ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ‌ಪಾಟೀಲ್‌

ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ‌ಪಾಟೀಲ್​​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಹೆಚ್​ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ. ಆ ಮೂಲಕ ರಾಜ್ಯ ಸರ್ಕಾರ ನೇಕಾರರಿಗೆ ದಸರಾ ಹಬ್ಬದ ಉಡುಗೊರೆ ನೀಡಿದೆ.

ನೇಕಾರರಿಗೆ ದಸರಾ ಉಡುಗೊರೆ ನೀಡಿದ ಸರ್ಕಾರ: ಉಚಿತ ವಿದ್ಯುತ್ ಘೋಷಣೆ: ಸಚಿವ ಶಿವಾನಂದ ‌ಪಾಟೀಲ್‌
ಜವಳಿ ಸಚಿವ ಶಿವಾನಂದ ‌ಪಾಟೀಲ್‌
Edited By:

Updated on: Oct 21, 2023 | 4:27 PM

ವಿಜಯಪುರ, ಅಕ್ಟೋಬರ್​​​​​ 21: ನೇಕಾರರಿಗೆ 10 ಹೆಚ್​ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ‌ಪಾಟೀಲ್ (Shivanand Patil)​ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 10 ಹೆಚ್​ಪಿವರೆಗೆ 250 ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ. ನೇಕಾರರಿಗೆ ಇದರಿಂದ ದೊಡ್ಡ ಅನುಕೂಲವಾಗಲಿದೆ. ಚುನಾವಣೆಯಲ್ಲಿ ಘೋಷಿಸಿರುವುದನ್ನು ಕಾರ್ಯರೂಪಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.

ಸುಮಾರು 35ರಿಂದ 40 ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದೆ. ಒಟ್ಟು 120ರಿಂದ 140 ಕೋಟಿ ರೂ. ವೆಚ್ಚ ತಗುಲುತ್ತದೆ. ನ.20ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾಹ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಸಚಿವ ಶಿವಾನಂದ ಪಾಟೀಲ್ ಮೇಲೆ ನೋಟುಗಳ ಸುರಿಮಳೆ: ಸಚಿವರ ಸಮರ್ಥನೆ ಹೀಗಿದೆ ನೋಡಿ

ಸಹಕಾರಿ ರತ್ನ ಪ್ರಶಸ್ತಿ ವಿಜಯಪುರದಲ್ಲೇ ಪ್ರದಾನ ಮಾಡಲಾಗುವುದು. ಬರಗಾಲ ಹಿನ್ನೆಲೆ ಸಾಂಪ್ರದಾಯಿಕವಾಗಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ಗಡ್ಕರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ಸಚಿವ ಶಿವಾನಂದ ಪಾಟೀಲ್ ಮೇಲೆ ಇತ್ತೀಚೆಗೆ ನೋಟುಗಳ ಸುರಿಮಳೆಗೈದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ರಾಜ್ಯದಲ್ಲಿ ಬರಗಾಲ ಇದೆ. ವಿದ್ಯುತ್ ಅಭಾವವಿದೆ. ವಿದ್ಯುತ್ ಇಲ್ಲದೇ ರೈತರ ಬೆಳೆಗಳು ಹಾಳಾಗುತ್ತಿವೆ. ಇಂಥ ಸಂದರ್ಭದಲ್ಲಿ ಸಚಿವರ ಮೇಲೆ ನೋಟಿನ ಮಳೆಗೈದರೂ ಸಚಿವರು ಯಾವುದೇ ಪ್ರತಿರೋಧ‌ ತೋರಿಲ್ಲ.

ಇದನ್ನೂ ಓದಿ: ಆಪರೇಷನ್​ಗೆ ಮುಂದಾದ ಯಡಿಯೂರಪ್ಪ ಕುಟುಂಬದ ವ್ಯಕ್ತಿ, ಶಾಸಕರಿಗೆ ತಲಾ 50 ಕೋಟಿ ಆಮಿಷ; ಅಯನೂರು ಮಂಜುನಾಥ್ ಆರೋಪ

ಬರದ ಮಧ್ಯೆ ಸಚಿವ ಶಿವಾನಂದ ಪಾಟೀಲ ನೋಟುಗಳನ್ನು ತಮ್ಮ ಮೇಲೆ‌ ಹಾರಿಸಿದರೂ ತಡೆಯಲಿಲ್ಲಾ ಎಂದು ವಿರೋಧ ಪಕ್ಷಗಳ ನಾಯಕರು ಟೀಕಿಸಿದ್ದರು. ಆದರೆ, ಪ್ರತಿಪಕ್ಷಗಳ ಟೀಕೆಗೆ ಶಿವಾನಂದ ಪಾಟೀಲ್ ಅವರು ತೀಕ್ಷ್ಣವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಹೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ

ರೈತರ ಪಂಪ್ಸೆಟ್​ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆ ಹಿನ್ನಲೆ ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ನೇತೃತ್ವದಲ್ಲಿ ಹೆಸ್ಕಾಂ ಕಚೇರಿಗೆ ಬೀಗ ಹಾಕಿ ರೈತರಿಂದ ಪ್ರತಿಭಟನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿರುವ ವಿದ್ಯುತ್ ವಿತರಣಾ ಉಪಕೇಂದ್ರದ ಕಚೇರಿಗೆ ನಿನ್ನೆ ರಾತ್ರಿ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿದ್ದಾರೆ. ರೈತರ ಪಂಪ್ ಸೆಟ್ ಮತ್ತು ತೋಟದ ವಸತಿಗಳಿಗೆ ಸರಿಯಾಗಿ ವಿದ್ಯುತ್ ನೀಡದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Sat, 21 October 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us