Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು

ಭೂಕಂಪನದ ಬಗ್ಗೆ ಜಿಲ್ಲಾಡಳಿತ ನಿಖರ ಮಾಹಿತಿ ಕಲೆ ಹಾಕುತ್ತಿದ್ದು, ಜನರು ಯಾವುದೇ ಭಯಕ್ಕೆ ಒಳಗಾಗಬಾರದು ಎಂದು ಡಿಸಿ ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದರು.

Karnataka Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಕಂಪಿಸಿದ ಭೂಮಿ: ರಿಕ್ಟರ್​ ಮಾಪಕದಲ್ಲಿ 4.9ರಷ್ಟು ಕಂಪನದ ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 09, 2022 | 8:20 AM

ವಿಜಯಪುರ: ಜಿಲ್ಲೆಯಲ್ಲಿ ಬೆಳಿಗ್ಗೆ 6.21ಕ್ಕೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ಭಯದಿಂದ ಮನೆಗಳಿಂದ ಜನರು ಹೊರಗಡೆ ಓಡಿಬಂದಿದ್ದಾರೆ. ಗ್ರಾಮೀಣ ಭಾಗದಲ್ಲಿ ಕಂಪನದ ಅನುಭವ ಹೆಚ್ಚಾಗಿದೆ. ಜಿಲ್ಲೆಯಲ್ಲಿ ವಿಜಯಪುರ ನಗರ, ವಿಜಯಪುರ ತಾಲೂಕಿನ ನಾಗಠಾಣ, ಅಲಿಯಾಬಾದ ಹಾಗೂ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಸೋಮದೇವರಹಟ್ಟಿ ಸೇರಿ ಹಲವೆಡೆ ಭೂಮಿ ಕಂಪಿಸಿದ್ದು, ಭಯದಲ್ಲಿ ಜನರು ಕಾಲ‌‌ ಕಳೆಯುತ್ತಿವಂತ್ತಾಗಿದೆ. 4.9 ತೀವ್ರತೆಯಲ್ಲಿ ಭೂಮಿಯಾಳದ 5 ಕಿಲೋ ಮೀಟರ್ ಒಳಗಿನಿಂದ ಭೂಮಿ ನಡುಗಿದೆ. ಜಿಲ್ಲೆಯ ಇಂಡಿ ಬಸವನಬಾಗೇವಾಡಿ ಭಾಗದಲ್ಲಿ ಭೂಕಂಪನ ಕೇಂದ್ರೀಕೃತವಾಗಿತ್ತು. ಬಾಗಲಕೋಟೆಯ ಜಮಖಂಡಿ ರಬಕವಿ ಹಾಗೂ ಮಹಾರಾಷ್ಟ್ರದ ಪೂನಾ ಸಹ ಕಂಪನದ ಭಾಗವಾಗಿದ್ದವು. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿಯಿಂದ ಪ್ರಾಥಮಿಕ ವರದಿ ನೀಡಲಾಗಿದೆ.

ಇದನ್ನೂ ಓದಿ: Karnataka Rain: ಮಳೆಯ ಆರ್ಭಟಕ್ಕೆ ಕರ್ನಾಟಕ ತತ್ತರ; ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ

ಭೂಕಂಪನದ ಬಗ್ಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ‌ ನಿರ್ವಹಣಾ‌ ಕೇಂದ್ರ  ಅಧಿಕಾರಿಗಳು ನಿಖರ ಮಾಹಿತಿ ನೀಡಲಿದ್ದಾರೆ. ಭೂಕಂಪನದ ಬಗ್ಗೆ ಜಿಲ್ಲಾಡಳಿತ ನಿಖರ ಮಾಹಿತಿ ಕಲೆ ಹಾಕುತ್ತಿದ್ದು, ಜನರು ಯಾವುದೇ ಭಯಕ್ಕೆ ಒಳಗಾಗಬಾರದು ಎಂದು ಡಿಸಿ ವಿಜಯಮಹಾಂತೇಶ ದಾನಮ್ಮನವರ ಮನವಿ ಮಾಡಿದರು.

ಇದನ್ನೂ ಓದಿ: ಜಮ್ಮು-ಕಾಶ್ಮೀರದ ಅಮರನಾಥ ಗುಹೆ ಬಳಿ ಮೇಘ ಸ್ಫೋಟ: ಮೈಸೂರಿನ ಆರು ಪ್ರವಾಸಿಗರು ಸೇಫ್

ಬಾಗಲಕೋಟೆ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ:

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಹುಡ್ಕೊ ಕಾಲೋನಿ ಬಳಿ ಬೆಳಗ್ಗೆ 6 ಗಂಟೆ 21 ನಿಮಿಷಕ್ಕೆ ಭೂಮಿ ಕಂಪಿಸಿರುವ ಅನುಭವವಾಗಿದೆ. ಮೊದಲು ಟೈರ್ ಬ್ಲಾಸ್ಟ್ ತರಹ ಶಬ್ದ ಕೇಳಿಬಂದಿದ್ದು, ಬಳಿಕ ಎರಡು ಸೆಕೆಂಡ್​ ಭೂಮಿ ಕಂಪಿಸಿದೆ. ಕಂಪನದ ಅನುಭವದ ಕುರಿತು ಜಿಯಾಗ್ರಫಿ ಅಧ್ಯಯನ ‌ಮಾಡಿರುವ ಆನಂದ ಕಾಳಪ್ಪನವರ ಹೇಳಿದರು. ಭೂಕಂಪನದ ಬಗ್ಗೆ ಜಿಲ್ಲಾಡಳಿತ ಮಾಹಿತಿ ಕಲೆ ಹಾಕುತ್ತಿದೆ.

Published On - 8:19 am, Sat, 9 July 22

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ