ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​ನಲ್ಲಿ ಬೆಂಕಿ; ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

| Updated By: ಆಯೇಷಾ ಬಾನು

Updated on: Jul 02, 2023 | 1:57 PM

ಸೋಲಾಪುರದಿಂದ ಪುಣೆ ಮಾರ್ಗವಾಗಿ ದೆಹಲಿಗೆ ಹೊರಟ್ಟದ್ದ ವಿದ್ಯುತ್ ಚಾಲಿತ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು.

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​ನಲ್ಲಿ ಬೆಂಕಿ; ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಕೆಕೆ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​ನಲ್ಲಿ ಬೆಂಕಿ
Follow us on

ವಿಜಯಪುರ: ಕೆಕೆ ಎಕ್ಸ್‌ಪ್ರೆಸ್(KK Express Train) ರೈಲಿನ ಇಂಜಿನ್​ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ(Train Accident). ಮಹಾರಾಷ್ಟ್ರದ ಸೋಲಾಪುರ ಜಿಲ್ಲೆ ಘಾಟಘೆ ಗ್ರಾಮದ ಬಳಿ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಲೋಕೋ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಳಿಗ್ಗೆ ಸೋಲಾಪುರದಿಂದ ಪುಣೆ ಮಾರ್ಗವಾಗಿ ದೆಹಲಿಗೆ ಹೊರಟ್ಟದ್ದ ವಿದ್ಯುತ್ ಚಾಲಿತ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು. ತಕ್ಷಣ ರೈಲ್ವೆ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ಬೆಂಕಿ ನಂದಿಸಿದ ಬಳಿಕ ಕೆಕೆ ಎಕ್ಸ್‌ಪ್ರೆಸ್ ರೈಲು ತೆರಳಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೇಲ್ವೆ ಎಂಜಿನ್‌ಗೆ ಬೆಂಕಿ ಹಿನ್ನೆಲೆ ಉಳಿದ ರೈಲುಗಳ ಸಂಚಾರ ಒಂದೂವರೆ ಗಂಟೆ ವಿಳಂಬವಾಗಿದೆ.

ಇದನ್ನೂ ಓದಿ: Maharashtra: ಸಮೃದ್ಧಿ ಎಕ್ಸ್​ಪ್ರೆಸ್​ ವೇನಲ್ಲಿ 2022ರಿಂದೀಚೆಗೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 88

ಬಾಲಸೋರ್ ರೈಲು ಅಪಘಾತ: ಜನರಲ್ ಮ್ಯಾನೇಜರ್ IRTS ಅಧಿಕಾರಿ ಅರ್ಚನಾ ಬೆಂಗಳೂರು ಯಲಹಂಕಕ್ಕೆ ಎತ್ತಂಗಡಿ

ಬಾಲಸೋರ್ ರೈಲು ಅಪಘಾತದ ನಂತರ ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅರ್ಚನಾ ಜೋಶಿ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ. ಸಚಿವ ಸಂಪುಟದ ನೇಮಕಾತಿ ಸಮಿತಿಯು ಅನಿಲ್ ಕುಮಾರ್ ಮಿಶ್ರಾ ಅವರಿಗೆ ಆಗ್ನೇಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಲಾಗಿದೆ. ಅರ್ಚನಾ ಅವರು 1985-ಬ್ಯಾಚ್ ಭಾರತೀಯ ರೈಲ್ವೆ ಸಂಚಾರ ಸೇವೆ ಅಧಿಕಾರಿ. ಜುಲೈ 30, 2021 ರಂದು ಆಗ್ನೇಯ ರೈಲ್ವೆ ಜನರಲ್ ಮ್ಯಾನೇಜರ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:40 pm, Sun, 2 July 23