AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ

ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಿ ಎಂದು ಪ್ರಕಟಣೆ ಹೊರಡಿಸಿದ್ದಾರೆ.

ವಿಜಯಪುರದ ಮಹಿಳಾ ವಿವಿಯಲ್ಲಿ ಕೆಲಸ ಕೊಡಿಸೋ ಆಮಿಷ; ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ
ವಿಜಯಪುರ ಮಹಿಳಾ ವಿಶ್ವ ವಿದ್ಯಾನಿಲಯ
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 14, 2023 | 2:20 PM

Share

ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾನಿಲಯ(Karnataka State Women’s University)ದ ಹೆಸರಿನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಹಣ ವಸೂಲಿ ಮಾಡಿದ ಆರೋಪಗಳು ಕೇಳಿಬಂದಿದೆ. ಈ ಹಿನ್ನಲೆ ಕುಲಸಚಿವ ಪ್ರೋ. ಬಿ ಎಸ್ ನಾವಿ ಅವರು ‘ ವಿಶ್ವವಿದ್ಯಾನಿಲಯದಲ್ಲಿ ಉದ್ಯೋಗ ಕೊಡಿಸುವುದಾಗಿ ಕೆಲವರು ಉದ್ಯೋಗಾಕಾಂಕ್ಷಿಗಳಿಂದ ಹಣ ವಸೂಲಿ ಮಾಡಿದ್ದಾರೆ. ಮಹಿಳಾ ವಿಶ್ವವಿದ್ಯಾನಿಲಯದ ಲಾಂಭನ ಮತ್ತು ಕವರಗಳನ್ನು ದುರ್ಭಳಕೆ ಮಾಡಿಕೊಂಡು, ಹಿಂದಿನ ಹಾಗೂ ಪ್ರಸಕ್ತ ಕುಲಸಚಿವರ ಹಾಗೂ ಸಹಾಯಕ ಕುಲಸಚಿವರ ನಕಲಿ ಸಹಿಯನ್ನ ಬಳಸಿಕೊಂಡು ಪತ್ರ ನೀಡಿದ್ದಾರೆ. ಉದ್ಯೋಗದ ಆಸೆಯಿಂದ ಯಾರೂ ಮೋಸ ಹೋಗಬಾರದೆಂದು ಪ್ರಕಟಣೆ ಹೊರಡಿಸಿದ್ದಾರೆ.

ಮಹಿಳಾ ವಿವಿಗೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ

ಇನ್ನು ಇಂಥವರಿಂದ ಮೋಸ ಹೋಗದಂತೆ ಜಾಗೃತರಾಗಬೇಕೆಂದು ಈ ಪ್ರಕಟಣೆ ಹೊರಡಿಸಲಾಗಿದೆ. ಮಹಿಳಾ ವಿಶ್ವ ವಿದ್ಯಾನಿಲಯಕ್ಕೂ ಈ ಜಾಲಕ್ಕೂ ಯಾವುದೇ ಸಂಬಂಧವಿಲ್ಲ ವಿವಿಯಲ್ಲಿ ಭೋಧಕೇತರ ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಸಾರ್ವಜನಿಕರು ಉದ್ಯೋಗ ಕೊಡಿಸುವುದಾಗಿ ಬರುವ ವ್ಯಕ್ತಿಗಳಿಂದ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಏಷ್ಯಾದಲ್ಲೇ ಉತೃಷ್ಟ ಒಣ ದ್ರಾಕ್ಷಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುತ್ತಾರೆ, ಆದರೆ ಬೆಳೆಗಾರರ ಪಾಲಿಗೆ ಅದು ಕಹಿ ಕಹಿ, ಬಿಸಿಯೂಟಕ್ಕೆ ಸೇರಿಸಲು ಮನವಿ

ಉದ್ಯೋಗ ಭರವಸೆ ನೀಡಿದರೆ ಅಂಥವರ ಹೆಸರನ್ನು ಮಾಹಿತಿಯನ್ನು ನೀಡಲು ಮನವಿ

ಜೊತೆಗೆ ಈ ಕುರಿತು ಉದ್ಯೋಗ ಭರವಸೆ ನೀಡಿದರೆ ಅಂಥವರ ಮಾಹಿತಿಯನ್ನು ವಿಶ್ವ ವಿದ್ಯಾಲಯಕ್ಕೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ತಿಳಿಸಬೇಕೆಂದು ಕುಲಸಚಿವರು ಮನವಿ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ಮಾಹಿತಿ ಲಭ್ಯವಾಗಿದೆ ಆ ಹಿನ್ನಲೆ ಕುಲಪತಿ ಪ್ರೋ ತುಳಸಿಮಾಲಾ ಉದ್ಯೋಗದ ಹೆಸರಿನಲ್ಲಿ ಹಣ ಪಡೆದವರ ಮಾಹಿತಿ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿವಿಯ ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕುಲಪತಿ ತಿಳಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More