ವಿಜಯಪುರದ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿ ಮತ್ತು ರೈತರ ನಡುವೆ ಗಲಾಟೆ, ರಸ್ತೆಗೆ ಹೂವು ಎಸೆದು ಪ್ರತಿಭಟನೆ

ವಿಜಯಪುರದಲ್ಲಿ ರೈತರಿಗೆಂದೇ ಇರುವ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಮಾರಾಟ ಮಾಡಲು ಯಾವುದೇ ಅನುಮತಿಯಿಲ್ಲದಿದ್ದರೂ ಅಕ್ರಮವಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

ವಿಜಯಪುರ ಸೆ.15: ನಗರದ ಉಪ್ಪಲಿ ಬುರ್ಜ್ ಬಳಿಯ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿ (Broker) ಮತ್ತು ರೈತರ (Farmer) ನಡುವಿನ ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ದಲ್ಲಾಳಿಗಳು ಬೇರೆ ಬೇರೆ ಜಿಲ್ಲೆಗಳಿಂದ ಹೂವು ತರಿಸಿ, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಇಂದು (ಸೆ.15) ದಲ್ಲಾಳಿಗಳ ವಿರುದ್ಧ ಘೋಷಣೆ ಕೂಗಿ ರಸ್ತೆ ಮೇಲೆ ಹೂವು ಚೆಲ್ಲಿ, ಪ್ರತಿಭಟನೆ ಮಾಡಿದ್ದಾರೆ.
ದಲ್ಲಾಳಿಗಳ ಈ ಕ್ರಮದಿಂದ ನಮಗೆ ನಷ್ಟವಾಗುತ್ತಿದೆ. ರೈತರಿಗೆಂದೇ ಇರುವ ಹೂವಿನ ಮಾರುಕಟ್ಟೆಯಲ್ಲಿ ದಲ್ಲಾಳಿಗಳು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಮಾರಾಟ ಮಾಡಲು ಯಾವುದೇ ಅನುಮತಿಯಿಲ್ಲದಿದ್ದರೂ ಅಕ್ರಮವಾಗಿ ವ್ಯಾಪಾರ ವಹಿವಾಟು ಮಾಡುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರೈತರು ಆಗ್ರಹಿಸಿದ್ದಾರೆ.

ಸೇವಂತಿ ಹೂವಿನ ದರ ಕುಸಿತ ಹಿನ್ನೆಲೆ ಸಸಿಗಳನ್ನ ನಾಶ ಮಾಡಿದ ರೈತ‌

ಮಂಡ್ಯ: ಸೇವಂತಿ ಹೂವಿನ ದರ ಕುಸಿತಗೊಂಡ ಹಿನ್ನೆಲೆಯಲ್ಲಿ ಪಾಂಡವಪುರ ತಾಲೂಕಿನ ಬೆಳ್ಳಾಳೆ ಗ್ರಾಮದ ರೈತ‌ ಹೂವಿನ ಗಿಡಗಳನ್ನು ನಾಶ ಮಾಡಿದ್ದಾರೆ. ಬೆಲೆ ಇಳಿಯಾಗಿದ್ದರಿಂದ, ಹೂವಿನ‌ ಕೃಷಿಗೆ ಖರ್ಚು ಮಾಡಿದ ಹಣ ಕೂಡ ಬರುವುದಿಲ್ಲ. ಹೀಗಾಗಿ ರೈತ ಅಭಿಷೇಕ್ ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೂವಿನ ಸಸಿಗಳನ್ನು ಟ್ರ್ಯಾಕ್ಟರ್​ನಿಂದ ನಾಶ ಮಾಡಿದ್ದಾರೆ. ಇನ್ನು ಕೆಲವು ರೈತರು ಹೂಗಳನ್ನು ನದಿಗೆ ಎಸೆದು ಬರಿಗೈಲಿ ವಾಪಸು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:54 am, Fri, 15 September 23

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Loading...
Unable to load recommendations.
Follow Us