Vijayapura News: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; 6 ಜನರಿಗೆ ಗಾಯ, 8 ವಾಹನ ಜಖಂ

| Updated By: Digi Tech Desk

Updated on: Dec 27, 2022 | 5:28 PM

ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನಡೆದಿದೆ.

Vijayapura News: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ; 6 ಜನರಿಗೆ ಗಾಯ, 8 ವಾಹನ ಜಖಂ
ವಾಹನದ ಗಾಜು ಪುಡಿ ಪುಡಿ, ಮನೆಯ ಸಾಮಾಗ್ರಿಗಳು ಚೆಲ್ಲಾಪಿಲ್ಲಿ
Follow us on

ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ (Groups) ನಡುವೆ ಗಲಾಟೆ (Clash) ನಡೆದಿರುವ ಘಟನೆ ಜಿಲ್ಲೆಯ ತಾಳಿಕೋಟೆ (Talikote) ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಇಂದು (ಡಿ.27) ನಡೆದಿದೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಡಿವೆ. ಇದರಿಂದ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಘಟನೆಯಲ್ಲಿ 5 ಬೈಕ್​ಗಳು, 1 ಕ್ರೂಸರ್, 2 ಗೂಡ್ಸ್ ವಾಹನಗಳಿಗೆ ಹಾನಿಯಾಗಿದೆ. ವಾಹನಗಳ ಗ್ಲಾಸುಗಳು ಪುಡಿಯಾಗಿವೆ. ಬೈಕ್​ಗಳು ನೆಲಕ್ಕೆ ಬಿದ್ದು ಹಾನಿಗೀಡಾಗಿವೆ. ಘಟನಾ ಸ್ಥಳಕ್ಕೆ ತಾಳಿಕೋಟೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯಪುರ ಗುಂಪು ಘರ್ಷಣೆ ವಿಡಿಯೋ

ನಿನ್ನೆ (ಡಿ.26) ರಾತ್ರಿ ವೈಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಜಗಳವಾಗಿತ್ತು. ಈ ವೇಳೆ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಎಲ್ಲರಿಗೂ ಎಚ್ಚರಿಕೆ ನೀಡಿ, ಪರಿಸ್ಥಿತಿ ತಿಳಿಗೊಳಿಸಿದ್ದರು. ಆದರೆ ಇಂದು (ಡಿ. 27) ಅದೇ ಎರಡು ಗುಂಪಿನವರು ಮತ್ತೆ ಜಗಳ ಮಾಡಿ ಘರ್ಷಣೆಗೆ ಕಾರಣವಾಗಿದ್ದಾರೆ. ಗ್ರಾಮದಲ್ಲಿ ತಾಳಿಕೋಟೆ ಪೊಲೀಸರು ಬೀಡು ಬಿಟ್ಟಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮ ತೆಗೆದುಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಂತೆ ಭದ್ರತೆ ನಿಯೋಜನೆ ಮಾಡಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Tue, 27 December 22