ನಾಲ್ಕು ಮಕ್ಕಳು ಜಲಸಮಾಧಿ: ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಬಚಾವ್

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನಲ್ಲಿ ಭಯಾನಕ ಘಟನೆ ನಡೆದಿದೆ. ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಘಟನೆ ಕೌಟುಂಬಿಕ ಕಲಹದಿಂದ ಉಂಟಾಗಿದೆ ಎಂದು ಶಂಕಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಾಲ್ಕು ಮಕ್ಕಳು ಜಲಸಮಾಧಿ: ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಬಚಾವ್
ನಾಲ್ಕು ಮಕ್ಕಳು ಜಲಸಮಾಧಿ: ಮಕ್ಕಳನ್ನು ಕಾಲುವೆಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿ ಬಚಾವ್
Edited By:

Updated on: Jan 13, 2025 | 2:51 PM

ವಿಜಯಪುರ, ಜನವರಿ 13: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ (Mother) ಕೂಡ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ತೆಲಗಿ ಗ್ರಾಮದ ತನು ನಿಂಗರಾಜ‌ ಭಜಂತ್ರಿ(5), ರಕ್ಷಾ ಭಜಂತ್ರಿ(3), ಹಸೇನ್ ನಿಂಗರಾಜ ಭಜಂತ್ರಿ(2), 13 ತಿಂಗಳ ಹುಸೇನ್ ಮೃತ ಮಕ್ಕಳು. ಮೃತರು ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎನ್ನಲಾಗಿದೆ.

ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಕಾಲುವೆಯಿಂದ ತನು, ರಕ್ಷಾ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ನಿಡಗುಂದಿ ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದಾರೆ.

ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ: ಸ್ಥಳದಲ್ಲೇ ಪ್ರಾಣಬಿಟ್ಟ ಮಹಿಳೆ

ವಿಜಯಪುರ ನಗರದ ಮನಗೂಳಿ ರಸ್ತೆಯ ವಿಆರ್‌ಎಲ್​ ಬಸ್ ನಿಲ್ದಾಣದಲ್ಲಿ ಪಾದಚಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮಹಿಳೆಗೆ 70 ವರ್ಷ ಅಂದಾಜಿಸಲಾಗಿದೆ.

ಇದನ್ನೂ ಓದಿ: ನೀರು ಕಾಯಿಸುವ ವಿಚಾರಕ್ಕೆ ಮುಖ್ಯಶಿಕ್ಷಕ, ಸೆಕ್ಯೂರಿಟಿ ಗಾರ್ಡ್ ಮಧ್ಯೆ ಜಗಳ: ಕೊಲೆಯಲ್ಲಿ ಅಂತ್ಯ

ಮೃತ ಮಹಿಳೆಯ ಹೆಸರು ವಿಳಾಸ ತಿಳಿದು ಬಂದಿಲ್ಲ. ಮಹಿಳೆಯ ಶವ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಂಚಾರಿ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣು

ಗದಗ ಜಿಲ್ಲೆ ನರಗುಂದ ತಾಲೂಕಿನ ಗುರ್ಲಕಟ್ಟಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನಡೆದಿದೆ. ಮನೆಯಲ್ಲಿ ನೇಣು ಹಾಕಿಕೊಂಡು ರೈತ ಶಿವನಗೌಡ ಕರಿಗೌಡ್ರ (39) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿಯನ್ನೇ ಹತ್ಯೆಗೈದ ಪತಿ: ಜಾತ್ರೆಯಲ್ಲಿ ಹುಟ್ಟಿದ ಲವ್ ಜಾತ್ರೆಯಲ್ಲೇ ಅಂತ್ಯ

ಎಸ್‌ಬಿ‌ಐ ಬ್ಯಾಂಕ್​ನಲ್ಲಿ 1 ಲಕ್ಷ 50 ಸಾವಿರ ರೂ. ಸಾಲ ಪಡೆದಿದ್ದ ರೈತ, ಬಡ್ಡಿ ಸೇರಿ 4 ಲಕ್ಷ‌ 50 ಸಾವಿರ ರೂ. ಆಗಿದೆ. ಪ್ರಾಥಮಿಕ ಸಹಕಾರಿ ಸಂಘದಲ್ಲಿ 1 ಲಕ್ಷ 50 ಸಾವಿರ ರೂ. ಸಾಲ. ಹಲವು ವರ್ಷಗಳಿಂದ ಜಮೀನಿನಲ್ಲಿ ಫಸಲು ಸರಿಯಾಗಿ ಬಂದಿಲ್ಲ. ಸಾಲ ತೀರಿಸಲು ಆಗದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಗುಂದ ಪೊಲೀಸ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:49 pm, Mon, 13 January 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us