AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮೇಲೆ ಫೈರಿಂಗ್​​; ಆರೋಪಿ ಅರೆಸ್ಟ್​​

ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಕ್ಷುಲ್ಲಕ ಜಗಳಕ್ಕೆ ಇಬ್ಬರ ಮೇಲೆ ಮಾಲೀಕ ಸಂಗಪ್ಪ ಪೂಜಾರಿ ಗುಂಡಿನ ದಾಳಿ ನಡೆಸಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಸ್ನೇಹಿತರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಹಾರ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯಪುರದಲ್ಲಿ ಮತ್ತೆ ಗುಂಡಿನ ಮೊರೆತ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮೇಲೆ ಫೈರಿಂಗ್​​; ಆರೋಪಿ ಅರೆಸ್ಟ್​​
ಪೊಲೀಸರಿಂದ ಸ್ಥಳ ಪರಿಶೀಲನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Sep 20, 2026 | 8:29 PM

Share

ವಿಜಯಪುರ, ಸೆಪ್ಟೆಂಬರ್​​ 20: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಬಂದಿದ್ದು, ಕ್ಷುಲ್ಲಕ ಕಾರಣಕ್ಕೆ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಸಂಗಪ್ಪ ಪೂಜಾರಿ ಎಂಬಾತ ಸುಖದೇವ್ ಮತ್ತು ರಾಜು ಎಂಬುವವರ ಮೇಲೆ ಗುಂಡು ಹಾರಿಸಿದ್ದಾನೆ. ಸುಖದೇವ್ ಹೊಟ್ಟೆ, ಬೆನ್ನಿಗೆ ಎರಡು ಗುಂಡುಗಳು ತಾಗಿದ್ದು, ರಿವಾಲ್ವರ್​​ನಿಂದ ಗುಂಡು ಹಾರಿಸಿದ್ದ ಸಂಗಪ್ಪ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ವಿಜಯಪುರದ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಆರೋಪಿ ಸಂಗಪ್ಪ ಪೂಜಾರಿ ಪೆಟ್ರೋಲ್ ಬಂಕ್ ಮಾಲೀಕ ಎಂಬುದು ಗೊತ್ತಾಗಿದೆ. ಘಟನೆಯಲ್ಲಿ ಸುಖದೇವ ಸ್ನೇಹಿತ ರಾಜೂ ಎಂಬುವವರಿಗೆ ಗಾಯವಾಗಿದೆ. ಪೆಟ್ರೋಲ್​​ ಬಂಕ್​​ಗೆ ಗೆಳೆಯ ರಾಜೂ ಜೊತೆಗೆ ಸುಖದೇವ ಬಂದಿದ್ದರು. ಈ ವೇಳೆ ಪೆಟ್ರೋಲ್​​ ಬಂಕ್​​ ಮಾಲೀಕ ಸಂಗಪ್ಪ ಪೂಜಾರಿ ಜೊತೆ ಇವರಿಗೆ ಜಗಳವಾಗಿದೆ. ಆ ವೇಳೆ ಕೆರಳಿದ ಸಂಗಪ್ಪ ಮನೆಗೆ ಹೋಗಿ ಪರವಾನಿಗೆ ಹೊಂದಿದ ಪಿಸ್ತೂಲ್ ತಂದು ಫೈರ್ ಮಾಡಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಸ್ನೇಹಿತರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಸಂಗಪ್ಪನನ್ನು ಕೊಲ್ಹಾರ ಪೊಲೀಸರು ವಶಕ್ಕೆ ಪಡೆದಿದ್ದು, ಸುಕೋ ತಂಡ ಹಾಗೂ ಪೊಲೀಸರಿಂದ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆದಿದೆ.

LIVE TV

ಇದನ್ನೂ ಓದಿ: 12 ವರ್ಷ ತಲೆಮರೆಸಿಕೊಂಡಿದ್ದ ಹಂತಕ: ಮಹಿಳೆಯ ಹಿಂದೆ ಬಿದ್ದು ಸಿಕ್ಕಿಬಿದ್ದ ಕೈದಿ

ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ವಿಜಯಪುರ ನಗರದ ದರ್ಗಾ ರಿಂಗ್‌ರೋಡ್ ಬಳಿ ಕ್ರೇನ್‌ಗೆ ನೇಣುಬೀಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತರನ್ನು ಆಕಾಶ್ ಪಾಟೀಲ್ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ಆದರ್ಶನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!