್ಯ ಸೆರೆ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ಪೋಷಕರು ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಮೈಕ್ರೋ ಫೈನಾನ್ಸ್ನಿಂದ ಕಿರುಕುಳ ಆರೋಪ: ವ್ಯಕ್ತಿ ಆತ್ಮಹತ್ಯೆ
ಮೈಕ್ರೋ ಫೈನಾನ್ಸ್ನಿಂದ ಕಿರುಕುಳ ಆರೋಪ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಜಾಲಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್(34) ಮೃತ ವ್ಯಕ್ತಿ. ಎಲ್ & ಟಿ ಫೈನಾನ್ಸ್ ಸೇರಿ ಐದಾರು ಕಡೆ ಸಾಲಮಾಡಿಕೊಂಡಿದ್ದರು. ಕಿರುಕುಳದಿಂದ ಬೇಸತ್ತು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:48 pm, Mon, 17 March 25