ವಿಜಯಪುರ ಮಹಾನಗರ ಪಾಲಿಕೆ ಕೊನೆಗೂ ಕಾಂಗ್ರೆಸ್​ ತೆಕ್ಕೆಗೆ, ಯತ್ನಾಳ್​ಗೆ ಮುಖಭಂಗ

Vijayapura corporation mayor And deputy mayor Election: ಜಿದ್ದಾಜಿದ್ದಿಯಿಂದ ಕೂಡಿದ್ದ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ವಿಜಯಪುರ ಮಹಾನಗರ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಯತ್ನಾಳ್​​ಗೆ ಮುಖಭಂಗವಾಗಿದೆ.

ವಿಜಯಪುರ ಮಹಾನಗರ ಪಾಲಿಕೆ ಕೊನೆಗೂ ಕಾಂಗ್ರೆಸ್​ ತೆಕ್ಕೆಗೆ, ಯತ್ನಾಳ್​ಗೆ ಮುಖಭಂಗ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Jan 09, 2024 | 3:29 PM

ವಿಜಯಪುರ, (ಜನವರಿ 09): ತೀವ್ರ ಕುತೂಹಲ ಮೂಡಿಸಿದ್ದ ವಿಜಯಪುರ(Vijayapura) ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಎರಡೂ ಸ್ಥಾನದಲ್ಲಿ ಕಾಂಗ್ರೆಸ್(Congress) ​ ಜಯಭೇರಿ ಬಾರಿಸಿದೆ. ವಿಜಯಪುರ ಪಾಲಿಕೆ ಮೇಯರ್​ ಆಗಿ ಕಾಂಗ್ರೆಸ್​ನ ಮೆಹಜಬೀನ್ ಹೊರ್ತಿ ಆಯ್ಕೆಯಾಗಿದ್ದರೆ, ಉಪ ಮೇಯರ್​ ಆಗಿ ಕಾಂಗ್ರೆಸ್​​ನ ದಿನೇಶ್ ಹಳ್ಳಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿಜಯಪುರ ಮಹಾನಗರ ಪಾಲಿಕೆಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಬಿಜೆಪಿ(BJP) ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ (Basangpuda Patil Yatnal) ಮುಖಭಂಗವಾಗಿದೆ.

ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ವಿಜಯಪುರ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹೆಜಬೀನ್ ಹೊರ್ತಿ ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇನ್ನು ಎಸ್ ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್ಸಿನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್​ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.

ಇನ್ನು ಬಿಜೆಪಿಯ 16 ಸದಸ್ಯರು ಹಾಗೂ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣಾ ಪ್ರಕ್ರಿಯೆಯನ್ನು ಬಹಿಷ್ಕರಿವು ಮೂಲಕ ಸೋಲೊಪ್ಪಿಕೊಂಡಿದ್ದಾರೆ. ಅಲ್ಲದೇ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯತ್ನಾಳ್ ಹಾಗೂ ಬಿಜೆಪಿ ಸದಸ್ಯರು ಕಪ್ಪುಪಟ್ಟಿ ಪ್ರದರ್ಶಿಸಿದರು.

ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆಣ್ಣನವರ್ ಸರ್ಕಾರದ ಕೈಗೊಂಬೆಯಾಗಿ ವರ್ತನೆ ಮಾಡುತ್ತಿದ್ದಾರೆಂದು ಆರೋಪಿಸಿ ಬಿಜೆಪಿ ನಾಯಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ಪಾಲಿಕೆಯ ಬಿಜೆಪಿ ಸದಸ್ಯ ವಿಜಯಕುಮಾರ್ ಬಿರಾದಾರ್ ನಿಧನರಾಗಿರುವ ಕಾರಣ ಚುನಾವಣೆ ಮುಂದೂಡುವಂತೆ ಮನವಿ ಮಾಡಿದ್ದೆವು. ಈ ಕುರಿತು ಕಲಬುರಗಿಯ ಹೈಕೋರ್ಟಿಗೂ ಅರ್ಜಿ ಸಲ್ಲಿಕೆ ಮಾಡಿದ್ದೆವು. ಅರ್ಜಿ ವಿಚಾರಣೆ ಹಾಗೂ ನಮ್ಮ ಮನವಿಯನ್ನ ಆಲಿಸದೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಮುಂದಾದರು. ಈ ಕಾರಣದಿಂದ ಚುನಾವಣಾ ಪ್ರಕ್ರಿಯೆ ಬಹಿಷ್ಕರಿಸಿದ್ದಾಗಿ ಸ್ಪಷ್ಟಪಡಿಸಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ