AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಡೆಂಗ್ಯೂ, ಚಿಕೂನ್​ಗುನ್ಯಾ ಉಲ್ಭಣ; ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು

ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಗ್ಯೂ, ಚಿಕೂನ್​ಗುನ್ಯಾ ರೋಗ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಈಗ ಮಳೆಯಿಲ್ಲದೇ ಬರಗಾಲ ಇದ್ದರೂ ಈ ರೋಗಗಳ ಕಾಟ ತಪ್ಪಿಲ್ಲ. ಇದಕ್ಕಿದ್ದಂತೆ ವಿಜಯಪುರ ಜಿಲ್ಲೆಯಲ್ಲಿ ರೋಗ ಲಕ್ಷಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಕಳೆದ 9 ತಿಂಗಳಲ್ಲಿ 117 ಚಿಕೂನ್​ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ 206 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

ವಿಜಯಪುರದಲ್ಲಿ ಡೆಂಗ್ಯೂ, ಚಿಕೂನ್​ಗುನ್ಯಾ ಉಲ್ಭಣ; ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು
ಪ್ರಾತಿನಿಧಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: ಆಯೇಷಾ ಬಾನು|

Updated on: Oct 04, 2023 | 12:46 PM

Share

ವಿಜಯಪುರ, ಅ.04: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಡೆಂಗ್ಯೂ (Dengue), ಚಿಕೂನ್​ಗುನ್ಯಾ (Chikungunya) ರೋಗಗಳ ಕಾಟ ಉಲ್ಭಣಗೊಂಡಿದೆ. ಜನವರಿಯಿಂದ ಸೆಪ್ಟೆಂಬರ್​ ಅಂತ್ಯದವರೆಗೆ ಅಂದರೆ ಕಳೆದ 9 ತಿಂಗಳಲ್ಲಿ 117 ಚಿಕೂನ್​ಗುನ್ಯಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಹಾಘೂ 206 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿವೆ. ಈ ಬಗ್ಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸೋ ಮೂಲಕ ಸಾಂಕ್ರಾಮಿಕ ರೋಗಗಳ ತಡೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಡೆಂಗ್ಯೂ, ಚಿಕೂನ್​ಗುನ್ಯಾ ರೋಗ ಹೆಚ್ಚಾಗಿ ಕಂಡು ಬರುತ್ತದೆ. ಆದರೆ ಈಗ ಮಳೆಯಿಲ್ಲದೇ ಬರಗಾಲ ಇದ್ದರೂ ಈ ರೋಗಗಳ ಕಾಟ ತಪ್ಪಿಲ್ಲ. ಇದಕ್ಕಿದ್ದಂತೆ ವಿಜಯಪುರ ಜಿಲ್ಲೆಯಲ್ಲಿ ರೋಗ ಲಕ್ಷಣಗಳು ಹೆಚ್ಚಾಗಿ ಕಂಡು ಬರುತ್ತಿವೆ. ಕಳೆದ 9 ತಿಂಗಳಲ್ಲಿ 117 ಚಿಕೂನ್​ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ. ಜೊತೆಗೆ 206 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. 2,164 ಜನ ಶಂಕಿತರ ರಕ್ತದ ಮಾದರಿಯಲ್ಲಿ 206 ಡೆಂಗ್ಯೂ ಪತ್ತೆಯಾಗಿದೆ. 1,107 ಶಂಕಿತ ಜನರ ರಕ್ತದ ಮಾದರಿಯಲ್ಲಿ 117 ಚಿಕೂನ್ ಗುನ್ಯಾ ರೋಗ ಪತ್ತೆಯಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 2022ರಲ್ಲಿ 114 ಡೆಂಗ್ಯೂ ಹಾಗೂ 85 ಚಿಕೂನ್​ಗುನ್ಯಾ ಪ್ರಕರಣಗಳು ದೃಢವಾಗಿದ್ದವು. ಸದ್ಯ ಡೆಂಗ್ಯೂ, ಚಿಕೂನ್​ಗುನ್ಯಾ ರೋಗಗಳ ತಡೆಗೆ ಕ್ರಮ ತೆಗೆದುಕೊಳ್ಳೋದಾಗಿ ಆಧಿಕಾರಿಗಳು ತಿಳಿಸಿದ್ದಾರೆ. ಲಾರ್ವಾ ಸರ್ವೆ, ಫಾಗ್ ಸ್ಪ್ರೇ ಮಾಡುವ ಮೂಲಕ ರೋಗಗಳ ತಡೆಗೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಆರೋಗ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಜನರಲ್ಲಿ ಜಾಗೃತಿ ಮೂಡಿಸೋ ಮೂಲಕ ಸಾಂಕ್ರಾಮಿಕ ರೋಗಗಳ ತಡೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ:  ಪ್ಯಾರಸಿಟಮಾಲ್​​ನ ಅಡ್ಡಪರಿಣಾಮಗಳನ್ನು ಪ್ರತಿಯೊಬ್ಬ ಡೆಂಗ್ಯೂ ರೋಗಿಯು ತಿಳಿದುಕೊಳ್ಳಲೇಬೇಕು, ಏನದು? ಇಲ್ಲಿದೆ ಮಾಹಿತಿ

ಡೆಂಗ್ಯೂ ಲಕ್ಷಣಗಳು

ಈಡಿಸ್​ ಈಜಿಪ್ಟಿ ಎಂಬ ಸೊಳ್ಳೆಗಳಿಂದ ಡೆಂಗ್ಯೂ ಹರಡುತ್ತದೆ. ಈ ರೋಗದ ಲಕ್ಷಣ ನಾಲ್ಕರಿಂದ ಏಳು ದಿನವರೆಗೆ ಕಂಡುಬರುತ್ತದೆ. ಸಾಮಾನ್ಯ ಜ್ವರ, ಸ್ನಾಯು ಮತ್ತು ಬೆನ್ನು ನೋವು ಕಂಡು ಬರುತ್ತದೆ. ತೀವ್ರತರ ರೋಗ ಹೊಂದಿರುವವರಲ್ಲಿ ಡೆಂಗ್ಯೂ ಹೆಮರಾಜಿಕ್​ ಅಥವಾ ಆಘಾತ ಸಿಂಡ್ರೋಮ್​ ಲಕ್ಷಣ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಬೇಕು. ಡೆಂಗ್ಯೂ ಪತ್ತೆಯ ಪರೀಕ್ಷೆ ಎನ್​ಎಸ್​1 ಅನ್ನು ಪಡೆಯಬಹುದು.

ವಿಜಯಪುರ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More