Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಕ್ಕಳ ಮೇಲೆ ನಾಯಿಗಳ ದಾಳಿ, ನಾಲ್ವರಿಗೆ ಗಾಯ

ಒಂದೇ ದಿನ ಎರಡು ಕಡೆ ಮಕ್ಕಳ ಮೇಲೆ ನಾಯಿಗಳು ದಾಳಿ ನಡೆಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ಕು ಬಾಲಕರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ‌ ನಾಯಿಗಳ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಜನರು ಒತ್ತಾಯಿಸಿದ್ದಾರೆ.

ವಿಜಯಪುರ: ಮಕ್ಕಳ ಮೇಲೆ ನಾಯಿಗಳ ದಾಳಿ, ನಾಲ್ವರಿಗೆ ಗಾಯ
ವಿಜಯಪುರ ನಗರದಲ್ಲಿ ಮಕ್ಕಳ ಮೇಲೆ ನಾಯಿಗಳ ದಾಳಿ (ಸಾಂದರ್ಭಿಕ ಚಿತ್ರ)
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: Rakesh Nayak Manchi

Updated on: Nov 27, 2023 | 8:31 PM

ವಿಜಯಪುರ, ನ.27: ನಾಯಿಗಳ ದಾಳಿಗೆ ನಾಲ್ಕು ಬಾಲಕರು ಗಾಯಗೊಂಡ ಘಟನೆ ವಿಜಯಪುರ (Vijayapura) ನಗರದಲ್ಲಿ ನಡೆದಿದೆ. ಮಕ್ಕಳು ಮನೆಯಾಚೆ ಬಂದಿದ್ದ ವೇಳೆ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಗರದ ಬಡೀಕಮಾನ್ ಬಳಿ ನಾಯಿಗಳ ಪ್ರತ್ಯೇಕ ಎರಡು ದಾಳಿಗಳು ನಡೆದಿವೆ. ಮನೆಯಿಂದ ಹೊರಗೆ ಬಂದಿದ್ದ ವೇಳೆ ಬಾಲಕರನ್ನು ಮೇಲೆ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನಾಯಿ‌ ಕಡಿತದಿಂದ ದಾಳಿಗೊಳಗಾದ ಬಾಲಕರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ನಾಯಿ ದಾಳಿ ಪ್ರಕರಣ: ‘ಮತ್ತೆ ಹೀಗೆ ಆಗದಂತೆ ಎಚ್ಚರ ವಹಿಸುತ್ತೇನೆ’; ಪೊಲೀಸ್​ ಠಾಣೆಗೆ ಬಂದು ದರ್ಶನ್​ ಹೇಳಿಕೆ

ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಬೇಸತ್ತಿದ್ದಾರೆ. ಹೀಗಾಗಿ ಬೀದಿ‌ ನಾಯಿಗಳ ಹಾವಳಿ ತಡೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ಜನರು ಒತ್ತಾಯಿಸುತ್ತಿದ್ದಾರೆ.

ಇತ್ತೀಚೆಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಳ ಟೌನ್​ನಲ್ಲಿ ಹುಚ್ಚು ನಾಯಿ ದಾಳಿಗೆ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇನ್ಸ್‌ಪೆಕ್ಟರ್ ಶಶಿಧರ್ ನೇತೃತ್ವದಲ್ಲಿ ನಾಯಿ ಸೆರೆ ಹಿಡಿಯಲು ಕಾರ್ಯಾಚರಣೆ ಆರಂಭಿಸುವಷ್ಟರಲ್ಲಿ ಸಾರ್ವಜನಿಕರು ಆ ನಾಯಿಯನ್ನು ಹೊಡೆದು ಕೊಂದು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್