ವಿಜಯಪುರದ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಘಡ; ಹೊತ್ತಿ ಉರಿದ ಕಲ್ಲಿದ್ದಲು ಸಾಗಾಣಿಕೆಯ ಯಂತ್ರ
ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ಘಟಕದ ಬಳಿ ಕಲ್ಲಿದ್ದಲು ಸಾಗಾಣಿಕೆಯ ಯಂತ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ವಿಜಯಪುರ: ಜಿಲ್ಲೆ ನಿಡಗುಂದಿ ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಎನ್‌ಟಿಪಿಸಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕಲ್ಲಿದ್ದಲು ಘಟಕದ ಬಳಿ ಕಲ್ಲಿದ್ದಲು ಸಾಗಾಣಿಕೆಯ ಯಂತ್ರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಯಂತ್ರ ಹೊತ್ತಿ ಉರಿದಿದ್ದು ಉಷ್ಣ ವಿದ್ಯುತ್ ಸ್ಥಾವರ ವ್ಯಾಪ್ತಿಯ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಆದ ಹಾನಿ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕರು ಪೊಲೀಸರ ವಶ ಬೆಂಗಳೂರು: ಬೈಕ್ ಕಳ್ಳತನ ಮಾಡ್ತಿದ್ದ ಅಪ್ರಾಪ್ತ ಬಾಲಕರನ್ನು ಮಾಗಡಿ ರಸ್ತೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಗಡಿ ರಸ್ತೆ, ವಿಜಯನಗರ, ಸಿಟಿ ಮಾರ್ಕೆಟ್, ಅಶೋಕನಗರ, ಸಿ.ಕೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಬಾಲಕರಿಂದ 5 ಲಕ್ಷ ಮೌಲ್ಯದ 8 ಬೈಕ್ಗಳು ಜಪ್ತಿ ಮಾಡಲಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಲಾಗಿದೆ. ನಗರದ ಐತಿಹಾಸಿಕ ಭೀಷ್ಮಕೆರೆಗೆ ಹಾರಿ ಗದಗ ನಗರದ ರಂಗನವಾಡಿ ಓಣಿಯ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದ. ಸಮಯ ಪ್ರಜ್ಞೆ ಮೆರೆದ ಟ್ರಾಫಿಕ್ ಪೊಲೀಸ್ ಗಂಗಾಧರ ಪೂಜಾರ, ಮತ್ತು ಸ್ಥಳೀಯ ಮಹೇಶ ವಡ್ಡರ ಆತ್ಮಹತ್ಯೆಗೆ ಯತ್ನಿಸಿದ್ದ ಮುಬಾರಕ್ನನ್ನು ರಕ್ಷಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಕೆರೆಗೆ ಹಾರಿದ್ದ ಯುವಕನನ್ನ ನೋಡಿ ಬೆಚ್ಚಿಬಿದ್ದಿದ್ದ ಪೇದೆ ತಕ್ಷಣ ಕಾರ್ಯಪ್ರವೃತ್ತರಾಗಿ ಯುವನನ್ನ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:17 pm, Fri, 10 June 22