ಯೋಗನಮನ, ವಿಶೇಷ ಪೂಜಾ ಕಾರ್ಯಗಳ ಮೂಲಕ ಸರಳ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ

ಕಳೆದ 2023ರ ಜನವರಿ 2 ಖ್ಯಾತ ಪ್ರವಚನಕಾರ ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಹಲೋಕ ತ್ಯಜಿಸಿದ್ದರು. ಶ್ರೀಗಳು ಭೌತಿಕವಾಗಿ ನಮ್ಮನ್ನು ಅಗಲಿ ನಾಳೆಗೆ ಒಂದು ವರ್ಷವಾಗಲಿದೆ. ಈ ಕಾರಣ ಶ್ರೀಗಳ ಸ್ಮರಣೆಗಾಗಿ ಜ್ಞಾನ ಯೋಗಾಶ್ರಮದಲ್ಲಿ ಗುರು ನಮನ ಕಾರ್ಯಕ್ರಮ ಆಯೋಜಿಸಲಾಗಿದೆ.

ಯೋಗನಮನ, ವಿಶೇಷ ಪೂಜಾ ಕಾರ್ಯಗಳ ಮೂಲಕ ಸರಳ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ
ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಕಾರ್ಯಕ್ರಮ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಆಯೇಷಾ ಬಾನು

Updated on: Jan 01, 2024 | 2:51 PM

ವಿಜಯಪುರ, ಜ.01: ಎಲ್ಲೆಡೆ ಹೊಸ ವರ್ಷಾಚರಣೆ (New Year 2024), ನವ ವರ್ಷಕ್ಕೆ ಭರ್ಜರಿ ಸ್ವಾಗತದ ಸಂಭ್ರಮ ಮನೆ ಮಾಡಿದೆ. ಇತ್ತ ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಹೊಸ ವರ್ಷಕ್ಕೆ ನೀರಸವಾಗಿಯೇ ಸ್ವಾಗತ ಸಿಕ್ಕಿದೆ. ನಡೆದಾಡುವ ದೇವರು  (Sri Siddeshwar Swamiji) ನಿಧನರಾಗಿ ಒಂದು ವರ್ಷವಾಗುತ್ತಿರುವ ಹಿನ್ನಲೆ ಒಂದು ರೀತಿಯಲ್ಲಿ ಕಾರ್ಮೋಡ ಕವಿದ ವಾತಾವರಣೆವೇ ಇದೆ. ಇನ್ನು ಶ್ರೀಗಳ ಸ್ಮರಣೆ ಪ್ರಯುಕ್ತ ಗುರುನಮನ ಕಾರ್ಯಕ್ರಮ ನಡೆಯುತ್ತಿದ್ದು ಇಂದು ಯೋಗನಮನ ಹಾಗೂ ವಿಶೇಷ ಪೂಜಾ ಕಾರ್ಯಗಳು ನಡೆದವು. ಇಂದು ಹಾಗೂ ನಾಳೆ ಗುರುನಮನದ ಪ್ರಮುಖ ಕಾರ್ಯಕ್ರಮಗಳು ನಡೆಯುತ್ತಿದ್ದು ಅಪಾರ ಪ್ರಮಾಣ ಭಕ್ತರು ಸಾಕ್ಷಿಯಾಗಿದ್ದಾರೆ.

ಕಳೆದ 2023ರ ಜನವರಿ 2 ಖ್ಯಾತ ಪ್ರವಚನಕಾರ ನಡೆದಾಡುವ ದೇವರೆಂದೇ ಖ್ಯಾತಿ ಪಡೆದಿದ್ದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಇಹಲೋಕ ತ್ಯಜಿಸಿದ್ದರು. ಶ್ರೀಗಳು ಭೌತಿಕವಾಗಿ ನಮ್ಮನ್ನು ಅಗಲಿ ನಾಳೆಗೆ ಒಂದು ವರ್ಷವಾಗಲಿದೆ. ಈ ಕಾರಣ ಶ್ರೀಗಳ ಸ್ಮರಣೆಗಾಗಿ ಜ್ಞಾನ ಯೋಗಾಶ್ರಮದಲ್ಲಿ ಗುರು ನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂದು ಹಾಗೂ ನಾಳೆ ಪ್ರಮುಖ ಕಾರ್ಯಕ್ರಮಗಳು ನಡೆಯಲಿವೆ. ಗುರು ನಮನ ಕಾರ್ಯಕ್ರಮದ ಅಂಗವಾಗಿ ಕಳೆದ ಡಿಸೆಂಬರ್ 23 ರಿಂದ 31 ರವರೆಗೆ ವಿವಿಧ ಗೋಷ್ಟಿಗಳು ಈಗಾಗಲೇ ನಡೆದಿವೆ. ಇಂದು ಯೋಗ ನಮನ ಹಾಗೂ ಶ್ರೀಗಳ ಗುರುಗಳಾಗಿದ್ದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಗಳ ಗದ್ದುಗೆ ವಿಶೇಷ ಪೂಜೆ ಕಾರ್ಯಕ್ರಮ ನಡೆಯಿತು.

ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಪತಂಜಲಿ ಯೋಗ ಸಮೀತಿಯ ಭವರಲಾಲಜಿ ಹಾಗೂ ಇತಯರ ಯೋಗಪಟುಗಳು ಯೋಗದ ಮೂಲಕ ಯೋಗನಮನ ಸಲ್ಲಿಸಿದರು. ನೂರಾರು ಜನರು ಇಂದು ನಸುಕಿನಿಂದಲೇ ನಡೆದ ಯೋಗನಮನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಶ್ರೀ ವಚನಾನಂದ ಸ್ವಾಮೀಜಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಯೋಗದ ಬಗ್ಗೆ ಅಪಾರ ಒಲವಿತ್ತು. ಶ್ರೀಗಳ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕಾಗಿ ಯೋಗ ನಮನ ಕಾರ್ಯಕ್ರಮ ಮಾಡಿದ್ದಾಗಿ ಹೇಳಿದರು. ಆಶ್ರಮದಲ್ಲಿ ಕಳೆದ 35 ವರ್ಷಗಳಿಂದಲೂ ಇಲ್ಲಿ ಯೋಗವನ್ನು ಮಾಡಿಕೊಂಡು ಬರಲಾಗಿದೆ ಎಂದರು.

ಇದನ್ನೂ ಓದಿ: ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ: ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ ಎಂದ ಎಂಬಿ ಪಾಟೀಲ್

ಯೋಗನಮನ ಕಾರ್ಯಕ್ರಮದ ಬಳಿಕ ಜ್ಞಾನ ಯೋಗಾಶ್ರಮದಲ್ಲಿನ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗುರುಗಳಾದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಜಿಗಳ ಗದ್ದುಗೆ ಪ್ರಣವ ಮಂಟಪದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ಮಾಡಲಾಯಿತು. ಜ್ಞಾನ ಯೋಗಾಶ್ರಮದ ಆಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಕಲ ಪೂಜಾ ವಿಧಿ ವಿಧಾನಗಳನ್ನು ಮಾಡಲಾಯಿತು. ಮಂತ್ರಘೋಷಣೆಗಳೊಂದಿಗೆ ನಡೆದ ಪೂಜೆಯಲ್ಲಿ ಹಲವಾರು ಸ್ವಾಮೀಜಿಗಳು ಹಾಗೂ ನೂರಾರು ಜನರು ಭಾಗಿಯಾಗಿದ್ದರು. ಲಿಂ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ಅಂತಿಮ ಯಾತ್ರೆಗೆ ಬಳಕೆ ಮಾಡಿದ್ದ ಪೆಟ್ಟಿಗೆಯನ್ನು ವಿವಿಧ ಹೂಗಳಿಂದ ಶೃಂಗರಿಸಿ ಶ್ರೀ ಸಿದ್ದೇಶ್ವರ ಸ್ವಾಮಿಜಿಗಳ ಭಾವಚಿತ್ರವನಿಟ್ಟು ಪೂಜೆ ಮಾಡಲಾಯಿತು.

ಗುರುನಮನ ಕಾರ್ಯಕ್ರಮಕ್ಕೆ ಜಿಲ್ಲೆಯ ಭಕ್ತರಷ್ಟೇಯಲ್ಲಾ ರಾಜ್ಯ ಅಂತಾರಾಜ್ಯ ಹಾಗೂ ವಿವಿಧ ದೇಶಗಳಿಂದಲೂ ಶ್ರೀಗಳ ಶಿಷ್ಯ ವರ್ಗ ಭಕ್ತರು ಆಗಮಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ಡಾ ವಿಶ್ವೇಶ್ವರಯ್ಯ ಅಮೇರಿಕಾದಿಂದ ಆಗಮಿಸಿದ್ದು ಕಂಡು ಬಂತು. ಶ್ರೀಗಳು ಅಮೇರಿಕಾದಲ್ಲಿ ಪ್ರವಚನ ಮಾಡಲು ಹೋಗಿದ್ದ ವೇಳೆ ಡಾ ವಿಶ್ವೇಶ್ವರಯ್ಯ ಶ್ರೀಗಳ ಪ್ರವಚನದಿಂದ ಪ್ರಭಾವಿತರಾಗಿದ್ದಂತೆ. ಈಗಾ ಶ್ರೀಗಳ ಅಗಲಿಕೆಯ ಬಳಿಕ ಗುರುನಮನಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿದ್ದಾಗಿ ಹೇಳಿದ್ದಾರೆ.

ಇನ್ನು ಇಂದು ಸಾಯಂಕಾಲವೂ ವಿಶೇಷ ಕಾರ್ಯಕ್ರಮ ನಡೆಯಲಿವೆ. ಸಾಯಂಕಾಲ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ. ಜ್ಞಾನ ಯೋಗಾಶ್ರಮದಲ್ಲಿ ಹಾಗೂ ಭಕ್ತರು ತಮ್ಮ ತಮ್ಮ ನಿವಾಸಗಳ ಮುಂದೆ ದೀಪ ಹಚ್ಚುವ ಮೂಲಕ ಗುರುನಮನ ಸಲ್ಲಿಸಲಿದ್ದಾರೆ. ಸಾಯಂಕಾಲದ ಸಭೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸವರಾಜ ಪಾಟೀಲ್ ಸೇಡಂ, ಮಾಜಿ ಸಚಿವ ಸಿ ಸಿ ಪಾಟೀಲ್, ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಹಗೂ ಇತರ ನಾಯಕರು ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ