AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ -ಈಶ್ವರ ಖಂಡ್ರೆ

ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ.-ಈಶ್ವರ ಖಂಡ್ರೆ

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ -ಈಶ್ವರ ಖಂಡ್ರೆ
ಈಶ್ವರ್​ ಖಂಡ್ರೆ
TV9 Web
| Updated By: ಆಯೇಷಾ ಬಾನು|

Updated on: Oct 04, 2021 | 6:44 PM

Share

ವಿಜಯಪುರ: ಅಕ್ಟೋಬರ್ 30ರಂದು ನಡೆಯುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ(Sindagi By Election) ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ ಎಂದು ಸಿಂದಗಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ(Eshwar Khandre) ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ. ಅಕ್ಟೋಬರ್ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುತ್ತೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಈಶ್ವರ ಖಂಡ್ರೆ ಹೇಳಿದ್ರು.

ಹಾನಗಲ್ ಉಪಚುನಾವಣಾ ಉಸ್ತುವಾರಿ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರಗೆ ಸ್ಥಾನ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಹಾನಗಲ್ ಉಪಚುನಾವಣಾ ಉಸ್ತುವಾರಿ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. 13 ಉಸ್ತುವಾರಿಗಳ ಪಟ್ಟಿಯಲ್ಲಿ ಕೊನೆಯವರಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಬಿ.ವೈ.ವಿಜಯೇಂದ್ರರ ಹೆಸರನ್ನು ಸೂಚಿಸಲಾಗಿದೆ.

ನಿನ್ನೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಟ್ಟಿ ಸಿದ್ಧವಾಗಿತ್ತು. ಆದ್ರೆ ಉಸ್ತುವಾರಿಗಳ ಪಟ್ಟಿಯಲ್ಲಿ ವಿಜಯೇಂದ್ರ ಹೆಸರು ಇರಲಿಲ್ಲ. ಆದ್ರೆ ಇಂದು ಉಸ್ತುವಾರಿಗಳ ಪಟ್ಟಿಗೆ ವಿಜಯೇಂದ್ರ ಹೆಸರು ಸೇರ್ಪಡೆ ಮಾಡಲಾಗಿದೆ.

ಏಕಾಏಕಿ ವಿಜಯೇಂದ್ರ ಹೆಸರು ಕೈಬಿಟ್ಟರೆ ಚುನಾವಣೆಯಲ್ಲಿ ಯಡಿಯೂರಪ್ಪ ಬೆಂಬಲಿಗರ ವಿರೋಧ ಜೋರಾಗುವ ಆತಂಕ ವಿದೆ. ಹಾಗೂ ಚುನಾವಣೆಯಲ್ಲಿ ಯಡಿಯೂರಪ್ಪ ವೋಟ್ ಬ್ಯಾಂಕ್ ಬೌನ್ಸ್ ಆಗುವ ಭೀತಿ ಇದೆ. ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾವೇರಿ ಜಿಲ್ಲೆಯಲ್ಲಿ ತನ್ನದೇ ಆದ ಮತ ಬ್ಯಾಂಕ್ ಹೊಂದಿದ್ದಾರೆ ಮತ್ತೊಂದೆಡೆ ವಿಜಯೇಂದ್ರಗೆ ಉಸ್ತುವಾರಿ ನಿರಾಕರಿಸುವ ಮೂಲಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದರು ಎಂಬ ಸಂದೇಶ ರವಾನೆಯಾಗುವ ಆತಂಕ ವಿದೆ. ಇದು ಉಪಚುನಾವಣೆಯಲ್ಲಿ ವ್ಯತಿರಿಕ್ತವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಇಂದು ಉಪಚುನಾವಣಾ ಉಸ್ತುವಾರಿ ಪಟ್ಟಿಗೆ ವಿಜಯೇಂದ್ರ ಹೆಸರು ಸೇರ್ಪಡೆ ಮಾಡಲಾಗಿದೆ.

ಇದನ್ನೂ ಓದಿ: DC vs CSK Live Score, IPL 2021: ಗುರು – ಶಿಷ್ಯರ ಕದನ: ಯಾರಿಗೆ ಒಲಿಯಲಿದೆ ವಿಜಯಲಕ್ಷ್ಮಿ?

ದುನಿಯಾ ವಿಜಯ್​ ‘ಸಲಗ’ಕ್ಕೆ ಸಿದ್ದರಾಮಯ್ಯ ಬೆಂಬಲ; ತಂಡಕ್ಕೆ ಒಳ್ಳೆಯದಾಗಲಿ ಎಂದ ಮಾಜಿ ಸಿಎಂ