ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ಇಳಿದ ಕಾಂಗ್ರೆಸ್; 9 ತಂಡ ರಚಿಸಿ ರಾಜ್ಯಾದ್ಯಂತ ಹೋರಾಟ, ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ತಟ್ಟಲಿದೆ ಬಿಸಿ

ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಹೊಸಪೇಟೆಯಲ್ಲಿಂದು ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ವೇಳೆಯೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ಇಳಿದ ಕಾಂಗ್ರೆಸ್; 9 ತಂಡ ರಚಿಸಿ ರಾಜ್ಯಾದ್ಯಂತ ಹೋರಾಟ, ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ತಟ್ಟಲಿದೆ ಬಿಸಿ
ಕಾಂಗ್ರೆಸ್
Follow us
TV9 Web
| Updated By: ಆಯೇಷಾ ಬಾನು

Updated on:Apr 16, 2022 | 9:53 AM

ವಿಜಯನಗರ: ಗುತ್ತಿಗೆದಾರ‌ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಇಂದು ಪ್ರತಿಭಟನೆಯ ಬಿಸಿ ತಟ್ಟಲಿದೆ. ಕೆ.ಎಸ್.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಹೊಸಪೇಟೆಯಲ್ಲಿಂದು ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ವೇಳೆಯೇ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಆತ್ಮಹತ್ಯೆಗೆ ಪ್ರಚೋದನೆ ಹಿನ್ನೆಲೆಯಲ್ಲಿ IPC 306 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಬೇಕು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 13ಎ ಅಡಿಯಲ್ಲಿ ಕೇಸ್ ದಾಖಲಿಸಲು ಕಾಂಗ್ರೆಸ್ ಪಟ್ಟು ಹಿಡಿದು ಪ್ರತಿಭಟನೆಗೆ ಮುಂದಾಗಿದೆ. ಹೊಸಪೇಟೆಯಲ್ಲಿಂದು ಬೆಳಗ್ಗೆ 10.30ಕ್ಕೆ ಕನಕದಾಸ ವೃತ್ತದಿಂದ ಭಟ್ರಹಳ್ಳಿ ಆಂಜನೇಯ ದೇವಾಲಯದವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಿದ್ದಾರೆ. ಹಾಗೂ ಭಟ್ರಹಳ್ಳಿ ಆಂಜನೇಯ ದೇಗುಲದ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸ್ಥಳದವರೆಗೂ ಮೆರವಣಿಗೆ ಕಾಂಗ್ರೆಸ್ ನಿರ್ಧರಿಸಿದೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಈಶ್ವರಪ್ಪ ವಿರುದ್ಧ ಹೋರಾಟಕ್ಕೆ ‘ಕೈ’ನಿಂದ 9 ತಂಡ ರಚನೆ ರಾಜ್ಯ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಜನಾಂದೋಲನ ಕೈಗೊಂಡಿದೆ. K.S.ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಹೋರಾಟಕ್ಕೆ ಇಳಿದಿದ್ದು ‘ಕೈ’ನಿಂದ 9 ತಂಡ ರಚನೆ ಮಾಡಲಾಗಿದೆ. ಕಾಂಗ್ರೆಸ್ನ 9 ತಂಡ ರಾಜ್ಯಾದ್ಯಂತ ಪ್ರವಾಸ ಮಾಡಲಿದೆ. CLP ನಾಯಕ ಸಿದ್ದರಾಮಯ್ಯ, ಡಿಕೆಶಿ, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್ ಸೇರಿ ಹಿರಿಯ ನಾಯಕರ ತಂಡ ರಚನೆಯಾಗಿದೆ. ಎಲ್ಲಾ ಜಿಲ್ಲೆಗಳು, ತಾಲೂಕುಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಇಂದಿನಿಂದ 5 ದಿನಗಳ ಕಾಲ 9 ತಂಡಗಳಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದೆ.

ರಾಮನಗರ ಡಿಸಿ ಕಚೇರಿ ಮುಂದೆ ಇಂದು ಕಾಂಗ್ರೆಸ್ ಧರಣಿ K.S.ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ರಾಮನಗರ ಡಿಸಿ ಕಚೇರಿ ಮುಂದೆ ಇಂದು ಕಾಂಗ್ರೆಸ್ ಧರಣಿ ನಡೆಸಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ, ಸಂಸದ ಡಿ.ಕೆ.ಸುರೇಶ್, ಮಾಜಿ ಶಾಸಕ ಹೆಚ್.ಸಿ.ಬಾಲಕೃಷ್ಣ, MLCಗಳಾದ ಎಸ್.ರವಿ, ಸಿ.ಎಂ.ಲಿಂಗಪ್ಪ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.

ಕಾಫಿನಾಡಿನಲ್ಲಿ ಮೊಳಗಲಿದೆ ಕೆ.ಎಸ್ ಈಶ್ವರಪ್ಪ ವಿರುದ್ಧ ಕಹಳೆ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಿಕ್ಕಮಗಳೂರು ತಾಲೂಕಿನ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೂ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಹಾಗೂ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಜನಾಂದೋಲನ ನಡೆಯಲಿದೆ. ಸಿದ್ದರಾಮಯ್ಯಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಬಿ.ಎಲ್ ಶಂಕರ್ ಸೇರಿದಂತೆ ಅನೇಕ ಮುಖಂಡರು ಸಾಥ್ ನೀಡಲಿದ್ದಾರೆ.

ಇದನ್ನೂ ಓದಿ: ಚಾಣಕ್ಯ ನೀತಿ: ನಿಮ್ಮನ್ನು ಶ್ರೇಷ್ಠರಾಗಿಸುತ್ತವೆ ಈ ಕೆಲಸಗಳು; ನಿಮ್ಮ ಕುಟುಂಬಕ್ಕೂ ಇದು ಶ್ರೇಯಸ್ಕರ

Karnataka Rain: ಬೆಂಗಳೂರಿನಲ್ಲಿ ಇಂದೂ ಮಳೆ ಸಾಧ್ಯತೆ; ಉತ್ತರ ಒಳನಾಡು, ಮಲೆನಾಡು, ಕರಾವಳಿಯಲ್ಲಿ 4 ದಿನ ವರುಣನ ಆರ್ಭಟ

Published On - 7:08 am, Sat, 16 April 22