Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಯಿಂದ ಹೊರ ಓಡಿ ಬಂದ ಜನತೆ

Earthquake in Vijayapura: ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಬೆಳಿಗ್ಗೆ 10:30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ; ಮನೆಯಿಂದ ಹೊರ ಓಡಿ ಬಂದ ಜನತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Oct 20, 2021 | 1:46 PM

ವಿಜಯಪುರ:  ಜಿಲ್ಲೆಯಲ್ಲಿ ಇಂದು (ಅಕ್ಟೋಬರ್ 20) ಮತ್ತೆ ಭೂಕಂಪನ ಉಂಟಾಗಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಬೆಳಿಗ್ಗೆ 10:30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಭಯಭೀತರಾದ ಜನತೆ ಮನೆಯಿಂದ ಹೊರಗಡೆ ಓಡಿ ಬಂದಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಕಂಪನ‌ ಅನುಭವ ಆಗುತ್ತಿರುವ ಕಾರಣ ಆತಂಕದಲ್ಲಿ ಜನರು ವಾಸ ಮಾಡುವಂತಾಗಿದೆ. ಭೂಮಿಯಿಂದ  ಭಾರೀ ಸದ್ದು ಬರುತ್ತಿದ್ದು, ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನ ವಿಜ್ಞಾನಿಗಳ ತಂಡ ಭೇಟಿ ನೀಡಲಿದೆ.

ಇಂದು ವಿಜಯಪುರದಲ್ಲಿ 3.6 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಧನ್ನರಗಿ ಗ್ರಾಮದಲ್ಲಿ 18 ಕೀಮೀ ಭೂಮಿ ಆಳದಲ್ಲಿ ಕಂಪನ ಸಂಭವಿಸಿದೆ ಎಂದು ತಿಳಿಸಿದೆ.

ಬಸವನಬಾಗೇವಾಡಿಯಲ್ಲಿ ಭೂಕಂಪನ ಗುಮ್ಮಟ ನಗರಿ ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯಲ್ಲಿ ಅಕ್ಟೋಬರ್​ 14 ರಂದು ಕೂಡ ಭೂಕಂಪನವಾಗಿತ್ತು. ಇದು ಅಲ್ಲಿನ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬಸವನಬಾಗೇವಾಡಿಯ ಮನಗೂಳಿಯಲ್ಲಿ ಅಕ್ಟೋಬರ್​ 14 ರಂದು  ಸಂಜೆ 6.14ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕಳೆದ ಸಪ್ಟೆಂಬರ್ 4ರಿಂದ ಸರಣಿ ರೂಪದಲ್ಲಿ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ, ಹಲವಾರು ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ.

ಸೆಪ್ಟೆಂಬರ್​ನಿಂದ ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ. ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರ್ಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.

ಇನ್ನು, ಕಲಬುರಗಿಯಲ್ಲಿ ಕೂಡ ಭೂಕಂಪನದಿಂದ ಜನರು ಗಾಬರಿಯಾಗಿದ್ದು, ತಮ್ಮ ಊರುಗಳನ್ನೇ ತೊರೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಕಲಬುರ್ಗಿಯಲ್ಲಿ 4.1 ತೀವ್ರತೆಯ ಭೂಕಂಪನವಾಗಿತ್ತು. ಇದರಿಂದ ಅನೇಕ ಜನರು ಊರು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: Vijayapura Earthquake: ವಿಜಯಪುರದ ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ; ಇನ್ನೆರಡು ದಿನಗಳಲ್ಲಿ ತಜ್ಞರ ಭೇಟಿ

ಕಲಬುರಗಿ: ಜಿಲ್ಲೆಯ ಹಲವೆಡೆ ಭೂಕಂಪ ವಿಚಾರ; ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಭೇಟಿ

Published On - 11:14 am, Wed, 20 October 21

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ