AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಣೆ, ಸೆ.4ರ ಸಭೆ ಬಳಿಕ ಬರ ತಾಲೂಕುಗಳ ಹೆಸರು ಘೋಷಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ‌ ವಾಡಿಕೆಗಿಂತ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರ ಕುರಿತು ಚರ್ಚೆ ಮಾಡಲಾಗಿದೆ. ಜಂಟಿ‌ ಸರ್ವೆ ಮಾಡಲಾಗಿದೆ. 113 ತಾಲೂಗಳಲ್ಲಿ ಬರವಿದೆ. ಈ ಬಗ್ಗೆ ಸಪ್ಟೆಂಬರ್ 4 ರಂದು ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂದು‌ ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Sep 02, 2023 | 3:00 PM

ವಿಜಯಪುರ, ಸೆಪ್ಟೆಂಬರ್​ 02: ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್​ಬಹದ್ದೂರ್ ಶಾಸ್ತ್ರಿ ಆಣೆಕಟ್ಟಿನ (Alamatti Dam) ಹಿನ್ನೀರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು (ಸೆ.02) ಗಂಗಾ ಪೂಜೆ ನರೆವೇರಿಸಿ, ಬಾಗಿನ ಅಪರ್ಪಿಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಇಂದು‌ ನಾನು, ನೀರಾವರಿ ಸಚಿವ ಡಿಕೆ ಶಿವಕುಮಾರ್​ ಹಾಗೂ ಇತರ ಸಚಿವರು, ಸಂಸದರು ಮತ್ತು ಶಾಸಕರು ಕೃಷ್ಣೆಗೆ ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಣೆ ಮಾಡಿದ್ದೇವೆ. ಡ್ಯಾಂ 519.60 ಮೀಟರ್ ಇದ್ದು, 519.55 ಮೀಟರ್ ನೀರು ಸಂಗ್ರಹವಿದೆ ಎಂದರು.

ರಾಜ್ಯದಲ್ಲಿ ಮಳೆ‌ ವಾಡಿಕೆಗಿಂತ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯದ ಬರ ಕುರಿತು ಚರ್ಚೆ ಮಾಡಲಾಗಿದೆ. ಜಂಟಿ‌ ಸರ್ವೆ ಮಾಡಲಾಗಿದೆ. 113 ತಾಲೂಗಳಲ್ಲಿ ಬರವಿದೆ. ಈ ಬಗ್ಗೆ ಸಪ್ಟೆಂಬರ್ 4 ರಂದು ಸಭೆ ನಡೆಯಲಿದೆ. ಸಭೆ ಬಳಿಕ ಎಷ್ಟು ತಾಲೂಕುಗಳಲ್ಲಿ ಬರ ಇದೆ ಎಂದು‌ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

ಬರ ವಿಚರಾದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ‌ ಸಲ್ಲಿಕೆ ಮಾಡಿದ್ದೇನೆ. ಎನ್​ಡಿಆರ್​ಎಫ್​ ನಿಮಯ‌ದ ಪ್ರಕಾರ ಬರ ಪರಿಹಾರ ಸಿಗಲಿದೆ. ಎನ್​ಡಿಆರ್​ಎಫ್ ನಿಯಮ ಬದಲಾವಣೆಗೆ ಕೇಂದ್ರಕ್ಕೆ ಪತ್ರ ಬರೆದಿದ್ದೇನೆ. ನೀರಾವರಿಗಾಗಿ ಬಜೆಟ್‌ನಲ್ಲಿ 21000 ಕೋಟಿ ರೂ. ಮೀಸಲು ‌ಇಡಲಾಗಿದೆ. ಭದ್ರಾ ಯೋಜನೆಗೆ 5300 ಕೋಟಿ ರೂ. ಕೇಂದ್ರದಿಂದ ಬರಬೇಕು. ಆದರೆ ಕೇಂದ್ರ ಸರ್ಕಾರ ಈವರೆಗೂ ಹಣ ನೀಡಿಲ್ಲ. ಯುಕೆಪಿಗೆ 1200 ಕೋಟಿ ಮಾತ್ರ ಇಡಲಾಗಿದೆ. ಇನ್ನೂ ಹೆಚ್ಚಿನ ಮೊತ್ತ ನೀಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಸಚಿವರಷ್ಟೇ ಅಲ್ಲ; ಈಗ ಅಧಿಕಾರಿಗಳೂ ಕ್ಯಾರೇ ಅಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಮತ್ತೆ ಪತ್ರ ಬರೆದ ಶಾಸಕ ಬಸವರಾಜ ರಾಯರೆಡ್ಡಿ

ಕೃಷ್ಣಾನದಿ ಜಲ‌‌ವಿವಾದ ಕುರಿತು ತೆಲಂಗಾಣ, ಆಂದ್ರ ಕ್ಯಾತೆ ತೆಗೆದಿದೆ. ಇದೇ‌ ನೆಪದಿಂದ ಗೆಜೆಟ್ ನೋಟಿಫಿಕೇಶನ್ ‌ಮಾಡಿಲ್ಲ. ಹೀಗಾಗಿ ಮೂರನೇ ಹಂತದ ಯೋಜನೆಗೆ ಅಡ್ಡಿಯಾಗಿದೆ. ಇನ್ನು ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಮಾತನಾಡಿ 5000 ಕ್ಯೂಸೆಕ್ ನೀರು ಬಿಡಲು ಆದೇಶ ಆಗಿದೆ. ತಮಿಳುನಾಡಿ 24000 ಕ್ಯೂಸೆಕ್ ಬಿಡಲು ಒತ್ತಾಯಿಸಿತ್ತು. ಹಾಗೇ ಮಹಾದಾಯಿ, ಮೇಕೆದಾಟು‌ ಯೋಜನೆ ಕಾಮಗಾರಿ ಶೀಘ್ರವೇ ಆರಂಭಿಸುತ್ತೇವೆ ಎಂದು ಭರವಸೆ ನೀಡಿದರು.

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ: ಡಿಕೆ ಶಿವಕುಮಾರ್​

ಕಾವೇರಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಿಲ್ಲ. ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕಿದೆ. ಅದನ್ನು ನಮ್ಮ ಅಧಿಕಾರಿಗಳ ತಂಡ, ತಾಂತ್ರಿಕ ತಂಡ ನಿರ್ವಹಿಸಲಿದೆ. ಕಂದಾಯ ಸಚಿವರು, ಶಾಸಕರ ಸಭೆ ಕರೆಯಲಾಗಿದೆ. ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಹೇಳಿದರು.

ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆಯ ಬಳಿಕ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಕೃಷ್ಣ ಮೇಲ್ದಂಡೆ ಯೋಜನೆ 3ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆ ನಡೆಸಿದರು. ಕೆಬಿಜೆಎನ್​ಎಲ್​ ಎಂಡಿ ಶಿವಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Sat, 2 September 23