ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸೇರ್ಪಡೆಯಾಗದ ಇಂಡಿ‌, ಚಡಚಣ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ವಿಜಯಪುರ ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕುಗಳನ್ನು ಸೇರಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಯಶವಂತರಾಯಗೌಡ ಪಾಟೀಲ್ ಮಾಹಿತಿ ನೀಡಿದ್ದು, ಸದ್ಯ ಸಿಎಂ ಕಚೇರಿಯಲ್ಲಿ ಶಾಸಕರ ಮನವೊಲಿಕೆ ಯತ್ನ ನಡೆಯುತ್ತಿದೆ. ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಬರ ಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಸೇರ್ಪಡೆಯಾಗದ ಇಂಡಿ‌, ಚಡಚಣ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಯಶವಂತರಾಯಗೌಡ ಪಾಟೀಲ್
Image Credit source: Yashwantrayagouda Patil Facebook Page
Edited By:

Updated on: Sep 23, 2026 | 1:50 PM

ಬೆಂಗಳೂರು, ಸೆಪ್ಟೆಂಬರ್​​ 23: ಬರ ಪೀಡಿತ ತಾಲೂಕುಗಳ ಘೋಷಣೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​​ ಶಾಸಕರಿಂದಲೇ ಅಸಮಾಧಾನ ಮುಂದುವರಿದಿದೆ. ಬರ ಪೀಡಿತ ತಾಲೂಕು ಪಟ್ಟಿಯಲ್ಲಿ ಇಂಡಿ‌, ಚಡಚಣ ಸೇರಿಸದ ಹಿನ್ನೆಲೆ ವಿಜಯಪುರ ಜಿಲ್ಲೆ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಬೆಳಗ್ಗೆಯೇ ಸ್ಪೀಕರ್​ಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್​​ ಅವರಿಗೂ ಯಶವಂತರಾಯಗೌಡ ಪಾಟೀಲ್ ಮಾಹಿತಿ ನೀಡಿದ್ದು, ಸದ್ಯ ಸಿಎಂ ಕಚೇರಿಯಲ್ಲಿ ಶಾಸಕರ ಮನವೊಲಿಕೆ ಯತ್ನ ನಡೆಯುತ್ತಿದೆ.

ಈ ಹಿಂದೆ ರಾಜೀನಾಮೆ ನೀಡಿ ಹಿಂಪಡೆದಿದ್ದ ಯಶವಂತರಾಯಗೌಡ ಪಾಟೀಲ್

ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ನಡುವೆ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇಂದಿನ ದಿನಗಳಲ್ಲಿ ನಿಷ್ಠಾವಂತರಿಗೆ ಮತ್ತು ಪ್ರಾಮಾಣಿಕರಿಗೆ ಬೆಲೆ ಇಲ್ಲದಂತಾಗಿದೆ. ಈ ಬಾರಿ ಸಚಿವ ಸ್ಥಾನ ಸಿಗುವ ಪೂರ್ಣ ನಿರೀಕ್ಷೆ ಇತ್ತು ಹಾಗೂ ಪಕ್ಷದ ವರಿಷ್ಠರು ಕೂಡ ಭರವಸೆ ನೀಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಕೈಬಿಟ್ಟು ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಇದರಿಂದ ಮನಸ್ಸಿಗೆ ಭಾರಿ ಬೇಸರವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದರು. ಆದರೆ ಆ ಬಳಿಕ ನಡೆದ ಬೆಳವಣಿಗೆಯಲ್ಲಿ ಶಾಸಕರನ್ನು ಮನವೊಲಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ವರಿಷ್ಠರು ಯಶಸ್ವಿಯಾದ ಹಿನ್ನೆಲೆ ಯಶವಂತರಾಯಗೌಡ ಪಾಟೀಲ್ ತಮ್ಮ ರಾಜೀನಾಮೆ ಹಿಂಪಡೆದಿದ್ದರು.

ಇದನ್ನೂ ಓದಿ: ಹೆಚ್​​.ಕೆ.ಪಾಟೀಲ್​​ ರಾಜೀನಾಮೆ ಎಚ್ಚರಿಕೆ ಬೆನ್ನಲ್ಲೇ ಗದಗದ 3 ತಾಲೂಕುಗಳು ಬರ ಪಟ್ಟಿಗೆ ಸೇರ್ಪಡೆ: ಸಂಖ್ಯೆ 188ಕ್ಕೆ ಏರಿಕೆ

ಈವರೆಗೆ ಒಟ್ಟು 188 ತಾಲೂಕುಗಳು ಬರ ಪೀಡಿತವೆಂದು ಘೋಷಣೆ

ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಕರ್ನಾಟಕ ಘೋಷಿಸಿತ್ತು. ಆ ಬಳಿಕ ಎರಡನೇ ಹಂತದಲ್ಲಿ 23, ಮೂರನೇ ಹಂತದಲ್ಲಿ 53 ಮತ್ತು ನಾಲ್ಕನೇ ಹಂತದಲ್ಲಿ 11 ಸೇರಿ ಒಟ್ಟು 188 ತಾಲೂಕುಗಳನ್ನು ಈವರೆಗೆ ಬರಪೀಡತವೆಂದು ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:27 pm, Wed, 23 September 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us