ಬಾಗಲಕೋಟೆ, ಜನವರಿ 26: ಬೀಳಗಿ (Bilagi) ತಾಲೂಕಿನ ಅನಗವಾಡಿ ಬಳಿಯ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (Hubballi-Vijayapura National Highway) ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30)
ಮಲ್ಲು ಪೂಜಾರಿ(25), ಕಲ್ಲು ಕವಟಗಿ(35) ಮೃತ ದುರ್ದೈವಿಗಳು. ಬಾದಾಮಿ ಬನಶಂಕರಿ ಜಾತ್ರೆಗೆ ಹೋಗಿ, ವಾಪಸ್ ಆಗುವಾಗ ಅನಗವಾಡಿ ಗ್ರಮಾದ ಬಳಿ ಕಾರು ಚಾಲಕನ ನಿಯಂತ್ರ ತಪ್ಪಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಓರ್ವ ಮಹಿಳೆ, ನಾಲ್ವರು ಸ್ಥಳದಲ್ಲೆ ಸಾವೀಗಿಡಾಗಿದ್ದಾರೆ. ಮೃತರು ಬಸವನಬಾಗೇವಾಡಿ ತಾಲೂಕಿನ ಹೊನಗನಳ್ಳಿ ಮೂಲದವರು ಎಂದು ತಿಳಿದುಬಂದಿದೆ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿತ್ರದುರ್ಗ: ಸೇತುವೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿತ್ತು. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ (ಜ.25) ರಂದು ಕುಟುಂಬ ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಕಾರು ಡಿಕ್ಕಿಯಾಗಿತ್ತು. 2 ವರ್ಷದ ಸಿಂಧುಶ್ರೀ, 5 ತಿಂಗಳ ಹಯ್ಯಾಳಪ್ಪ ಎಂಬ ಪುಟ್ಟ ಮಗು, 3 ತಿಂಗಳ ರಕ್ಷಾ ಎಂಬ ಮತ್ತೊಂದು ಮಗು ಸೇರಿ 26 ವರ್ಷದ ಲಿಂಗಪ್ಪ ಅವರು ಕೊನೆಯುಸಿರೆಳೆದಿದ್ದರು.
ಇದನ್ನೂ ಓದಿ: ಗದಗ: ಸರ್ಕಾರಿ ಬಸ್-ಲಾರಿ ನಡುವೆ ಅಪಘಾತ; ಇಬ್ಬರು ದುರ್ಮರಣ
ಕಾರಿನಲ್ಲಿದ್ದ ಇನ್ನುಳಿದ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಅವರಿಗೆ ಗಂಭೀರ ಗಾಯಗಳಾಗಿದ್ದು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ದಂಡಮ್ಮನಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿತ್ತು. ಸ್ಥಳಕ್ಕೆ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದಾರುಣ ಮೃತಪಟ್ಟಿದ್ದ ಘಟನೆ ತಮಿಳುನಾಡಿನ ಧರ್ಮಪುರಿ ಬಳಿಯ ಬೆಂಗಳೂರು-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿತ್ತು. ಡಿಕ್ಕಿ ಹೊಡೆದ ಲಾರಿ, ಬಳಿಕ ನಾಲ್ಕೈದು ಕಾರುಗಳಿಗೆ ಗುದ್ದಿತ್ತು. ಇದಾದ ಬಳಿಕ ಒಂದು ಲಾರಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿತ್ತು. ಮತ್ತೊಂದು ಲಾರಿಗೆ ಹೆದ್ದಾರಿಯಲ್ಲಿಯೇ ಬೆಂಕಿ ಹೊತ್ತಿಕೊಂಡು ಉರಿದಿತ್ತು. ದುರ್ಘಟನೆಯಲ್ಲಿ ಮೂವರು ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದರು. ಈ ಭಯಾನಕ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:16 am, Fri, 26 January 24