ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ: ಸರ್ಕಾರದ ಸ್ಪಷ್ಟನೆ ಹೀಗಿದೆ ನೋಡಿ

ವಿಜಯಪುರದ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಕವಿತೆಯ ಬರಹವನ್ನು ಬದಲಾಯಿಸಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಪ್ರತಿಪಕ್ಷ ಬಿಜೆಪಿ ನಾಯಕರು ಈ ವಿಷಯವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ಸಾಹಿತಿಗಳು, ಬುದ್ಧಿಜೀವಿಗಳೂ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶದಕ ಪುಂಡಲೀಕ ಮಾನವರ ನೀಡಿದ ಸ್ಪಷ್ಟನೆ ಇಲ್ಲಿದೆ.

ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ: ಸರ್ಕಾರದ ಸ್ಪಷ್ಟನೆ ಹೀಗಿದೆ ನೋಡಿ
ವಸತಿ ಶಾಲೆ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆಗೆ ವ್ಯಾಪಕ ವಿರೋಧ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: Ganapathi Sharma

Updated on: Feb 19, 2024 | 11:47 AM

ವಿಜಯಪುರ, ಫೆಬ್ರವರಿ 19: ಸಮಾಜ ಕಲ್ಯಾಣ ಇಲಾಖೆಯ (Department of Social Welfare, Karnataka) ವ್ಯಾಪ್ತಿಯಲ್ಲಿ ಬರುವ, ವಿಜಯಪುರ  (Vijayapura)  ಜಿಲ್ಲೆಯಲ್ಲಿರುವ ವಸತಿ ಶಾಲೆಗಳ (Residential Schools) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಸಾಲುಗಳನ್ನು ಬದಲಾಯಿಸಿರುವುದಕ್ಕೆ ಸಾಹಿತಿಗಳು, ರಾಜಕಾರಣಿಗಳು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿಜಯಪುರ ‌ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ‘ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ’ ಎಂಬ ಬರಹದ ಬದಲು, ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹವನ್ನು ಬದಲಾವಣೆ ಮಾಡಲಾಗಿದೆ. ಇದಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶದಕ ಪುಂಡಲೀಕ ಮಾನವರ ಸ್ಪಷ್ಟನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 23 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ. ಈ ಪೈಕಿ ಘಾಳಪೂಜಿ ಹಾಗೂ ಮತ್ತೊಂದು ಶಾಲೆಯಲ್ಲಿ ಮಾತ್ರ ಬರಹ ಬದಲಾವಣೆಯಾಗಿದೆ. ಇತರೆ ಶಾಲೆಗಳಲ್ಲಿ ಬದಲಾವಣೆ ಮಾಡಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಅವರು ಬರಹ ಬದಲಾವಣೆ ಮಾಡಲು ಟೆಲಿಗ್ರಾಂ ಗ್ರೂಪ್​​ನಲ್ಲಿ ಸೂಚನೆ ನೀಡಿದ್ದರು. ಆದರೆ ಕುವೆಂಪು ಅವರ ಬರಹ ಬದಲಾವಣೆಗೆ ಸರ್ಕಾರದ ಸುತ್ತೋಲೆ ಹಾಗೂ ಆದೇಶ ಇಲ್ಲ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಟೆಲಿಗ್ರಾಂ ಗ್ರೂಪ್​ನಲ್ಲಿ ಬಂದಿರೋ ಸೂಚನೆ ಮೇರೆಗೆ ವಸತಿ ಶಾಲೆಯ ಪ್ರಾಂಶುಪಾಲರಿಗೆ ಸೂಚನೆ ನೀಡಲಾಗಿದೆ. ನಮಗೆ ಕುವೆಂಪು ಅವರ ಕುರಿತು ಅವರ ಸಾಹಿತ್ಯದ ಕುರಿತು ಅಪಾರ ಗೌರವವಿದೆ. ಕುವೆಂಪು ಅವರಿಗೆ ಅಗೌರವ ತರುವ ಉದ್ದೇಶ ನಮ್ಮದಲ್ಲ ಎಂದು ಪುಂಡಲೀಕ ಮಾನವರ ಹೇಳಿದ್ದಾರೆ.

ಇದನ್ನೂ ಓದಿ: ವಿಜಯಪುರ: ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹ ಬದಲಾವಣೆ! ಚರ್ಚೆಗೆ ಗ್ರಾಸವಾಯ್ತು ಸರ್ಕಾರದ ನಡೆ

ಮೊರಾರ್ಜಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಧೈರ್ಯವಾಗಿ‌ ಪ್ರಶ್ನೆ ಮಾಡಲಿ ಎಂಬ ಉದ್ದೇಶದಿಂದ ಬರಹ ಬದಲಾವಣೆ ಮಾಡಲಾಗಿದೆ. ಪ್ರಶ್ನೆ ಮಾಡುವ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಬೇಕು. ಮಕ್ಕಳ ಶಿಕ್ಷಣ ವಸತಿ ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶವಷ್ಟೇ ಬರಹ ಬದಲಾವಣೆ ಹಿಂದಿದೆ ಎಂದು ಪುಂಡಲೀಕ ಮಾನವರ ಸ್ಪಷ್ಟಪಡಿಸಿದ್ದಾರೆ.

ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬರಹ ಬರೆದಿದ್ದು ತಪ್ಪು ಎಂದು ಸಾಹಿತಿಗಳು, ಬುದ್ಧಿ ಜೀವಿಗಳು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜ್ಞಾನಪೀಠ ಪ್ರಶಸ್ತಿ ವಿಜೇತ ಕುವೆಂಪು ಅವರಿಗೆ ಮಾಡಿದ ಅವಮಾನವೆಂದು ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!