PSI Recruitment Scam: ಪೋಷಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ರಚನಾ

ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ನೇಮಕಾತಿ ಆದೇಶ ನೀಡಬೇಕೆಂದು ರಚನಾ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಹೋದರ ವಿಕ್ರಮ್ ಜೊತೆಗೆ ತೆರಳಿದ್ದರು. ಪ್ರತಿಭಟನೆ ನಡೆಸಿದ ಮಾರನೇ ದಿನ ರಚನಾ ಮೇಲೆ ದೂರು ದಾಖಲಾಗಿತ್ತು.

PSI Recruitment Scam: ಪೋಷಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಬೆಂಗಳೂರಿನ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ರಚನಾ
ಫ್ರೀಡಂ ಪಾರ್ಕ್​ ನಲ್ಲಿ ಸತ್ಯಾಗ್ರಹ ನಡೆಸಿದ್ದ ಅಭ್ಯರ್ಥಿಗಳು
Follow us
TV9 Web
| Updated By: sandhya thejappa

Updated on:May 05, 2022 | 11:45 AM

ವಿಜಯಪುರ: ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಈಗಾಗಲೇ ಬಯಲಿಗೆ ಬಂದಿದೆ. ಅಕ್ರಮದಲ್ಲಿ ಭಾಗಿಯಾದ ಕಿಂಗ್​ಪಿನ್​ಗಳನ್ನು ಸಿಐಡಿ ವಿಚಾರಣೆ ನಡೆಸುತ್ತಿದೆ. ಕರ್ನಾಟಕ ಸರ್ಕಾರ (Karnataka Government) ಕೂಡಾ ಪಿಎಸ್ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದಿರುವ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯ ರಚನಾ ಮುತ್ತಗಲೇರಿ ಮನೆಯಲ್ಲಿ ನೀರವ ಮೌನ ಆವರಿಸಿದೆ.

ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ನೇಮಕಾತಿ ಆದೇಶ ನೀಡಬೇಕೆಂದು ರಚನಾ ಆಗ್ರಹಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಲು ಸಹೋದರ ವಿಕ್ರಮ್ ಜೊತೆಗೆ ತೆರಳಿದ್ದರು. ಪ್ರತಿಭಟನೆ ನಡೆಸಿದ ಮಾರನೇ ದಿನ ರಚನಾ ಮೇಲೆ ದೂರು ದಾಖಲಾಗಿತ್ತು. ರಚನಾ ಓಎಂಆರ್ ಶೀಟ್ ಹಾಗೂ ಝೆರಾಕ್ಸ್ ಶೀಟ್​​ನಲ್ಲಿ ವ್ಯತ್ಯಾಸ ಕಂಡ ಬಂದ ಹಿನ್ನೆಲೆ ದೂರು ದಾಖಲಾಗಿತ್ತು. ದೂರು ದಾಖಲಾದ ನಂತರ ರಚನಾ ಹಾಗೂ ಸಹೋದರ ವಿಕ್ರಮ ಕುಟುಂಬಸ್ಥರ ಸಂಪರ್ಕಕ್ಕೆ ಸಿಕ್ಕಿಲ್ಲ. ಇಬ್ಬರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಅಜ್ಜಿ ಮನೆಯಲ್ಲಿ ಬೆಳೆದಿದ್ದ ರಚನಾ: ರಚನಾ ಹಾಗೂ ವಿಕ್ರಮ್ ಎಲ್ಲಿದ್ದಾರೆಂದು ಮಾಹಿತಿ ನೀಡಲು ರಚನಾ ದೊಡ್ಡಮ್ಮ ಕಸ್ತೂರಿಬಾಯಿ ಮನವಿ ಮಾಡಿದ್ದರು. ರಚನಾ ತಾಯಿ ಸಾವಿತ್ರಿ ಘಟನೆಯ ಬಳಿಕ ಲೋಬಿಪಿಯಿಂದ ಬಳಲುತ್ತಿದ್ದಾರೆ. ಯಾರ ಜೊತೆಗೂ ಮಾತನಾಡಲು ನಿರಾಕರಿಸುತ್ತಿದ್ದಾರೆ. ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣದಿಂದ ರಚನಾ ಹಾಗೂ ಆಕೆಯ ತಾಯಿಯನ್ನು ರಚನಾ ತಂದೆ ಬಿಟ್ಟು ಹೋಗಿದ್ದರಂತೆ. ಹಸುಗೂಸಿದ್ದಾಗಲೇ ತಂದೆಯಿಂದ ದೂರವಾಗಿದ್ದಳು. ತವರು ಮನೆ ಬಸವನಬಾಗೇವಾಡಿಯಲ್ಲೇ ಬೆಳೆದಿದ್ದರು.

ರಚನಾ ತಾಯಿ ಬೀದರ್ ಜಿಲ್ಲೆಯ ಹುಮನಾವಾದ್ ತಾಲೂಕಿನ ಚಿಟಗುಪ್ಪದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ರಚನಾ ಸದ್ಯ ವಿಜಯಪುರ ಜಿಲ್ಲೆಯ ಕೂಡಗಿಯ ಉಷ್ಣ ವಿದ್ಯತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಎರಡು ಬಾರಿ ಪಿಎಸ್ಐ ಪರೀಕ್ಷೆ ಬರೆದಿದ್ದರೂ ಉತ್ತೀರ್ಣವಾಗಿರಲಿಲ್ಲ. ಮೂರನೇ ಬಾರಿಗೆ ಪರೀಕ್ಷೆ ಬರೆದು ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಪಸ್ಟ್ ರ್ಯಾಂಕ್ ಪಡೆದಿದ್ದಾಳೆ. ಸಿಐಡಿ ತನಿಖೆಗೆ ಪೂರ್ಣ ಸಹಕಾರ ನೀಡುತ್ತೇವೆ. ಎಷ್ಟೇ ಮರು ಪರೀಕ್ಷೆ ನಡೆಸಿದರೂ ನಮಗೆ ಯಾವುದೇ ಸಮಸ್ಯೆಯಿಲ್ಲ. ಸದ್ಯ ರಚನಾ ಹಾಗೂ ವಿಕ್ರಮ್ ಎಲ್ಲಿದ್ದಾರೆ ಎಂದು ಮಾಹಿತಿ ನೀಡಿ ಅಂತ ಮನವಿ ಮಾಡಿದ್ದಾರೆ.

ಇದನ್ನೂ ಓದಿ

ವಿಪ್ರೋ ಕಂಪನಿಯ ಅಜೀಂ ಪ್ರೇಮ್​ಜಿ ವಿರುದ್ಧ ಆರೋಪ ಮಾಡಿದ್ದ ವಕೀಲನಿಂದ ಬೇಷರತ್ ಸಾರ್ವಜನಿಕ ಕ್ಷಮೆಯಾಚನೆ

ತಂದೆಯ ಕೊನೇ ಆಸೆ ನೆರವೇರಿಸಲು ಈ ಹಿಂದು ಸೋದರಿಯರು ಮಾಡಿದ್ದೇನು?-ಇಬ್ಬರಿಗೂ ಸನ್ಮಾನ ಮಾಡುತ್ತೇವೆ ಎಂದು ಖುಷಿ ವ್ಯಕ್ತಪಡಿಸಿದ ಮುಸ್ಲಿಂ ಮುಖಂಡರು

Published On - 11:36 am, Thu, 5 May 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ