Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು

ವಿಜಯಪುರ ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಭೂಕಂಪನದಿಂದ ಜನರು ಆತಂಕಗೊಂಡಿದ್ದಾರೆ.

Vijayapura Earthquake: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ; ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on:Jan 30, 2022 | 11:38 AM

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನವಾಗಿದೆ(Earthquake). ಇಂದು (ಜನವರಿ 30) ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ(Richter scale) 2.9 ರಷ್ಟು ತೀವ್ರತೆ ದಾಖಲಾಗಿದೆ. ವಿಜಯಪುರ (Vijayapura) ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಭೂಕಂಪನದಿಂದ ಜನರು ಆತಂಕಗೊಂಡಿದ್ದಾರೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳ ಹಿಂದೆ ಸಂಭವಿಸಿತ್ತು ಭೂಕಂಪನ ಕಳೆದ ಮೂರು ತಿಂಗಳ ಹಿಂದೆ ಸರಣಿ ಭೂಕಂಪನವಾಗಿತ್ತು. ಹಾಗೂ ಭೂಮಿಯಿಂದ ಭಾರೀ ಶಬ್ಧ ಕೇಳಿ ಬರುತ್ತಿತ್ತು. ಈ ಸಂಬಂಧ ವಿಜಯಪುರ ಜಿಲ್ಲೆಗೆ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು, ಸ್ಥಳ ಪರಿಶೀಲನೆಗೆ ಮುಂದಾಗಿದ್ದರು. ಸ್ಥಳ ಪರಿಶೀಲನೆ ಬಳಿಕ ವಿಜ್ಞಾನಿಗಳ ತಂಡ ಸ್ಥಳೀಯರಲ್ಲಿ ಧೈರ್ಯ ತುಂಬಿತ್ತು.

ಬೆಂಗಳೂರು, ದೆಹಲಿ, ಹೈದರಾಬಾದ್‌ನಿಂದ ಬಂದಿರುವ ವಿಜ್ಞಾನಿಗಳ ತಂಡ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಸ್ಥಳಿಯರೊಂದಿಗೆ ಸಭೆ ಆರಂಭಿಸಿತ್ತು. ಭೂಕಂಪನವಾಗುತ್ತಿರುವ ಹಿನ್ನೆಲೆ ಜನಜಾಗೃತಿ ಸಭೆ ನಡೆಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥ ಡಾ. ಶ್ರೀನಿವಾಸ ರೆಡ್ಡಿ ನೇತ್ರತ್ವದಲ್ಲಿ ಸಭೆ ನಡೆದಿದ್ದು, ಮನಗೂಳಿ ಗ್ರಾಮದ ಜನರಿಗೆ ತಿಳುವಳಿಕೆ ಹಾಗೂ ಧೈರ್ಯ ನೀಡುವ ಕಾರ್ಯ ಮಾಡಿದ್ದಾರೆ.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕಳೆದ ಸಪ್ಟೆಂಬರ್ 4ರಿಂದ ಸರಣಿ ರೂಪದಲ್ಲಿ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ, ಹಲವಾರು ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ.

ಸೆಪ್ಟೆಂಬರ್​ನಿಂದ ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ. ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.

ಇನ್ನು, ಕಲಬುರಗಿಯಲ್ಲಿ ಕೂಡ ಭೂಕಂಪನದಿಂದ ಜನರು ಗಾಬರಿಯಾಗಿದ್ದು, ತಮ್ಮ ಊರುಗಳನ್ನೇ ತೊರೆದಿದ್ದರು. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಕಲಬುರಗಿಯಲ್ಲಿ 4.1 ತೀವ್ರತೆಯ ಭೂಕಂಪನವಾಗಿತ್ತು. ಇದರಿಂದ ಅನೇಕ ಜನರು ಊರು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ:

Vijayapura Earthquake: ಕಳೆದ ಎರಡು ತಿಂಗಳುಗಳಿಂದ ಸರಣಿ ಭೂಕಂಪನ; ವಿಜ್ಞಾನಿಗಳ ತಂಡದಿಂದ ಸ್ಥಳ ಪರಿಶೀಲನೆ

ಕಲಬುರಗಿ ಲಘುಭೂಕಂಪನಕ್ಕೆ ಪರಿಹಾರ: ತಾತ್ಕಾಲಿಕ ಟಿನ್ ಶೆಡ್ ನಿರ್ಮಾಣಕ್ಕೆ 3 ಕೋಟಿ ರೂ. ಅನುದಾನ ಮಂಜೂರು

Published On - 11:32 am, Sun, 30 January 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ