ಮುಂಗಾರು ವಿಳಂಬ ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ

ಮುಂಗಾರು ಮಳೆಯಾಗದ ಕಾರಣ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ನಿರ್ಮಾಣ ಮಾಡಿರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರದಲ್ಲಿ ನೀರನ ಮಟ್ಟ ಸಂಪೂರ್ಣ ಕುಸಿದು ಹೋಗಿದೆ. ಅದೇ ರೀತಿಯಾಗಿ ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಕಬಿನಿ‌ ಜಲಾಶಯದಲ್ಲಿ ನೀರು ಖಾಲಿ ಆಗುವ ಆತಂಕ ಎದುರಾಗಿದೆ.

ಮುಂಗಾರು ವಿಳಂಬ ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ
ಆಲಮಟ್ಟಿ ಡ್ಯಾಂನಲ್ಲಿ ಸದ್ಯ ಸಂಗ್ರಹವಾಗಿರುವ ನೀರು
Edited By:

Updated on: Jun 29, 2023 | 3:22 PM

ವಿಜಯಪುರ: ಮುಂಗಾರು ಮಳೆಯಾಗದ ಕಾರಣ ಕೃಷ್ಣೆಯ ಒಡಲು ಖಾಲಿ ಖಾಲಿಯಾಗಿದೆ. ಅದರಲ್ಲೂ
ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ನಿರ್ಮಾಣ ಮಾಡಿರುವ ಲಾಲ್ ಬಹಾದ್ದೂರ್ ಶಾಸ್ತ್ರೀ ಸಾಗರ (Lal Bahadur Shastri Sagar) ದಲ್ಲಿ ನೀರನ ಮಟ್ಟ ಸಂಪೂರ್ಣ ಕುಸಿದು ಹೋಗಿದೆ. ಕೆಲವೇ ದಿನಗಳಲ್ಲಿ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಸಂಪೂರ್ಣವಾಗಿ ಬತ್ತಿ ಹೋಗುವ ಆತಂಕ ಎದುರಾಗಿದೆ. ಇದರ ಮಧ್ಯೆ ನೆರೆಯ ಮಹಾರಾಷ್ಟ್ರದಲ್ಲೂ ಮಳೆಯಾಗಿಲ್ಲ. ಜೊತೆಗೆ ಕೃಷ್ಣೆಯ ಉಗಮ ಸ್ಥಾನ ಮಹಾಬಲೇಶ್ವರದಲ್ಲಿಯೂ ಮಳೆಯಾಗದ ಕಾರಣ ನದಿಗೆ ಒಳ ಹರಿವು ಉಂಟಾಗಿಲ್ಲ.

ಆಲಮಟ್ಟಿಯ ಡ್ಯಾಂ 519.60 ಮೀಟರ್ ಎತ್ತರವಿದ್ದು ಸದ್ಯ ಡ್ಯಾಂನಲ್ಲಿ 507.47 ಮೀಟರ್ ನೀರು ಮಾತ್ರ ಸಂಗ್ರಹವಾಗಿದೆ. ಒಟ್ಟು 123 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಡ್ಯಾಂನಲ್ಲೀಗ ಕೇವಲ 19.544 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ.

ಇದನ್ನೂ ಓದಿ: Indi Kagzi Lemons: ವಿಜಯಪುರದ ಇಂಡಿ ನಿಂಬೆಗೆ ಸಿಕ್ತು GI ಟ್ಯಾಗ್ ಮಾನ್ಯತೆ, ಸಂಪೂರ್ಣ ವರದಿ ಇಲ್ಲಿದೆ ನೋಡಿ

ಈ ಪೈಕಿ 1.924 ಟಿಎಂಸಿ ನೀರು ಬಳಕೆಗೆ ಮಾತ್ರ ಲಭ್ಯವಾಗುತ್ತಿದೆ. ಕಡಿಮೆ ನೀರಿನ ಸಂಗ್ರಹದ ಮಧ್ಯೆ ಕರ್ನಾಟಕ ಪವರ್ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ವಿವಿಧ ಕುಡಿಯುವ ನೀರಿನ ಯೋಜನೆಗಳಿಗೆ ಡ್ಯಾಂನಿಂದ 572 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.

ತ್ವರಿತವಾಗಿ ಮಳೆಯಾಗದೇ ಹೋದರೆ ಸಂಪೂರ್ಣವಾಗಿ ಕೃಷ್ಣಾನದಿ ಹಾಗೂ ಡ್ಯಾಂನಲ್ಲಿ ನೀರು ಬತ್ತಿ ಹೋಗಲಿದೆ. ಡ್ಯಾಂನಲ್ಲಿ ನೀರು ಖಾಲಿಯಾದರೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗುವ ಸಾಧ್ಯತೆಯನ್ನು ಯಾರೂ ತಳ್ಳಿ ಹಾಕುವಂತಿಲ್ಲಾ. ವಿಜಯಪುರ ನಗರ ಕೆಲ ಪಟ್ಟಣಗಳು ಹಾಗೂ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ ನೀರು ಒದಗಿಸುವ ಕೃಷ್ಣೆಯ ನೀರು ಖಾಲಿಯಾದರೆ ಸಮಸ್ಯೆಗಳ ಸರಮಾಲೇಯೇ ಎದುರಾಗಲಿದೆ. ಕಾರಣ ಶೀಘ್ರ ಮಳೆಯಾಗಬೇಕೆಂದು ಜಿಲ್ಲೆಯ ಜನರು ಪ್ರಾರ್ಥನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಾಕಿ ಹಣಕ್ಕಾಗಿ ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂಡಿಸಿದ ಪೆಟ್ರೋಲ್ ಬಂಕ್ ಮಾಲೀಕರು

ಕಬಿನಿ‌ ಜಲಾಶಯದ ಇಂದಿನ‌ ‌ನೀರಿನ ಮಟ್ಟ ಹೀಗಿದೆ

ಮೈಸೂರು: ಜಿಲ್ಲೆಯ ಹೆಚ್​ಡಿ ಕೋಟೆ ತಾಲ್ಲೂಕು ಬೀಚನಹಳ್ಳಿ ಗ್ರಾಮದ ಕಬಿನಿ‌ ಜಲಾಶಯವಿದ್ದು, 84 ಅಡಿ ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ ಇಂದಿನ‌ ‌ನೀರಿನ ಮಟ್ಟ 50.98 ಅಡಿಯಿದ್ದು, ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 63.27 ಅಡಿಗಳಷ್ಟಿತ್ತು. ಜಲಾಶಯದ ಇಂದಿನ‌ ಒಳಹರಿವು 1,461 ಕ್ಯೂಸೆಕ್​ ಇದ್ದರೆ, ಕಳೆದ ವರ್ಷ 3,091 ಕ್ಯೂಸೆಕ್ ಇತ್ತು.

ಜಲಾಶಯದ ಹೊರಹರಿವು 300 ಕ್ಯೂಸೆಕ್, ಕಳೆದ ವರ್ಷ 1000 ಸಾವಿರ ಕ್ಯೂಸೆಕ್ ಇತ್ತು. ಗರಿಷ್ಠ 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 4.35 ಟಿಎಂಸಿ ನೀರು ಸಂಗ್ರಹ ಮಾಡಲಾಗಿದೆ. ಕಳೆದ ವರ್ಷ ಇದೇ ವೇಳೆಗೆ 8.62 ಟಿಎಂಸಿ ನೀರು ಸಂಗ್ರಹವಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us