ತಾಯಿ ಮರಣ ಪತ್ರ ಪಡೆಯಲು ಬಂದ ವೃದ್ಧೆಗೆ ಆಕೆಯದ್ದೇ ಮರಣ ಪತ್ರ ನೀಡಿದ ಅಧಿಕಾರಿ, ಆಸ್ತಿಗಾಗಿ ಸಂಬಂಧಿಕ ಹುನ್ನಾರಕ್ಕೆ ದಿಗ್ಬ್ರಮೆ

ಬದುಕಿದ್ದ ವೃದ್ಧೆ ಕೈಗೆ ಅಧಿಕಾರಿಗಳು ಮರಣ ಪತ್ರ ನೀಡಿದ್ದು ಆಸ್ತಿ ಹೊಡೆಯಲು ಕುಟಂಬಸ್ಥರು ಮಾಡಿರುವ ಹುನ್ನಾರ ಬೆಳಕಿಗೆ ಬಂದಿದೆ. ಇದರಿಂದ ನೊಂದ ವೃದ್ಧೆ ಕಾನೂನು ಪ್ರಾಧಿಕಾರಕ್ಕೆ ಅರ್ಜಿ ಹಾಕಿ ಸಹಾಯ ಕೇಳಿದ್ದಾರೆ.

ತಾಯಿ ಮರಣ ಪತ್ರ ಪಡೆಯಲು ಬಂದ ವೃದ್ಧೆಗೆ ಆಕೆಯದ್ದೇ ಮರಣ ಪತ್ರ ನೀಡಿದ ಅಧಿಕಾರಿ, ಆಸ್ತಿಗಾಗಿ ಸಂಬಂಧಿಕ ಹುನ್ನಾರಕ್ಕೆ ದಿಗ್ಬ್ರಮೆ
ವೃದ್ಧೆ ಸಾವಿತ್ರಿ ಮಾಳೆಯವರೊಂದಿಗೆ ಚರ್ಚೆ ನಡೆಸುತ್ತಿರುವ ವಕೀಲರು
Follow us
ಆಯೇಷಾ ಬಾನು
|

Updated on: Apr 06, 2023 | 1:27 PM

ವಿಜಯಪುರ: ಬದುಕಿದ್ದ ವೃದ್ಧೆಗೆ ಮರಣ ಪತ್ರ ನೀಡಿದ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜೀವಂತ ಇರುವ ವೃದ್ಧೆಗೆ  ಆಕೆಯ ಕೈಯ್ಯಲ್ಲಿಯೇ ಆಧಿಕಾರಿಗಳು ಮರಣ ಪ್ರಮಾಣ ಪತ್ರ ನೀಡುವ ಮೂಲಕ ದಿಗ್ಬ್ರಮೆ ಮೂಡಿಸಿದ್ದಾರೆ. ಇದರ ಹಿಂದೆ ವೃದ್ಧೆಯ ಸಂಬಂಧಿಕರು ಆಸ್ತಿ ಹೊಡೆಯುವ ಹುನ್ನಾರ ಇರುವ ಸಂಶಯ ವ್ಯಕ್ತವಾಗಿದೆ. ಜನನ ಮತ್ತು ಮರಣ ಪತ್ರ ನೋಂದಣಿ ಕೇಂದ್ರದ ಅಧಿಕಾರಿಗಳ ಎಡವಟ್ಟು ಕೂಡ ಇಲ್ಲಿ ಕಂಡು ಬಂದಿದೆ. ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಸಾವಿತ್ರಿ ರಾಮಗೊಂಡ ಮಾಳಿ (60) ಎಂಬ ವೃದ್ಧೆ ಚಡಚಣ ಜನನ ಮತ್ತು ಮರಣ ನೋಂದಣಿ ಇಲಾಖೆ ಅಧಿಕಾರಿಗಳು ಮರಣ ಪತ್ರ ನೀಡಿ ಅವಳಿಗೆ ಅಚ್ಚರಿ ಮೂಡಿಸಿದ್ದಾರೆ.

ವೃದ್ದೆ ಸಾವಿತ್ರಿ ಮಾಳೆ ತಮ್ಮ ತಾಯಿಯ ಮರಣ ಪತ್ರ ಪಡೆಯಲು ಕಚೇರಿಗೆ ಹೋದಾಗ ಅಧಿಕಾರಿಗಳು ಆಕೆಯ ಮರಣ ಪ್ರಮಾಣ ಮತ್ರ ನೀಡಿದ್ದಾರೆ. ಆ ಮರಣ ಪತ್ರದ ಪ್ರಕಾರ ಸಾವಿತ್ರಿ 12-03-2001ರಲ್ಲಿ ನಿಧನರಾಗಿದ್ಧಾರೆ ಎಂದಿದೆ. ಇದರಿಂದ ಸಾವಿತ್ರಿ ಆಘಾತಕ್ಕೆ ಒಳಗಾಗಿದ್ದಾರೆ. ಸಾವಿತ್ರಿ ಮೂಲತ ವಿಜಯಪುರ ತಾಲೂಕಿನ ಹೊನ್ನಳ್ಳಿ ಗ್ರಾಮದವರು ಇವರ ತಂದೆಗೆ ಒಬ್ಬಳೇ ಮಗಳು. ಸಾವಿತ್ರಿ ಅವರ ತಂದೆ ನಿಧನಾದಂತರ ಅವರ ಹೆಸರಿನಲ್ಲಿದ್ದ 12 ಎಕರೆ ಜಮೀನು ಸಾವಿತ್ರಿ ಅವರ ಹೆಸರಿಗೆ ಬಂದಿತ್ತು. ಈ ಆಸ್ತಿ ಲಪಟಾಯಿಸಲು ತಮ್ಮ ಸಂಬಂಧಿಕರೆ ಮರಣ ಪತ್ರ ಸೃಷ್ಟಿ ಮಾಡಿದ್ದಾರೆ ಎಂದು ಸಾವಿತ್ರಿ ಮಾಳೆ ಆರೋಪಿಸಿದ್ದಾರೆ.

vijayapura fake death certificate (1)

ಸಾವಿತ್ರಿ ಮಾಳೆ

ಇದನ್ನೂ ಓದಿ: ಮಂಡ್ಯ: ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ವಿದ್ಯಾರ್ಥಿನಿಗೆ 31 ಲಕ್ಷ ರೂ. ಪಂಗನಾಮ

ಇನ್ನು ಸಾವಿತ್ರಿ ಮಾಳೆಯ ಪತಿ ನಿಂಗಪ್ಪ ಮಾಳೆ ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿದ್ದಾರೆ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದರೂ ಅವಿದ್ಯಾವಂತರಾಗಿದ್ದು ಬಾಹ್ಯ ಪ್ರಪಂಚದ ಒಡನಾಟವಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡು ಸಾವಿತ್ರಿ ಅವರ ಚಿಕ್ಕಪ್ಪನ ಪುತ್ರ ಅಶೋಕ ಹಾಗೂ ಇತರರು ಸಾವಿತ್ರಿ ಹೆಸರಿನಲ್ಲಿರುವ 12 ಎಕರೆ ಜಮೀನು ಕಬಳಿಸಲು 2001ರಲ್ಲಿ ಸಾವಿತ್ರಿ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ 11-03-2001ರಂದು ನಿಧನರಾಗಿದ್ದಾರೆಂದು ಚಡಚಣದ ಗ್ರಾಮಲೆಕ್ಕಾಧಿಕಾರಿ ಮೂಲಕ ಜನನ ಮತ್ತು ಮರಣಗಳ ನೋಂದಣಿ ಕಚೇರಿಯಲ್ಲಿ ಮರಣ ಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅದು ನೊಂದಣಿಯಾಗಿದ್ದು ಮಾತ್ರ 2-01-2013 ರಂದು. ನಂತರ 5-01-2023ರಂದು ಮರಣ ಪ್ರಮಾಣ ಪತ್ರಕ್ಕೆ ಅನುಮೋದನೆ ದೊರೆತಿದೆ. ಇದು ಗೊತ್ತಿಲ್ಲದ ವೃದ್ದೆ ಸಾವಿತ್ರಿ ತಮ್ಮ ತಾಯಿಯ ಮರಣ ಪತ್ರ ಪಡೆಯಲು ಹೋದಾಗ ತನ್ನ ಮರಣ ಪತ್ರ ನೀಡಿದ ಮೇಲೆ ಈ ಪ್ರಕರಣ ಬೆಳಕಿಗೆ ಬಂದಿದೆ. ಇದರಿಂದ ನೊಂದಿರೋ ಸಾವಿತ್ರಿ ಮಾಳಿ ಅವರು ತನ್ನ ಜೀವಿತಾವಧಿಯಲ್ಲಿ ಮರಣ ಪತ್ರ ನೀಡಿರುವ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.‌ ಜೊತೆಗೆ ಮಾನಸಿಕವಾಗಿ ನೊಂದಿರುವ ತಮಗೆ ಕಾನೂನಿನ‌ ನೆರವು ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳಿಗೆ ಸಹಾಯಕ್ಕಾಗಿ ಅರ್ಜಿ ಹಾಕಿದ್ದಾರೆ.

ಕಾನೂನು ಪ್ರಾಧಿಕಾರಕ್ಕೆ ಸಾವಿತ್ರಿ ಅರ್ಜಿ ಹಾಕಿದ ಮೇಲೆ ಪ್ರಕರಣ ನ್ಯಾಯವಾದಿಗಳ ಗಮನಕ್ಕೆ ಬಂದಿದೆ. ಜೀವಂತವಿರುವಾಗಲೇ ವೃದ್ಧೆಗೆ ಮರಣ ಪ್ರಮಾಣ ಪತ್ರ ನೀಡಿರುವುದು ದೊಡ್ಡ ಅಪರಾಧವಾಗಿದೆ ಎಂದು ಹಿರಿಯ ನ್ಯಾಯವಾದಿ ಮಲ್ಲಿಕಾರ್ಜುನ ಭೃಂಗಿಮಠ ಅಭಿಪ್ರಾಯ ಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂಥ ಪ್ರಕರಣ ನೋಡಿರಲಿಲ್ಲ, ಆಕೆ ಹೇಳುವಂತೆ ಆಸ್ತಿಗಾಗಿ ಈ ರೀತಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಅದು ಏನೇ ಇರಲಿ ಜೀವಂತವಿರುವ ವ್ಯಕ್ತಿಗಳಿಗೆ ಮರಣಪತ್ರ ನೀಡಿದ್ದು ಕಾನೂನು ಪ್ರಕಾರ ತಪ್ಪು. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳನ್ನು ತಕ್ಷಣ ಅಮಾನತ್ತು ಮಾಡಿ ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು. ಇಲ್ಲವಾದಲ್ಲಿ ಮುಂದಿನ ಹೋರಾಟ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ವಿಜಯಪುರ ಜಿಲ್ಲೆಯ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ